AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ಕ್ಕಾಗಿ ಬಂದ ‘ಆರ್​ಆರ್​ಆರ್’ ಸಿನಿಮಾದ ಪ್ರಮುಖ ತಂತ್ರಜ್ಞ

ಆರ್​ಆರ್​ಆರ್ ಸಿನಿಮಾದ ಆಕ್ಷನ್ ದೃಶ್ಯಗಳು ವಿಶ್ವದರ್ಜೆಯಾಗಿದ್ದವು. ಆ ಸಿನಿಮಾದ ಆಕ್ಷನ್ ವಿಶ್ವಮಟ್ಟದಲ್ಲಿ ಗಮನ ಸೆಳೆಯಿತು. ಆ ಸಿನಿಮಾದ ಆಕ್ಷನ್ ಕೊರಿಯೋಗ್ರಾಫರ್​ಗಳಲ್ಲಿ ಒಬ್ಬರಾದ ಬಲ್ಗೇರಿಯಾದ ಟೂಡೊರ್ ಲ್ಯಾಜರೋವ್ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಪ್ರೀಕ್ವೆಲ್​ಗೆ ಕೆಲಸ ಮಾಡಲಿದ್ದಾರೆ.

‘ಕಾಂತಾರ’ಕ್ಕಾಗಿ ಬಂದ ‘ಆರ್​ಆರ್​ಆರ್’ ಸಿನಿಮಾದ ಪ್ರಮುಖ ತಂತ್ರಜ್ಞ
Follow us
ಮಂಜುನಾಥ ಸಿ.
|

Updated on: Nov 02, 2024 | 5:00 PM

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಭಾರಿ ಹಿಟ್ ಆಗಿದ್ದು ಈಗ ಇತಿಹಾಸ. ಸಿನಿಮಾದ ಪ್ರೀಕ್ವೆಲ್ ನಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ. ‘ಕಾಂತಾರ’ ಸಿನಿಮಾದ ಹತ್ತರಷ್ಟು ಬಜೆಟ್ ಅನ್ನು ಕಾಂತಾರ ಸಿನಿಮಾದ ಪ್ರೀಕ್ವೆಲ್​ ಮೇಲೆ ಹೂಡಿಕೆ ಮಾಡಿದೆ ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ. ಅತ್ಯುತ್ತಮ ಗುಣಮಟ್ಟದ ಕಲಾವಿದರು ಹಾಗೂ ತಂತ್ರಜ್ಞರನ್ನು ಸಿನಿಮಾಕ್ಕೆ ಹೆಕ್ಕಿ ತರುತ್ತಿದ್ದಾರೆ ರಿಷಬ್ ಶೆಟ್ಟಿ. ವಿಎಫ್​ಎಕ್ಸ್ ಹಾಗೂ ಗ್ರಾಫಿಕ್ಸ್ ಕೆಲಸಕ್ಕಾಗಿ ಹಾಲಿವುಡ್​ನ ಜನಪ್ರಿಯ ಸಂಸ್ಥೆಯೊಂದರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಅದರ ಬೆನ್ನಲ್ಲೆ ಇದೀಗ ಹಾಲಿವುಡ್​ನ ಜನಪ್ರಿಯ ಆಕ್ಷನ್ ಕೊರಿಯಾಗ್ರಫರ್ ಒಬ್ಬರನ್ನು ಸಿನಿಮಾ ತಂಡಕ್ಕೆ ಸೇರಿಸಿಕೊಂಡಿದ್ದಾರೆ ರಿಷಬ್ ಶೆಟ್ಟಿ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ವಿಶ್ವದರ್ಜೆಯ ತಂತ್ರಜ್ಞರನ್ನು ಹೊಂದಿತ್ತು. ಅದೇ ಕಾರಣಕ್ಕೆ ವಿಶ್ವವೇ ಮೆಚ್ಚುವಂಥಹಾ ಸಿನಿಮಾ ಅನ್ನು ರಾಜಮೌಳಿ ನೀಡಿದರು. ಸಿನಿಮಾದ ಆಕ್ಷನ್ ದೃಶ್ಯಗಳಂತೂ ಮೈನವಿರೇಳುವ ಮಾದರಿಯಲ್ಲಿದ್ದವು. ಸಿನಿಮಾದ ತೂಕ ಒಂದಾದರೆ ಸಿನಿಮಾದ ಆಕ್ಷನ್​ದು ಮತ್ತೊಂದು ತೂಕ ಎಂಬಂತಿತ್ತು. ಇದೀಗ ‘ಆರ್​ಆರ್​ಆರ್’ ಸಿನಿಮಾಕ್ಕೆ ಆಕ್ಷನ್ ನಿರ್ದೇಶನ ಮಾಡಿದ್ದ ಆಕ್ಷನ್ ಕೊರಿಯೋಗ್ರಾಫರ್ ಅನ್ನು ‘ಕಾಂತಾರ’ ಪ್ರೀಕ್ವೆಲ್​ಗೆ ಆಯ್ಕೆ ಮಾಡಿಕೊಳ್ಳಲಾಗಿದೆ.

ಬಲ್ಗೇರಿಯಾದ ಟೂಡೊರ್ ಲ್ಯಾಜರೋವ್ ಎಂಬುವರು ‘ಆರ್​ಆರ್​ಆರ್’ ಸಿನಿಮಾದ ಆಕ್ಷನ್ ದೃಶ್ಯಗಳಿಗೆ ಕೆಲಸ ಮಾಡಿದ್ದರು. ಎಸ್​ಎಸ್ ರಾಜಮೌಳಿ ಸಹ ಸಂದರ್ಶನವೊಂದರಲ್ಲಿ ಇವರ ಬಗ್ಗೆ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈಗ ಅದೇ ಟೂಡೊರ್ ಲ್ಯಾಜರೋವ್, ‘ಕಾಂತಾರ’ ಸಿನಿಮಾಕ್ಕಾಗಿ ಕೆಲಸ ಮಾಡಲಿದ್ದಾರೆ. ಸಿನಿಮಾ ತಂಡದ ಭಾಗವಾಗಲು ಟೂಡೊರ್ ಲ್ಯಾಜರೋವ್ ಬಲ್ಗೇರಿಯಾದಿಂದ ಕುಂದಾಪುರಕ್ಕೆ ಆಗಮಿಸಿದ್ದಾರೆ. ರಿಷಬ್ ಶೆಟ್ಟಿ ಹಾಗೂ ಟೂಡೊರ್ ಲ್ಯಾಜರೋವ್ ಒಟ್ಟಿಗೆ ಚಿತ್ರ ಸಹ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹೊಸಕೋಟೆ ಅದ್ದೂರಿ ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ

‘ಕಾಂತಾರ’ ಪ್ರೀಕ್ವೆಲ್ ಸಿನಿಮಾದಲ್ಲಿ ಎರಡು ಅತ್ಯಂತ ಪ್ರಮುಖವಾದ ಆಕ್ಷನ್ ದೃಶ್ಯಗಳಿದ್ದು, ಈ ಎರಡೂ ಆಕ್ಷನ್ ಸೀನ್​ಗಳನ್ನು ಟುಡೋರ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಆಕ್ಷನ್ ಸನ್ನಿವೇಶಗಳು ಒಂದಕ್ಕಿಂತಲೂ ಒಂದು ಭಿನ್ನವಾಗಿ ಇರಲಿವೆ. ಈ ಹಿಂದೆ ರಿಷಬ್ ಶೆಟ್ಟಿ ಹಂಚಿಕೊಂಡಿದ್ದ ಚಿತ್ರದಲ್ಲಿ ಅವರು ಕಲರಿಪಯಟ್ಟು ಅಭ್ಯಾಸ ಮಾಡುತ್ತಿದ್ದರು. ಸಿನಿಮಾದ ಒಂದು ಆಕ್ಷನ್ ದೃಶ್ಯದಲ್ಲಿ ಕಲರಿಪಯಟ್ಟು ಸಮರ ಕಲೆಯ ಬಳಕೆ ಮಾಡಲಾಗಿದೆ.

‘ಕಾಂತಾರ’ ಪ್ರೀಕ್ವೆಲ್ ನ ಚಿತ್ರೀಕರಣ ಚಾಲ್ತಿಯಲ್ಲಿದ್ದು ಕೆಲವೇ ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಲಿದೆ. 2025 ರ ಮಧ್ಯದಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ರಿಷಬ್ ಶೆಟ್ಟಿಯ ಹೊರತಾಗಿ ಇನ್ಯಾರ್ಯಾರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಚಿತ್ರೀಕರಣದ ಮಾಹಿತಿಯನ್ನು ಗೌಪ್ಯವಾಗಿ ಇಟ್ಟಿದ್ದಾರೆ ರಿಷಬ್ ಶೆಟ್ಟಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!