‘ಸಿಲ್ಲಿ ಲಲ್ಲಿ’ ಪ್ರಸಾರದ ಸಂದರ್ಭದಲ್ಲಿ ಹೇಗಿದ್ರು ನೋಡಿ ಯಶ್; ಹಳೆಯ ವಿಡಿಯೋ ವೈರಲ್

ಯಶ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿದರು. ಅವರು ‘ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದರು. ಈ ಧಾರಾವಾಹಿಯ ಕ್ಲಿಪ್​ಗಳು ವೈರಲ್ ಆಗುತ್ತಿವೆ. ಇದನ್ನು ಈಗ ಅವರ ಅಭಿಮಾನಿಗಳು ವೈರಲ್ ಮಾಡುತ್ತಿದ್ದಾರೆ.

‘ಸಿಲ್ಲಿ ಲಲ್ಲಿ’ ಪ್ರಸಾರದ ಸಂದರ್ಭದಲ್ಲಿ ಹೇಗಿದ್ರು ನೋಡಿ ಯಶ್; ಹಳೆಯ ವಿಡಿಯೋ ವೈರಲ್
ಯಶ್
Updated By: ರಾಜೇಶ್ ದುಗ್ಗುಮನೆ

Updated on: May 04, 2024 | 8:26 AM

ರಾಕಿಂಗ್ ಸ್ಟಾರ್ ಯಶ್ (Yash) ಅವರು ಇಂದು ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರಿಗೆ ಬೇಡಿಕೆ ಇದೆ. ಹಿಂದಿ ಸಿನಿಮಾನ ನಿರ್ಮಾಣ ಮಾಡುವಷ್ಟು ಶಕ್ತಿ ಅವರಿಗೆ ಇದೆ. ಹಿಂದಿಯಲ್ಲಿ ‘ರಾಮಾಯಣ’ ಸಿನಿಮಾನ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಅವರು ಸಾಕಷ್ಟು ಶ್ರಮ ಹಾಕಿದ್ದಾರೆ. ಯಶ್ ರಾತ್ರೋ ರಾತ್ರಿ ಸ್ಟಾರ್ ಆದವರಲ್ಲ. ಈಗ ಅವರ ಹಳೆಯ ಕ್ಲಿಪ್ ಒಂದು ವೈರಲ್ ಆಗಿದೆ.

ಯಶ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿದರು. ಅವರು ‘ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದರು. ಈ ಧಾರಾವಾಹಿಯ ಕ್ಲಿಪ್​ಗಳು ವೈರಲ್ ಆಗುತ್ತಿವೆ. ಇದನ್ನು ಈಗ ಅವರ ಅಭಿಮಾನಿಗಳು ವೈರಲ್ ಮಾಡುತ್ತಿದ್ದಾರೆ. ಅವರ ಧ್ವನಿ ಆಗ ಹೇಗಿತ್ತೋ ಈಗಲೂ ಹಾಗೆಯೇ ಇದೆ ಎಂದು ಅನೇಕರು ಹೇಳಿದ್ದಾರೆ.

ಇ-ಟಿವಿಯಲ್ಲಿ ‘ಸಿಲ್ಲಿ ಲಲ್ಲಿ’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಅಂದಿನ ಕಾಲಕ್ಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಧಾರಾವಾಹಿ ಇದು. ಪಕ್ಕಾ ಹಾಸ್ಯ ಶೈಲಿಯಲ್ಲಿ ಇದು ಮೂಡಿಬಂದಿತ್ತು. ಸಿಹಿ-ಕಹಿ ಚಂದ್ರು ಅವರು ಈ ಧಾರಾವಾಹಿನ ನಿರ್ದೇಶನ ಮಾಡಿದ್ದರು. ಇದನ್ನು ನೋಡಿ ಇಷ್ಟಪಟ್ಟ ಅನೇಕರಿದ್ದಾರೆ. ಈ ಧಾರಾವಾಹಿಯ ಕ್ಲಿಪ್​ಗಳನ್ನು ಯೂಟ್ಯೂಬ್​ನಲ್ಲಿ ನೋಡಿ ಖುಷಿಪಡುವ ಅನೇಕರಿದ್ದಾರೆ.

ಯಶ್ ಹಳೆಯ ವಿಡಿಯೋ

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಕೆಜಿಎಫ್ 2’ ಬಳಿಕ ಅವರು ಒಪ್ಪಿಕೊಂಡಿರೋ ಮೊದಲ ಸಿನಿಮಾ. ಇದು ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗುತ್ತಿದೆ. ಮಲಯಾಳಂನ ನ್ಯಾಷನಲ್ ಅವಾರ್ಡ್ ವಿನ್ನಿಂಗ್ ನಿರ್ದೇಶಕಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಮುಂದಿನ ವರ್ಷ ಏಪ್ರಿಲ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ:ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಿಂದ ಹೊರನಡೆದ ಕರೀನಾ ಕಪೂರ್​ ಖಾನ್​? 

ಇದರ ಜೊತೆಗೆ ಹಿಂದಿಯ ‘ರಾಮಾಯಣ’ ಸಿನಿಮಾದಲ್ಲೂ ಯಶ್ ನಟಿಸುತ್ತಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ರಣಬೀರ್ ಕಪೂರ್ ರಾಮನ ಪಾತ್ರ ಮಾಡಿದರೆ, ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರವನ್ನು ಯಶ್ ಅವರೂ ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:20 am, Sat, 4 May 24