AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ರಾಕಿಂಗ್ ಸ್ಟಾರ್​ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷ! ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​

ರಾಕಿಂಗ್​ ಸ್ಟಾರ್​ ಯಶ್​: ರಾಕಿಂಗ್​ ಸ್ಟಾರ್​ ಎಂದೇ ಹೆಸರು ಪಡೆದು ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಬಾಚಿಕೊಂಡ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷಗಳಾಗಿದೆ.

Rocking Star Yash: ರಾಕಿಂಗ್ ಸ್ಟಾರ್​ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷ! ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​
ರಾಕಿಂಗ್​ ಸ್ಟಾರ್ ಯಶ್​
TV9 Web
| Edited By: |

Updated on:Jul 19, 2021 | 12:33 PM

Share

ರಾಕಿಂಗ್​ ಸ್ಟಾರ್​ ಎಂದೇ ಹೆಸರು ಪಡೆದು ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಬಾಚಿಕೊಂಡ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷಗಳಾಗಿದೆ. ಈ ಖುಷಿಯಲ್ಲಿ ಅಭಿಮಾನಿಗಳೆಲ್ಲ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ. ತಮ್ಮ ನೆಚ್ಚಿನ ನಟನ ಡಿಫರೆಂಟ್​ ಲುಕ್​ನ ಫೋಟೋದ ಜತೆಗೆ ಕಾಮನ್​ ಡಿಪಿ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ.

‘13ಇಯರ್ಸ್​ಆಫ್​ಯಶ್​ಯಿಸಂಸಿಡಿಪಿ’ (#13YearsOfYASHismCDP) ಎಂಬ ಹ್ಯಾಶ್​ಟ್ಯಾಗ್​ನೊಂದಿಗೆ ಫೋಟೋ ಹರಿಬಿಡಲಾಗಿದೆ. ಕೇವಲ ಕನ್ನಡದ ಅಭಿಮಾನಿಗಳೊಂದೇ ಅಲ್ಲದೇ ತೆಲುಗು, ತಮಿಳು ಚಿತ್ರದ ಅಭಿಮಾನಿಗಳು ಸಹ ಹ್ಯಾಶ್​ಟ್ಯಾಗ್​ನೊಂದಿಗೆ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳೆಲ್ಲ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ರಾಕಿಂಗ್ ಸ್ಟಾರ್​ಗೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ. ಕಾಮನ್​ ಡೀಪಿ ಹಂಚಿಕೊಳ್ಳುವ ಮೂಲಕ ಶುಭ ಹಾರೈಕೆಗಳು ಬಂದಿವೆ. ಅಭಿಮಾನಿಗಳೆಲ್ಲ ತಮಿಗಿಷ್ಟವಾದ ಯಶ್​ ಸಕತ್​ ಸ್ಟೈಲ್ ಫೋಟೋಗಳನ್ನು ಸಹ ಹಂಚಿಕೊಂಡು ಹ್ಯಾಶ್​ಟ್ಯಾಗ್​ನೊಂದಿಗೆ ಸಂಭ್ರಮಿಸುತ್ತಿದ್ದಾರೆ.​ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​ದೇ ಹವಾ.

ಇನ್ನು, ಕೆಜಿಎಫ್​ 2 ಚಿತ್ರೀಕರಣ ಇನ್ನೇನು ಸ್ವಲ್ಪ ಬಾಕಿ ಇದೆ. ನಿರ್ದೇಶಕರಾದ ಪ್ರಶಾಂತ್​ ನೀಲ್​ ಅವರು ಸದ್ಯದಲ್ಲೇ ಶೂಟಿಂಗ್​ ಮಾಡುವುದಾಗಿ ಹೇಳಿದ್ದರು. ಇನ್ನೇನು ಕೆಜಿಎಫ್​ 2 ಚಿತ್ರ ಕೂಡ ತೆರೆಕಾಣಲಿದ್ದು ಅಭಿಮಾನಿಗಳೆಲ್ಲ ಚಿತ್ರ ತೆರೆಕಾಣಲು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಮುಖಾಮುಖಿ ಆಗಲಿದ್ದಾರಾ ಯಶ್​-ಅಲ್ಲು ಅರ್ಜುನ್​? ಪ್ಯಾನ್​ ಇಂಡಿಯಾ ಸ್ಟಾರ್​ಗಳ ಹೊಸ ಹಣಾಹಣಿ

KGF Chapter 2: ಯಶ್​ ನಟನೆಯ ‘ಕೆಜಿಎಫ್ ಚಾಪ್ಟರ್ 2’ ರಿಲೀಸ್​ ಬಗ್ಗೆ ಮಹತ್ವದ ಘೋಷಣೆ ಮಾಡಿದ ಪ್ರಶಾಂತ್ ನೀಲ್

Published On - 12:16 pm, Mon, 19 July 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?