AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಂಡ ಜಗದೀಶ್​ ಖಾತೆಯಿಂದ ಪವಿತ್ರಾ ಗೌಡಗೆ ಹೋಗಿದೆ 2 ಕೋಟಿ ರೂಪಾಯಿ

ಪವಿತ್ರಾ ಗೌಡ ಅವರು ಮನೆ ಖರೀದಿಸುವಾಗ ಸೌಂದರ್ಯಾ ಜಗದೀಶ್​ ಬಳಿ 2 ಕೋಟಿ ರೂಪಾಯಿ ಹಣ ಪಡೆದಿದ್ದರು. ಈ ವರ್ಷ ಜಗದೀಶ್​ ಆತ್ಮಹತ್ಯೆ ಮಾಡಿಕೊಂಡರು. ‘ಪವಿತ್ರಾ ಗೌಡಗೆ ನಮ್ಮ ಮನೆಯವರು ಯಾಕೆ ಹಣ ನೀಡಿದ್ದರು ಎಂಬುದು ನನಗೆ ಗೊತ್ತಿಲ್ಲ. ಅದಕ್ಕೂ ನಮ್ಮ ಯಜಮಾನರ ಸಾವಿಗೂ ಸಂಬಂಧ ಇಲ್ಲ. ಈಗ ಬ್ಯಾಂಕ್​ ವಿವರ ತೆಗೆಸುತ್ತಿದ್ದೇನೆ’ ಎಂದು ಸೌಂದರ್ಯಾ ಜಗದೀಶ್​ ಪತ್ನಿ ರೇಖಾ ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ಜಗದೀಶ್​ ಖಾತೆಯಿಂದ ಪವಿತ್ರಾ ಗೌಡಗೆ ಹೋಗಿದೆ 2 ಕೋಟಿ ರೂಪಾಯಿ
ಪವಿತ್ರಾ ಗೌಡ, ಸೌಂದರ್ಯಾ ಜಗದೀಶ್​
Mangala RR
| Edited By: |

Updated on: Jun 24, 2024 | 4:55 PM

Share

ನಟಿ ಪವಿತ್ರಾ ಗೌಡ (Pavithra Gowda) ಅವರು ರೇಣುಕಾ ಸ್ವಾಮಿ ಮರ್ಡರ್​ ಕೇಸ್​ನಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಜಾರಿಯಲ್ಲಿ ಇರುವಾಗಲೇ ಹಲವು ಬಗೆಯ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ಈ ವರ್ಷ ನಿರ್ಮಾಪಕ ಸೌಂದರ್ಯಾ ಜಗದೀಶ್​ (Soundarya Jagadeesh) ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಅವರ ಜೊತೆ ದರ್ಶನ (Darshan), ಪವಿತ್ರಾ ಗೌಡ ಒಡನಾಟ ಹೊಂದಿದ್ದರು. ಅಚ್ಚರಿ ಏನೆಂದರೆ, ಸೌಂದರ್ಯಾ ಜಗದೀಶ್​ ಅವರ ಬ್ಯಾಂಕ್​ ಖಾತೆಯಿಂದ ಪವಿತ್ರಾ ಗೌಡ ಅವರ ಖಾತೆಗೆ ಬರೋಬ್ಬರಿ 2 ಕೋಟಿ ರೂಪಾಯಿ ವರ್ಗಾವಣೆ ಆಗಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ.

ಸೌಂದರ್ಯಾ ಜಗದೀಶ್​ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಆರ್ಥಿಕ ಸಂಕಷ್ಟ ಕೂಡ ಕಾರಣ ಎನ್ನಲಾಗಿದೆ. ಹೀಗಿರುವಾಗ ಅವರು ಪವಿತ್ರಾ ಗೌಡಗೆ 2 ಕೋಟಿ ರೂಪಾಯಿ ನೀಡಿದ್ದು ಯಾಕೆ ಎಂಬುದು ನಿಗೂಢವಾಗಿಯೇ ಉಳಿದುಕೊಂಡಿದೆ. ಇನ್ನೊಂದು ಶಾಕಿಂಗ್​ ವಿಚಾರ ಇದೆ. ಪವಿತ್ರಾ ಗೌಡಗೆ ಸೌಂದರ್ಯಾ ಜಗದೀಶ್​ ಅವರು ಇಷ್ಟು ದೊಡ್ಡ ಮೊತ್ತದ ಹಣ ನೀಡಿದ್ದರ ಬಗ್ಗೆ ಜಗದೀಶ್​ ಕುಟುಂಬದಬರಿಗೆ ಮಾಹಿತಿಯೇ ಇಲ್ಲ!

2017ರ ನವೆಂಬರ್​​ನಲ್ಲಿ ಸೌಂದರ್ಯಾ ಜಗದೀಶ್ ಅವರ ಖಾತೆಯಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಒಂದು ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿತ್ತು. ನಂತರ 2018ರ ಜನವರಿಯಲ್ಲಿ ಮತ್ತೊಂದು ಕೋಟಿ ರೂಪಾಯಿಯನ್ನು ಪವಿತ್ರಾ ಗೌಡ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಪವಿತ್ರಾ ಗೌಡ ಮನೆ ಖರೀದಿ ಮಾಡುವ ಸಮಯದಲ್ಲಿ ಈ ಹಣವನ್ನು ಪಡೆದುಕೊಂಡಿದ್ದರು ಎನ್ನಲಾಗಿದೆ. ಯಾವ ಕಾರಣಕ್ಕಾಗಿ ಈ ಹಣವನ್ನು ಸೌಂದರ್ಯಾ ಜಗದೀಶ್​ ನೀಡಿದ್ದರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ಈ ಘಟನೆ ಬಗ್ಗೆ ಸೌಂದರ್ಯಾ ಜಗದೀಶ್​ ಅವರ ಪತ್ನಿ ರೇಖಾ ಪ್ರತಿಕ್ರಿಯೆ ನೀಡಿದ್ದಾರೆ. ‘ನಮಗೆ ಟಿವಿ ನೋಡಿದ ನಂತರವೇ ಈ ಬಗ್ಗೆ ತಿಳಿಯಿತು. ನಾವು ಈಗಾಗಲೇ ನೋವಿನಲ್ಲಿ ಇದ್ದೇವೆ. ಅದರ ನಡುವೆ ಇದೇನಪ್ಪಾ ಅಂತ ಬೇಸರ ಆಯ್ತು. ಬಳಿಕ ನಾನು ವಿವರ ಪಡೆದುಕೊಂಡೆ. ಜಗದೀಶ್​ ಅವರ ಪಾರ್ಟ್ನರ್​ ಆದಂತಹ ಸುರೇಶ್​ ಮತ್ತು ಹೊಂಬಣ್ಣ ಕುರಿತ ಡೆಟ್​ನೋಟ್​ ಬಗ್ಗೆ ತನಿಖೆ ನಡೆಯುತ್ತಿದೆ. ಈಗ ಬ್ಯಾಂಕ್​ ಸ್ಟೇಟ್​ಮೆಂಟ್​ ತೆಗೆಸುತ್ತಿದ್ದೇನೆ. ಪವಿತ್ರಾಗೆ ಹಣ ನೀಡಿದ್ದರಿಂದ ಜಗದೀಶ್​ ಅವರು ಆತ್ಮಹತ್ಯೆ ಮಾಡಿಕೊಂಡರು ಎಂಬುದೆಲ್ಲ ಸುಳ್ಳು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಪಾರ್ಟರ್​ ಕಾರಣದಿಂದ’ ಎಂದು ರೇಖಾ ಜಗದೀಶ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್