AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಲಿಫೋರ್ನಿಯಾದಲ್ಲಿ ಯಶ್ ನೋಡಿ ‘ಡ್ಯಾಡಿಸ್ ಹೋಂ’ ಎಂದ ಫ್ಯಾನ್ಸ್

'ರಾಮಾಯಣ' ಸಿನಿಮಾದ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ರಾಕಿಂಗ್ ಸ್ಟಾರ್ ಯಶ್, ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್‌ನಲ್ಲಿ ಭಾರಿ ಸದ್ದು ಮಾಡಿದ್ದಾರೆ. ಯಶ್ ಅವರನ್ನು ನೋಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಭಾರತೀಯ ಅಭಿಮಾನಿಗಳು ಮುಗಿಬಿದ್ದಿದ್ದು, ಇದೇ ವೇಳೆ ಅವರ ಮುಂದಿನ ಚಿತ್ರ 'ಟಾಕ್ಸಿಕ್' ನ ಪ್ರಸಿದ್ಧ 'ಡ್ಯಾಡಿಸ್ ಹೋಂ' ಡೈಲಾಗ್ ಕೂಡ ಜಾಗತಿಕ ವೇದಿಕೆಯಲ್ಲಿ ಭಾರಿ ಸದ್ದು ಮಾಡಿದೆ.

ಕ್ಯಾಲಿಫೋರ್ನಿಯಾದಲ್ಲಿ ಯಶ್ ನೋಡಿ ‘ಡ್ಯಾಡಿಸ್ ಹೋಂ’ ಎಂದ ಫ್ಯಾನ್ಸ್
ಯಶ್
ರಾಜೇಶ್ ದುಗ್ಗುಮನೆ
|

Updated on: Jul 24, 2026 | 1:22 PM

Share

ಮುಖ್ಯಾಂಶಗಳು

  • ಕಾಮಿಕ್ ಕಾನ್‌ನಲ್ಲಿ ರಾಕಿಂಗ್ ಸ್ಟಾರ್ ಅಬ್ಬರ
  • ಅಮೆರಿಕದಲ್ಲಿ ನೆರೆದಿದ್ದ ಫ್ಯಾನ್ಸ್ ಮುಗಿಬಿದ್ದಿದ್ದೇಕೆ?
  • ಸೆಲ್ಫಿ ಹಬ್ಬ ಸೃಷ್ಟಿಸಿದ ಯಶ್

ಕನ್ನಡ ಚಿತ್ರರಂಗದ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಅಂತರರಾಷ್ಟ್ರೀಯ ಪ್ರಚಾರಕ್ಕಾಗಿ ಅಮೆರಿಕಕ್ಕೆ ತೆರಳಿರುವ ಯಶ್, ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ವಿಶ್ವಪ್ರಸಿದ್ಧ ‘ಸ್ಯಾನ್ ಡಿಯಾಗೋ ಕಾಮಿಕ್ ಕಾನ್’ (San Diego Comic-Con) ಈವೆಂಟ್‌ನಲ್ಲಿ ಭಾಗಿಯಾಗಿದ್ದಾರೆ. ಈ ವೇದಿಕೆಯಲ್ಲಿ ಯಶ್ ಅವರು ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ನೂರಾರು ಭಾರತೀಯ ಮತ್ತು ಜಾಗತಿಕ ಅಭಿಮಾನಿಗಳಲ್ಲಿ ಭಾರಿ ಹರ್ಷೋದ್ಗಾರ ಮುಗಿಲು ಮುಟ್ಟಿದೆ.

ವೇದಿಕೆಯ ಮುಂಭಾಗದಲ್ಲಿ ನೆರೆದಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದ್ದಲ್ಲದೆ, ಅವರೊಂದಿಗೆ ಸೆಲ್ಫಿ ಪಡೆದುಕೊಳ್ಳಲು ಮುಗಿಬಿದ್ದ ದೃಶ್ಯಗಳು ವೀಡಿಯೊದಲ್ಲಿ ಸೆರೆಯಾಗಿವೆ. ಅಲ್ಲಿದ್ದವರೆಲ್ಲರೂ ತಮ್ಮ ಮೊಬೈಲ್ ಕ್ಯಾಮೆರಾಗಳನ್ನು ಆನ್ ಮಾಡಿ ಯಶ್ ಅವರ ಫೋಟೋ ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ತೀವ್ರ ಉತ್ಸಾಹ ತೋರಿದ್ದಾರೆ.

ಸದ್ದು ಮಾಡಿದ ‘ಡ್ಯಾಡಿಸ್ ಹೋಂ’ ಡೈಲಾಗ್

ಈ ಜಾಗತಿಕ ವೇದಿಕೆಯಲ್ಲಿ ಯಶ್ ಭಾಗವಹಿಸಿರುವುದು ಕೇವಲ ‘ರಾಮಾಯಣ’ ಚಿತ್ರದ ಪ್ರಚಾರಕ್ಕಾಗಿ. ಆದರೆ, ಈ ವೇದಿಕೆ ಮೇಲೆ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರ ಹೈಪ್ ಸೃಷ್ಟಿಸಿದೆ.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಯಶ್ ಅವರ ‘ಟಾಕ್ಸಿಕ್’ ಸಿನಿಮಾದ ಸೂಪರ್ ಹಿಟ್ ಡೈಲಾಗ್ ಆದ ‘ಡ್ಯಾಡಿಸ್ ಹೋಂ’ 2ಎಂಬ ಒನ್-ಲೈನರ್ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಭಿಮಾನಿಗಳ ವಲಯದಲ್ಲಿ ಮತ್ತೆ ಜೋರಾಗಿ ಸದ್ದು ಮಾಡುತ್ತಿದೆ. ರಾಕಿ ಭಾಯ್ ಅವರ ಜಾಗತಿಕ ಮಟ್ಟದ ಈ ಕ್ರೇಜ್ ನೋಡಿ ಕನ್ನಡ ಚಿತ್ರರಂಗ ಹಾಗೂ ಅವರ ಅಭಿಮಾನಿಗಳು ಮತ್ತೊಮ್ಮೆ ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರ್ಮಾಪಕ ಕೆವಿಎನ್ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಯಶ್ ನಿರ್ಮಾಪಕ ಕೂಡ ಹೌದು. ಗೀತು ಮೋಹನ್​ದಾಸ್ ಅವರ ನಿರ್ಮಾಣ ಚಿತ್ರಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ