AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಗಮನ ಸೆಳೆದ ಹೊಸ ಲುಕ್

ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಪಾತ್ರಕ್ಕಾಗಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್ 2’ ನಂತರ ಉದ್ದ ಕೂದಲು, ಗಡ್ಡ ಬಿಟ್ಟಿದ್ದ ಯಶ್, ಈಗ ಶಾರ್ಟ್ ಹೇರ್ ಹಾಗೂ ಸಣ್ಣ ಗಡ್ಡದಲ್ಲಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಮುಂಬೈನಲ್ಲಿ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾದ ಈ ಹೊಸ ಲುಕ್ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

ರಾಧಿಕಾ ಜೊತೆ ಮುಂಬೈನಲ್ಲಿ ಯಶ್ ಸುತ್ತಾಟ; ಗಮನ ಸೆಳೆದ ಹೊಸ ಲುಕ್
ರಾಧಿಕಾ-ಯಶ್
ರಾಜೇಶ್ ದುಗ್ಗುಮನೆ
|

Updated on: Mar 07, 2026 | 6:59 AM

Share

ರಾಕಿಂಗ್ ಸ್ಟಾರ್ ಯಶ್ ಅವರು ಹಲವು ವರ್ಷಗಳ ಬಳಿಕ ಪ್ರೇಕ್ಷರ ಎದುರು ಹೊಸ ಲುಕ್​​ನಲ್ಲಿ ಬಂದಿದ್ದಾರೆ. ‘ಕೆಜಿಎಫ್ 2’ ಸಿನಿಮಾ (KGF 2 Movie) ಕೆಲಸ ಆರಂಭ ಆದಾಗಿನಿಂದಲೂ ಅವರು ಉದ್ದನೆಯ ಗಡ್ಡ ಹಾಗೂ ಉದ್ದ ಕೂದಲು ಬಿಟ್ಟಿದ್ದರು. ಅದೇ ರೀತಿಯ ಲುಕ್ ‘ಟಾಕ್ಸಿಕ್’ ಚಿತ್ರದಲ್ಲೂ ಮುಂದುವರಿಯಿತು. ಈ ಚಿತ್ರದ ‘ಟಿಕೆಟ್’ ಹೆಸರಿನ ಪಾತ್ರದ ಲುಕ್​​ಗಾಗಿ ಅವರು ಗಡ್ಡ ಹಾಗೂ ಕೂದಲನ್ನು ಕತ್ತರಿಸಿ ಸಣ್ಣದಾಗಿಸಿಕೊಂಡಿದ್ದಾರೆ. ಈಗ ಈ ಲುಕ್​​ನ ಅನಾವರಣ ಆಗಿರುವುದರಿಂದ ಯಶ್ ಅದನ್ನು ಸಾರ್ವಜನಿಕವಾಗಿ ತೋರಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದಾರೆ ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಮಧ್ಯೆ ಯಶ್ ಮುಂಬೈನಲ್ಲಿ ಸಮಯ ಕಳೆಯುತ್ತಿದ್ದಾರೆ. ಅವರು ‘ಟಾಕ್ಸಿಕ್’ ಚಿತ್ರದ ಹಿಂದಿ ಡಬ್ಬಿಂಗ್ ಬಗ್ಗೆ ಗಮನಹರಿಸುತ್ತಿದ್ದಾರೆ.

ಯಶ್ ರೆಸ್ಟೋರೆಂಟ್  ಹೊರ ಭಾಗದಲ್ಲಿ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಶಾರ್ಟ್ ಹೇರ್ ಹಾಗೂ ಸಣ್ಣದಾದ ಗಡ್ಡದಲ್ಲಿ ಕಾಣಿಸಿಕೊಂಡರು. ಈ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಯಶ್ ಫ್ಯಾನ್ಸ್ ಖುಷಿಯಾಗಿದ್ದಾರೆ. ಹಲವು ವರ್ಷಗಳ ಬಳಿಕ ಅವರನ್ನು ಹೊಸ ಅವತಾರದಲ್ಲಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಯಶ್ ಜೊತೆ ರಾಧಿಕಾ ಕೂಡ ಇದ್ದರು.

ಈ ಮೊದಲು ಯಶ್ ಮುಂಬೈ ಬೀದಿಗಳಲ್ಲಿ ಸುತ್ತಾಡಿದ್ದರು. ಆ ವೇಳೆಗಾಗಲೇ ಯಶ್ ಲುಕ್ ಬದಲಸಿಕೊಂಡಾಗಿತ್ತು. ಹೀಗಾಗಿ, ಅದನ್ನು ತೋರಿಸಬಾರದು ಎಂದು ಯಶ್ ಅವರು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದರು. ಆದರೆ, ಈಗ ಟಿಕೆಟ್ ಪಾತ್ರದ ಲುಕ್ ರಿವೀಲ್ ಆಗಿರುವುದರಿಂದ ಅವರು ರಾಜಾರೋಶವಾಗಿ ಹೊಸ ಲುಕ್ ಅಲ್ಲಿ ಓಡಾಡುತ್ತಿದ್ದಾರೆ.

ಇದನ್ನೂ ಓದಿ: ಕೊನೇ ಕ್ಷಣದಲ್ಲಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಯಶ್; ಟಾಕ್ಸಿಕ್ ಸಿನಿಮಾ ರಿಲೀಸ್ ಮುಂದಕ್ಕೆ 

ಯಶ್ ಅವರ ಅಭಿಮಾನಿ ಬಳಗ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿಲ್ಲ. ರಾಕಿ ಭಾಯ್ ಹೆಸರು ಭಾರತಾದ್ಯಂತ ಚರ್ಚೆಯಲ್ಲಿದೆ. ಮುಂಬೈ ಬೀದಿಗಳಲ್ಲಿ ಓಡಾಡಿದರೂ ಪಾಪರಾಜಿಗಳು ಮುತ್ತಿಕೊಂಡು, ‘ಯಶ್ ಸರ್ ಯಶ್ ಸರ್’ ಎಂದು ಕೂಗುತ್ತಾರೆ. ಇದು ಯಶ್ ಅವರ ಜನಪ್ರಿಯತೆಯನ್ನು ತೋರಿಸುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ