ಕುಟುಂಬ ಹಾಗೂ ಸಿನಿಮಾ ಟೀಂ ಜೊತೆ ಜೊತೆ ಯಶ್ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್

ಯಶ್ ಅವರ ಹುಟ್ಟುಹಬ್ಬವನ್ನು ಆಪ್ತರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಅವರನ್ನು ಅಭಿನಂದಿಸುತ್ತಾ ಇದ್ದಾರೆ. ‘ಟಾಕ್ಸಿಕ್’ ಚಿತ್ರದ ಗ್ಲಿಂಪ್ಸ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅವರ ಭವಿಷ್ಯದ ಸಿನಿಮಾಗಳಾದ ‘ಟಾಕ್ಸಿಕ್’ ಹಾಗೂ ‘ರಾಮಾಯಣದ’ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇದೆ.

ಕುಟುಂಬ ಹಾಗೂ ಸಿನಿಮಾ ಟೀಂ ಜೊತೆ ಜೊತೆ ಯಶ್ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್
ಯಶ್ ಬರ್ತ್​ಡೇ ಸೆಲೆಬ್ರೇಷನ್
Follow us
ರಾಜೇಶ್ ದುಗ್ಗುಮನೆ
|

Updated on:Jan 08, 2025 | 10:14 AM

ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್​ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ ಸಹವಾಸಕ್ಕೆ ಹೋಗದೆ ಫ್ಯಾನ್ಸ್ ಸಾಮಾಜಿಕ ಕೆಲಸಗಳ ಮೂಲಕ ಬರ್ತ್​ಡೇ ಆಚರಿಸುತ್ತಿದ್ದಾರೆ. ಈ ಮಧ್ಯೆ ಯಶ್ ಅವರ ಬರ್ತ್​ಡೇನ ಆಪ್ತರ ಜೊತೆ ಆಚರಿಸಿಕೊಂಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯಶ್ ಅವರು ಸಿನಿಮಾ ಕೆಲಸಗಳಿಂದ ಹುಟ್ಟುಹಬ್ಬದ ದಿನ ಊರಿನಲ್ಲಿ ಇರೋದಿಲ್ಲ ಎಂದು ಈ ಮೊದಲೇ ಹೇಳಿದ್ದರು. ಅವರು ಗೋವಾದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಲ್ಲಿ ಆಪ್ತರು ಹಾಗೂ ಕುಟುಂಬದವರ ಜೊತೆ ಯಶ್ ಅವರು ಬರ್ತ್​ಡೇ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

ಯಶ್ ಅವರ ಜೊತೆ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕ ವೆಂಕಟ್ ನಾರಾಯಣ್, ಯಶ್ ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಈ ಬಾರಿ ಯಶ್ ಅವರು ಅಭಿಮಾನಿಗಳ ಜೊತೆ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:  ರಾಕಿಂಗ್ ಸ್ಟಾರ್ ಒಟ್ಟೂ ಆಸ್ತಿ ಎಷ್ಟು? ಅವರ ಕಾರ್ ಕಲೆಕ್ಷನ್ ಹೇಗಿದೆ?

ಯಶ್ ಮುಂಬರುವ ಸಿನಿಮಾಗಳು

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇಂದು ಬೆಳಿಗ್ಗೆ ಚಿತ್ರದ ಗ್ಲಿಂಪ್ಸ್ ರಿಲೀಸ್ ಆಗಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ಅವರು ಹಿಂದಿಯ ‘ರಾಮಾಯಣ’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಅವರು ನಿರ್ಮಾಪಕರೂ ಹೌದು. ಅವರು ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಕೆಲಸಗಳು ವಿಳಂಬ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:52 am, Wed, 8 January 25

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?