ದಕ್ಷಿಣ ಭಾರತದವರ ಅಬ್ಬರಕ್ಕೆ ಮಂಕಾದ ಬಾಲಿವುಡ್; ಅವರಿಗೆ ಕಾಡುತ್ತಿದೆ ಅಭದ್ರತೆ?
ಹಲವು ವರ್ಷಗಳ ಹಿಂದೆ ಬಾಲಿವುಡ್ ಚಿತ್ರಗಳು ವಿಶ್ವ ಮಟ್ಟದಲ್ಲಿ ಹೆಸರು ಮಾಡುತ್ತಿದ್ದವು. ಹಲವು ಹಿಂದಿ ಸಿನಿಮಾಗಳು ಬೇರೆಬೇರೆ ಭಾಷೆಗೆ ಡಬ್ ಆದವು. ಆದರೆ, ಈಗ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ಹಿಂದಿ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡುತ್ತಿವೆ.
ದಕ್ಷಿಣ ಭಾರತದ ಸಿನಿಮಾಗಳ ಅಬ್ಬರ ಜೋರಾಗಿದೆ. ಹಿಂದಿ ಚಿತ್ರರಂಗದಲ್ಲೂ ನಮ್ಮ ಸಿನಿಮಾಗಳು ಪಾರುಪತ್ಯ ಸಾಧಿಸುತ್ತಿವೆ. ಬಾಲಿವುಡ್ ಸಿನಿಮಾಗಳಿಗಿಂತ (Bollywood Movie) ಹಿಂದಿಗೆ ಡಬ್ ಆಗಿ ತೆರೆಕಾಣುತ್ತಿರುವ ದಕ್ಷಿಣ ಭಾರತದ ಸಿನಿಮಾಗಳು (South Indian Movies) ಬಾಕ್ಸ್ ಆಫೀಸ್ನಲ್ಲಿ ಹೆಚ್ಚಿನ ಕಲೆಕ್ಷನ್ ಮಾಡುತ್ತಿವೆ. ಇದರಿಂದ ಸಹಜವಾಗಿಯೇ ಬಾಲಿವುಡ್ ಮಂದಿಗೆ ಅಭದ್ರತೆ ಕಾಡೋಕೆ ಆರಂಭವಾಗಿದೆ ಎನ್ನುವ ಮಾತು ಕೇಳಿಬಂದಿದೆ. ಈ ಮಧ್ಯೆ ಬಾಲಿವುಡ್ ಸಿನಿಮಾಗಳು ಒಳ್ಳೆಯ ಕಮಾಯಿ ಮಾಡುತ್ತಿಲ್ಲ. ಇದರಿಂದ ಬಾಲಿವುಡ್ ಮಂಕಾಗಿದೆ.
ಹಲವು ವರ್ಷಗಳ ಹಿಂದೆ ಬಾಲಿವುಡ್ ಚಿತ್ರಗಳು ವಿಶ್ವ ಮಟ್ಟದಲ್ಲಿ ಹೆಸರು ಮಾಡುತ್ತಿದ್ದವು. ಹಲವು ಹಿಂದಿ ಸಿನಿಮಾಗಳು ಬೇರೆಬೇರೆ ಭಾಷೆಗೆ ಡಬ್ ಆದವು. ಆದರೆ, ಈಗ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ಹಿಂದಿ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡುತ್ತಿವೆ. ಹಲವು ಚಿತ್ರಗಳು 100 ಕೋಟಿ ಕ್ಲಬ್ ಸೇರುತ್ತಿವೆ.
ರಾಜಮೌಳಿ ನಿರ್ದೇಶನದ ‘ಬಾಹುಬಲಿ’, ‘ಬಾಹುಬಲಿ 2’ ಸಿನಿಮಾಗಳು ಹಿಂದಿ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತು. ಆ ಬಳಿಕ ಹಲವು ದಕ್ಷಿಣ ಭಾರತದ ಸಿನಿಮಾಗಳು ಹಿಂದಿಗೆ ಡಬ್ ಆಗಿ ತೆರೆಕಂಡವು. ಇತ್ತೀಚಿನ ವರ್ಷಗಳಲ್ಲಿ ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದೆ.
ಕನ್ನಡದ ‘ಕೆಜಿಎಫ್’ ಸಿನಿಮಾ ಹಿಂದಿ ಬಾಕ್ಸ್ ಆಫೀಸ್ನಲ್ಲಿ 44 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಕನ್ನಡದ ಚಿತ್ರವೊಂದು ಹಿಂದಿಯಲ್ಲಿ ಇಷ್ಟು ದೊಡ್ಡ ಮಟ್ಟದ ಕಲೆಕ್ಷನ್ ಮಾಡಿದ್ದು ಅದೇ ಮೊದಲು. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ತೆಲುಗಿನ ‘ಪುಷ್ಪ’ ಸಿನಿಮಾ ಹಿಂದಿ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ಗಳಿಸಿದೆ. ಮಾರ್ಚ್ 25ರಂದು ರಿಲೀಸ್ ಆದ ‘ಆರ್ಆರ್ಆರ್’ ಸಿನಿಮಾ ಹಿಂದಿ ಬಾಕ್ಸ್ ಆಫೀಸ್ನಲ್ಲಿ ಒಂದು ವಾರ ಕಳೆಯುವುದರೊಳಗೆ 100 ಕೋಟಿ ಕ್ಲಬ್ ಸೇರಿದೆ. ಈ ಚಿತ್ರ ಅನಾಯಾಸವಾಗಿ 200 ಕೋಟಿ ಗಳಿಸಲಿದೆ.
ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ತೆರೆಕಂಡ ಕೆಲವೇ ಕೆಲವು ಬಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿವೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’, ಕಬೀರ್ ಖಾನ್ ನಿರ್ದೇಶನದ ‘83’ ಚಿತ್ರಗಳು 100 ಕೋಟಿ ರೂಪಾಯಿ ಗಳಿಸಿ ವ್ಯವಹಾರ ನಿಲ್ಲಿಸಿದವು. ಇತ್ತೀಚೆಗೆ ತೆರೆಗೆ ಬಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ 200 ಕೋಟಿ ರೂಪಾಯಿ ಗಳಿಸಿ ಕಮಾಲ್ ಮಾಡಿದೆ. ಇದನ್ನು ಬಿಟ್ಟು ಮತ್ತಾವುದೇ ಹೇಳಿಕೊಳ್ಳುವಂತಹ ಸಿನಿಮಾ ಬಂದಿಲ್ಲ.
ದಕ್ಷಿಣ ಭಾರತದ ಸಿನಿಮಾಗಳು ಬಾಲಿವುಡ್ನಲ್ಲಿ ಸದ್ದು ಮಾಡುತ್ತಿರುವುದಕ್ಕೆ ಅಲ್ಲಿನ ನಟ, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಅಭದ್ರತೆ ಕಾಡುತ್ತಿದೆ ಎನ್ನಲಾಗುತ್ತಿದೆ. ಇನ್ನು, ದಕ್ಷಿಣ ಭಾರತದ ಹಿಟ್ ಚಿತ್ರಗಳನ್ನು ರಿಮೇಕ್ ಮಾಡೋಕೆ ಬಾಲಿವುಡ್ ಮಂದಿ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅಲ್ಲಿ ಸಿದ್ಧಗೊಳ್ಳುತ್ತಿರುವ ಕಥೆಯನ್ನು ಜನರು ಏಕೆ ಇಷ್ಟಪಡುತ್ತಿಲ್ಲ ಎಂಬುದು ಅಲ್ಲಿನ ನಿರ್ದೇಶಕರಿಗೆ ಯಕ್ಷ ಪ್ರಶ್ನೆಯಾಗಿದೆ. ಈ ಬಗ್ಗೆ ನಟ ಸಲ್ಮಾನ್ ಖಾನ್ ಕೂಡ ಮಾತನಾಡಿದ್ದರು.
ಸೋಲಿಲ್ಲದ ಸರದಾರ ರಾಜಮೌಳಿ ಗೆಲುವಿನ ಗುಟ್ಟೇನು? ಇಲ್ಲಿವೆ ‘ಆರ್ಆರ್ಆರ್’ ನಿರ್ದೇಶಕನ 5 ಸೂತ್ರಗಳು