AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದಿನ ದೊಡ್ಡದಾಗಿ ಬೆಳಿತೀನಿ’; ಹೇಳಿದ್ದನ್ನು ಮಾಡಿ ತೋರಿಸಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರ 'ಟಾಕ್ಸಿಕ್' ಸಿನಿಮಾ ವಿಶ್ವಮಟ್ಟದಲ್ಲಿ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಸಣ್ಣ ಮಟ್ಟದಿಂದ ಬೆಳೆದು ಬಂದ ಯಶ್ ಹಳೆಯ ಸಂದರ್ಶನದಲ್ಲಿ ತಮ್ಮ ಪ್ರಯಾಣ ನೆನಪಿಸಿಕೊಂಡಿದ್ದಾರೆ. ಭಾರಿ ಬಜೆಟ್, ವಿವಾದಿತ ದೃಶ್ಯಗಳು ಮತ್ತು ಹಾಲಿವುಡ್ ಮಟ್ಟದ ಮೇಕಿಂಗ್‌ನಿಂದ ಗಮನ ಸೆಳೆದಿರುವ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26ರಂದು ಬಿಡುಗಡೆಯಾಗಲಿದೆ.

‘ಒಂದಿನ ದೊಡ್ಡದಾಗಿ ಬೆಳಿತೀನಿ’; ಹೇಳಿದ್ದನ್ನು ಮಾಡಿ ತೋರಿಸಿದ ಯಶ್
ಯಶ್
ರಾಜೇಶ್ ದುಗ್ಗುಮನೆ
|

Updated on: Jul 11, 2026 | 6:52 PM

Share

ಮುಖ್ಯಾಂಶಗಳು

  • ಸೀರಿಯಲ್‌ನಿಂದ ಜಾಗತಿಕ ಸೂಪರ್ ಸ್ಟಾರ್‌ವರೆಗೆ
  • ರಾಕಿಂಗ್ ಸ್ಟಾರ್ ಯಶ್ ಅವರ ಸಿನಿಮಾ ಪಯಣ
  • ಕೋಟ್ಯಂತರ ಜನರಿಗೆ ಮಾದರಿ ಯಶ್

‘ರಾಕಿಂಗ್ ಸ್ಟಾರ್’ ಯಶ್ (Yash) ಸಾಕಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಅವರ ‘ಟಾಕ್ಸಿಕ್’ ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲು ರೆಡಿ ಆಗಿದೆ. ಈ ಚಿತ್ರದ ಮೂಲಕ ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಯಶ್ ಅವರು ತುಂಬಾನೇ ಸಣ್ಣ ಮಟ್ಟದಿಂದ ಇಲ್ಲಿವರೆಗೆ ಬಂದು ನಿಂತಿದ್ದಾರೆ. ಅವರ ಒಂದ ಹಳೆಯ ಸಂದರ್ಶನವನ್ನು ಫ್ಯಾನ್ಸ್ ನೆನಪಿಸಿಕೊಳ್ಳುತ್ತಿದ್ದಾರೆ.

2012ರಲ್ಲಿ ಯಶ್ ನಟನೆಯ ‘ಲಕ್ಕಿ’ ಸಿನಿಮಾ ರಿಲೀಸ್ ಆಗಿತ್ತು. ಆ ಸಂದರ್ಭದಲ್ಲಿ ಯಶ್ ಹಾಗೂ ರಮ್ಯಾ ಮಧ್ಯೆ ಏನೋ ಕಿರಿಕ್ ಆಗಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಇದನ್ನು ಯಶ್ ತಳ್ಳಿ ಹಾಕಿದ್ದರು. ‘ನನ್ನ ಹಾಗೂ ರಮ್ಯಾ ಮಧ್ಯೆ ಎಲ್ಲವೂ ಸರಿ ಇದೆ’ ಎಂದು ಅವರು ಹೇಳಿದ್ದರು.

ಸೀರಿಯಲ್​ ಸಂದರ್ಭದ ನೆನಪನ್ನು ಯಶ್ ಹಂಚಿಕೊಂಡಿದ್ದರು. ‘ಸೀರಿಯಲ್​​ನಲ್ಲಿ ಇದ್ದಾಗ ಸಂದರ್ಶನ ನಡೆಯುತ್ತಿತ್ತು. ಎಲ್ಲರನ್ನೂ ಮಾತನಾಡಿಸಿದ್ದರು, ನನ್ನನ್ನು ಮಾತನಾಡಿಸಿರಲಿಲ್ಲ. ಬೆಳೆಯುತ್ತೇನೆ, ಆಗ ಇವರೆಲ್ಲ ಸಂದರ್ಶನ ಮಾಡ್ತಾರೆ ಎಂದು ಅಂದುಕೊಂಡಿದ್ದೆ. ಮುಂದೊಂದು ದಿನ ಅದೇ ವ್ಯಕ್ತಿ ಸಂದರ್ಶನ ಬೇಕು ಎಂದು ಸಾಕಷ್ಟು ಬಾರಿ ಕಾಲ್ ಮಾಡಿದ್ದ. ಸುಮಾರು ದಿನ ಕಾದಿದ್ದರು. ಇವತ್ತು ನನ್ ಟೈಮ್, ಮತ್ತೊಂದು ದಿನ ಮತ್ತೊಬ್ಬರ ಟೈಮ್’ ಎಂದಿದ್ದರು ಯಶ್.

ಇದನ್ನೂ ಓದಿ: ‘ಟಾಕ್ಸಿಕ್’ ಚಿತ್ರದಲ್ಲಿ ನಟಿಸಲು ನಯನತಾರಾ ಪಡೆದ ಸಂಭಾವನೆ ಬರೋಬ್ಬರಿ 12 ಕೋಟಿ ರೂ.?

ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಅವರು ಈ ಚಿತ್ರಕ್ಕೆ ನಿರ್ಮಾಪಕ ಕೂಡ ಹೌದು. ಭಾರಿ ಬಜೆಟ್​​ನ ಸಿನಿಮಾ ಹಾಲಿವುಡ್ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಸಿನಿಮಾದ ಟೀಸರ್ ಹಾಗೂ ಹಾಡುಗಳು ಧೂಳೆಬ್ಬಿಸಿವೆ. ಈ ಚಿತ್ರಕ್ಕೆ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಯಶ್ ಜೊತೆ ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿದ್ದಾರೆ. ಆಗಸ್ಟ್ 26ರಂದು ಈ ಚಿತ್ರ ತೆರೆಗೆ ಬರುತ್ತಿದೆ. ಬೋಲ್ಡ್​ ದೃಶ್ಯದ ಕಾರಣಕ್ಕೆ ಈ ಚಿತ್ರ ಚರ್ಚೆಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?