ನಟ ಯಶ್ ಅವರ ಅಭಿಮಾನಿಗಳ ಪಾಲಿಗೆ ಇಂದು (ಜನವರಿ 8) ಹಬ್ಬ. ಏಕೆಂದರೆ ಇಂದು ಅವರ ನೆಚ್ಚಿನ ನಟನ ಬರ್ತ್ಡೇ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಾರತುರಾಯಿಗಳ ಸಹವಾಸಕ್ಕೆ ಹೋಗದೆ ಫ್ಯಾನ್ಸ್ ಸಾಮಾಜಿಕ ಕೆಲಸಗಳ ಮೂಲಕ ಬರ್ತ್ಡೇ ಆಚರಿಸುತ್ತಿದ್ದಾರೆ. ಈ ಮಧ್ಯೆ ಯಶ್ ಅವರ ಬರ್ತ್ಡೇನ ಆಪ್ತರ ಜೊತೆ ಆಚರಿಸಿಕೊಂಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯಶ್ ಅವರು ಸಿನಿಮಾ ಕೆಲಸಗಳಿಂದ ಹುಟ್ಟುಹಬ್ಬದ ದಿನ ಊರಿನಲ್ಲಿ ಇರೋದಿಲ್ಲ ಎಂದು ಈ ಮೊದಲೇ ಹೇಳಿದ್ದರು. ಅವರು ಗೋವಾದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲಿಯೇ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಲ್ಲಿ ಆಪ್ತರು ಹಾಗೂ ಕುಟುಂಬದವರ ಜೊತೆ ಯಶ್ ಅವರು ಬರ್ತ್ಡೇ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
ಯಶ್ ಅವರ ಜೊತೆ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕ ವೆಂಕಟ್ ನಾರಾಯಣ್, ಯಶ್ ಪತ್ನಿ ರಾಧಿಕಾ ಪಂಡಿತ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಇದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಈ ಬಾರಿ ಯಶ್ ಅವರು ಅಭಿಮಾನಿಗಳ ಜೊತೆ ಇರಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ರಾಕಿಂಗ್ ಸ್ಟಾರ್ ಒಟ್ಟೂ ಆಸ್ತಿ ಎಷ್ಟು? ಅವರ ಕಾರ್ ಕಲೆಕ್ಷನ್ ಹೇಗಿದೆ?
ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇಂದು ಬೆಳಿಗ್ಗೆ ಚಿತ್ರದ ಗ್ಲಿಂಪ್ಸ್ ರಿಲೀಸ್ ಆಗಲಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ಅವರು ಹಿಂದಿಯ ‘ರಾಮಾಯಣ’ ಚಿತ್ರದಲ್ಲೂ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರಕ್ಕೆ ಅವರು ನಿರ್ಮಾಪಕರೂ ಹೌದು. ಅವರು ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಕೆಲಸಗಳು ವಿಳಂಬ ಆಗಲಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 8:52 am, Wed, 8 January 25