Rocking Star Yash: ಯಶ್​ ಮನೆಗೆ ಬಂತು ಹೊಸ ಐಷಾರಾಮಿ ಕಾರು; ಈ ದುಬಾರಿ ಕಾರಿನ ಬೆಲೆ ಎಷ್ಟು ಕೋಟಿ ರೂ.?

Yash New Car: ಹೊಸ ಕಾರು ಖರೀದಿಸಿರುವ ಯಶ್​ಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅವರು ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

Rocking Star Yash: ಯಶ್​ ಮನೆಗೆ ಬಂತು ಹೊಸ ಐಷಾರಾಮಿ ಕಾರು; ಈ ದುಬಾರಿ ಕಾರಿನ ಬೆಲೆ ಎಷ್ಟು ಕೋಟಿ ರೂ.?
ಯಶ್​ ಹೊಸ ಕಾರು
Follow us
ಮದನ್​ ಕುಮಾರ್​
|

Updated on: Jun 15, 2023 | 2:38 PM

ನಟ ಯಶ್​ (Yash) ಅವರು ಕೇವಲ ಸ್ಯಾಂಡಲ್​ವುಡ್​ಗೆ ಸೀಮಿತ ಆಗಿಲ್ಲ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆದ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಿದೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುವ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಅದಕ್ಕೆ ತಕ್ಕಂತೆ ಅವರ ಲೈಫ್​ಸ್ಟೈಲ್​ ಕೂಡ ಬದಲಾಗಿದೆ. ಈಗ ಯಶ್​ ಮನೆಗೆ ಹೊಸ ಐಷಾರಾಮಿ ಕಾರು ಬಂದಿದೆ. ರೇಂಜ್​ ರೋವರ್​ (Range Rover) ಕಾರನ್ನು ‘ರಾಕಿಂಗ್​ ಸ್ಟಾರ್​’ ಯಶ್​ ಖರೀದಿಸಿದ್ದಾರೆ. ಕಪ್ಪು ಬಣ್ಣದ ಕಾರಿನಲ್ಲಿ ಅವರು ಪತ್ನಿ ರಾಧಿಕಾ ಪಂಡಿತ್​ ಜೊತೆ ಸುತ್ತಾಡಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​ ಮತ್ತು ಆಯ್ರಾ ಕೂಡ ಪೋಸ್​ ನೀಡಿದ್ದಾರೆ. ಹೊಸ ಕಾರಿನಲ್ಲಿ ಸುತ್ತಾಡಿದ ವಿಡಿಯೋ (Yash New Car Video) ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

ಹೊಸ ಕಾರು ಖರೀದಿಸಿರುವ ಯಶ್​ಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅವರು ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಕಾಣಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ. ಈ ಹೊಸ ರೇಂಜ್​ ರೋವರ್​ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ! ಅನೇಕ ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿವೆ. ಯಶ್​ ನಟಿಸಲಿರುವ ಹೊಸ ಸಿನಿಮಾ ಇನ್ನಷ್ಟೇ ಸೆಟ್ಟೇರಬೇಕಿದೆ. ಅದಕ್ಕೂ ಮುನ್ನವೇ ಅವರು ದುಬಾರಿ ಬೆಲೆಯ ಕಾರನ್ನು ಖರೀದಿಸಿ ಸುದ್ದಿ ಆಗಿದ್ದಾರೆ.

ಯಶ್​ ಅವರ 19ನೇ ಸಿನಿಮಾ ಬಗ್ಗೆ ತುಂಬ ಕುತೂಹಲ ಇದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ? ಬಂಡವಾಳ ಹೂಡಲಿರುವುದು ಯಾರು? ಸಿನಿಮಾದ ಶೀರ್ಷಿಕೆ ಏನು ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಫ್ಯಾನ್ಸ್​ ಕಾತುರರಾಗಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಗೆಲುವಿನ ಬಳಿಕ ಅವರು ದೀರ್ಘವಾದ ಬ್ರೇಕ್​ ಪಡೆದುಕೊಂಡಿದ್ದಾರೆ. ಸೂಕ್ತ ತಯಾರಿಯೊಂದಿಗೆ ಹೊಸ ಸಿನಿಮಾಗೆ ಚಾಲನೆ ನೀಡಬೇಕು ಎಂಬುದು ಅವರ ಉದ್ದೇಶ. ಹಾಗಾಗಿ ಹೊಸ ಚಿತ್ರ ಅನೌನ್ಸ್ ಆಗುವ ಸಮಯ ಹಿಡಿಯುತ್ತಿದೆ.

ಇದನ್ನೂ ಓದು: Yash: ಯಶ್​ಗಾಗಿ ದೊಡ್ಡ ಕಥೆ ಬರೆದಿದ್ದೆ, ಆದರೆ…; ನರ್ತನ್ ಓಪನ್ ಮಾತು

ಬಾಲಿವುಡ್​ನಲ್ಲಿ ಖ್ಯಾತ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳಲಿರುವ ರಾಮಾಯಣ ಆಧಾರಿತ ಸಿನಿಮಾ ಬಗ್ಗೆ ಹತ್ತಾರು ಗಾಸಿಪ್​ಗಳು ಹರಿದಾಡುತ್ತಿವೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಸೀತೆ ಪಾತ್ರದಲ್ಲಿ ಆಲಿಯಾ ಭಟ್​ ಹಾಗೂ ರಾಮನ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸುತ್ತಾರೆ ಎನ್ನಲಾಗುತ್ತಿದೆ. ಅದೇ ರೀತಿ ರಾವಣನ ಪಾತ್ರವನ್ನು ಯಶ್​ ಅವರಿಗೆ ನೀಡಲಾಗುವುದು ಎಂಬ ಸುದ್ದಿ ಕೂಡ ಹರಿದಾಡಿತ್ತು. ಆದರೆ ಆ ಪಾತ್ರವನ್ನು ಮಾಡಲು ಯಶ್​ ಒಪ್ಪಿಕೊಂಡಿಲ್ಲ ಎಂದು ಇತ್ತೀಚೆಗೆ ಮಾಹಿತಿ ಕೇಳಿಬಂದಿದೆ. ‘ರಾಕಿಂಗ್​ ಸ್ಟಾರ್​’ ಅವರು ರಾವಣನ ಪಾತ್ರವನ್ನು ತಿರಸ್ಕರಿಸಿದ್ದು ಒಳ್ಳೆಯದೇ ಆಯಿತು ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ