AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿದ ಯಶ್; ಏರ್‌ಪೋರ್ಟ್ ವಿಡಿಯೋ ವೈರಲ್

'ಟಾಕ್ಸಿಕ್' ಸಿನಿಮಾ ಬಿಡುಗಡೆಯಾಗಿ ಮಿಶ್ರಪ್ರತಿಕ್ರಿಯೆ ಪಡೆದ ಬಳಿಕ ರಾಕಿಂಗ್ ಸ್ಟಾರ್ ಯಶ್ ಕುಟುಂಬ ಸಮೇತ ವಿದೇಶಿ ಪ್ರವಾಸಕ್ಕೆ ತೆರಳಿದ್ದರು. ಇದೀಗ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿರುವ ಯಶ್ ಹಾಗೂ ರಾಧಿಕಾ ಏರ್‌ಪೋರ್ಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ವಿದೇಶಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿದ ಯಶ್; ಏರ್‌ಪೋರ್ಟ್ ವಿಡಿಯೋ ವೈರಲ್
ಯಶ್
ರಾಜೇಶ್ ದುಗ್ಗುಮನೆ
|

Updated on: Sep 10, 2026 | 8:57 AM

Share

ಮುಖ್ಯಾಂಶಗಳು

  • ವಿದೇಶಿ ಪ್ರವಾಸ ಅಂತ್ಯ
  • ಬೆಂಗಳೂರಿಗೆ ಮರಳಿದ ರಾಕಿಂಗ್ ಸ್ಟಾರ್ ಯಶ್ ಕುಟುಂಬ
  • ಏರ್‌ಪೋರ್ಟ್‌ನಲ್ಲಿ ಸೆರೆಯಾಯ್ತು ವಿಡಿಯೋ 

ಆಗಸ್ಟ್ 26ರಂದು ರಿಲೀಸ್ ಆಗಿದ್ದ ‘ಟಾಕ್ಸಿಕ್’ ಸಿನಿಮಾ (Toxi Movie) ಮಿಶ್ರಪ್ರತಿಕ್ರಿಯೆ ಪಡೆದುಕೊಂಡ ಬಳಿಕ, ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬದೊಂದಿಗೆ ವಿದೇಶಕ್ಕೆ ಪ್ರವಾಸ ತೆರಳಿದ್ದರು. ಕೆಲ ದಿನಗಳ ಕಾಲ ಅಲ್ಲಿಯೇ ಇದ್ದ ಯಶ್, ಈಗ ತಮ್ಮ ಕುಟುಂಬ ಸಮೇತ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ವಿಡಿಯೋನ ಫ್ಯಾನ್ಸ್ ವೈರಲ್ ಮಾಡಿದ್ದಾರೆ. ನಗುಮುಖದಲ್ಲೇ ಯಶ್ ಬೆಂಗಳೂರಿಗೆ ಮರಳಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಶ್, ಪತ್ನಿ ರಾಧಿಕಾ ಪಂಡಿತ್ ಆಗಮಿಸಿದ ದೃಶ್ಯಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿವೆ. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಲ್ಲಿನ ಸಿಬ್ಬಂದಿ ಹಾಗೂ ಫ್ಯಾನ್ಸ್ ಸೆಲ್ಫಿಗೆ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

‘ಟಾಕ್ಸಿಕ್’ ಸಿನಿಮಾದ ಬಗ್ಗೆ ಯಶ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆ ಹುಸಿಯಾಗಿದೆ. ಈ ಬಗ್ಗೆ ಅವರಿಗೆ ಬೇಸರ ಇದೆ. ಆದರೆ, ಸೋಲನ್ನು ನೆನೆದು ಕೊರಗುತ್ತಾ ಕೂರುವವರು ಅವರಲ್ಲ. ಹೀಗಾಗಿ, ಒಂದು ಪ್ರವಾಸಕ್ಕೆ ತೆರಳಿ ಆ ಬಳಿಕ ಮುಂದಿನ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಫಲಿತಾಂಶದ ಬಗ್ಗೆ ಯಶ್ ಮೊದಲ ರಿಯಾಕ್ಷನ್ ಏನು? ಕೊನೆಗೂ ಸಿಕ್ಕಿತು ಉತ್ತರ

ಟಾಕ್ಸಿಕ್ ಗಳಿಸಿದ್ದೆಷ್ಟು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ 15ನೇ ದಿನ ಭಾರತದಲ್ಲಿ 1,322 ಪ್ರದರ್ಶನಗಳಿಂದ ಕೇವಲ 60 ಲಕ್ಷ ಗಳಿಸಿದೆ. ಇದರೊಂದಿಗೆ ದೇಶಾದ್ಯಂತ ಚಿತ್ರದ ಒಟ್ಟು ಗ್ರ್ಯಾಸ್ ಕಲೆಕ್ಷನ್ 295.82 ಕೋಟಿಗೆ ತಲುಪಿದ್ದು, ನೆಟ್ ಗಳಿಕೆ 247.85 ಕೋಟಿಯಷ್ಟಾಗಿದೆ. ಓವರ್‌ಸೀಸ್ ಗ್ರ್ಯಾಸ್ ಕಲೆಕ್ಷನ್ 43.50 ಕೋಟಿ ರೂಪಾಯಿಗೆ ತಲುಪಿದ್ದು, ಚಿತ್ರದ ಒಟ್ಟಾರೆ ವಿಶ್ವಾದ್ಯಂತ ಗ್ರಾಸ್ ಗಳಿಕೆ 339.32 ಕೋಟಿಗೆ ತಲುಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ