AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರುದ್ರಾಭಿಷೇಕಂ’ ಚಿತ್ರತಂಡದಿಂದ ಭರ್ಜರಿ ಆಫರ್, ಗೆದ್ದವರಿಗೆ ನಗದು ಬಹುಮಾನ

ವಿಜಯ್ ರಾಘವೇಂದ್ರ ಹಲವು ಭಿನ್ನ ಲುಕ್​​ಗಳಲ್ಲಿ ಕಾಣಿಸಿಕೊಂಡಿರುವ ಗ್ರಾಮ್ಯ ಕತೆಯುಳ್ಳ ಆಕ್ಷನ್-ಥ್ರಿಲ್ಲರ್ ಸಿನಿಮಾ ‘ರುದ್ರಾಭಿಷೇಕಂ’ ಇದೇ ತಿಂಗಳು 25ಕ್ಕೆ ರಿಲೀಸ್ ಆಗಲಿದೆ. ಸಿನಿಮಾ ಅನ್ನು ಪ್ಯಾನ್ ಇಂಡಿಯಾ ಕ್ರಿಯೇಶನ್ಸ್ ಮೂಲಕ ನಿರ್ಮಾಣ ಮಾಡಲಾಗಿದ್ದು, ಸಿನಿಮಾ ತಂಡ ಇದೀಗ ಸಾಮಾಜಿಕ ಜಾಲತಾಣದ ಇನ್​​ಫ್ಯುಯೆನ್ಸರ್​​ಗಳಿಗೆ ಆಫರ್ ಒಂದನ್ನು ನೀಡಿದೆ. ‘ರುದ್ರಾಭಿಷೇಕಂ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ನಗದು ಬಹುಮಾನವನ್ನು ಗೆಲ್ಲಬಹುದಾಗಿದೆ.

‘ರುದ್ರಾಭಿಷೇಕಂ’ ಚಿತ್ರತಂಡದಿಂದ ಭರ್ಜರಿ ಆಫರ್, ಗೆದ್ದವರಿಗೆ ನಗದು ಬಹುಮಾನ
Vijay PriyankaImage Credit source: Pan India Creations Instagram
ಮಂಜುನಾಥ ಸಿ.
|

Updated on: Sep 04, 2026 | 1:08 PM

Share

ಮುಖ್ಯಾಂಶಗಳು

  • ರುದ್ರಾಭಿಷೇಕಂ ವಿಜಯ್ ರಾಘವೇಂದ್ರ ನಟಿಸಿರುವ ಸಿನಿಮಾ
  • ಸೆಪ್ಟೆಂಬರ್ 25ಕ್ಕೆ ರಿಲೀಸ್ ಆಗಲಿದೆ ‘ರುದ್ರಾಭಿಷೇಕಂ’
  • ರುದ್ರಾಭಿಷೇಕಂ ಸಿನಿಮಾ ಆಫರ್ ಒಂದನ್ನು ಯುವಕರಿಗೆ ನೀಡಿದೆ

ವಿಜಯ್ ರಾಘವೇಂದ್ರ, ಪ್ರಿಯಾಂಕಾ ತಿಮ್ಮೇಶ್ ಒಟ್ಟಿಗೆ ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಇದೇ ತಿಂಗಳು 25ಕ್ಕೆ ಸಿನಿಮಾ ರಾಜ್ಯದಾದ್ಯಂತ ರಿಲೀಸ್ ಆಗಲಿದೆ. ಸಿನಿಮಾನಲ್ಲಿ ವಿಜಯ್ ರಾಘವೇಂದ್ರ ದ್ವಿಪಾತ್ರದಲ್ಲಿ ನಟಿಸಿರುವ ಜೊತೆಗೆ ಹಲವು ಭಿನ್ನ ಲುಕ್​​ಗಳಲ್ಲಿ ಸಹ ಕಾಣಿಸಿಕೊಂಡಿದ್ದಾರೆ. ವೀರಗಾಸೆ ಕಲಾವಿದ, ರುದ್ರನ ಅವತಾರ, ಹಳ್ಳಿಯ ಅಮಾಯಕ ಯುವಕ, ಗಿರಿಜಾ ಮೀಸೆಯುಳ್ಳ ಖಡಕ್ ವ್ಯಕ್ತಿ ಹೀಗೆ ಹಲವು ರೀತಿಗಳಲ್ಲಿ ವಿಜಯ್ ರಾಘವೇಂದ್ರ ಅವರು ‘ರುದ್ರಾಭಿಷೇಕಂ’ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಒಂದು ಗ್ರಾಮೀಣ ಕತೆಯುಳ್ಳ ಆಕ್ಷನ್, ಥ್ರಿಲ್ಲರ್ ಸಿನಿಮಾ ಆಗಿದೆ. ಇದೀಗ ಸಿನಿಮಾ ತಂಡವು, ಸೋಷಿಯಲ್ ಮೀಡಿಯಾ ಇನ್​​ಫ್ಲ್ಯುಯೆನ್ಸರ್​​ಗಳಿಗೆ ಆಫರ್ ಒಂದನ್ನು ನೀಡಿದೆ.

‘ರುದ್ರಾಭಿಷೇಕಂ’ ಚಿತ್ರತಂಡವು ಹೊಸ ಘೋಷಣೆಯೊಂದನ್ನು ಮಾಡಿದ್ದು, ರೀಲ್ಸ್ ಮಾಡುವ ಯುವಕ-ಯುವತಿಯರಿಗೆ ಆಫರ್ ಒಂದನ್ನು ನೀಡಿದೆ. ‘ರುದ್ರಾಭಿಷೇಕಂ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಬಹುಮಾನಗಳನ್ನು ಘೋಷಣೆ ಮಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿರುವ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಪ್ಯಾನ್ ಇಂಡಿಯಾ ಕ್ರಿಯೇಷನ್ಸ್, ‘ರುದ್ರಾಭಿಷೇಕಂ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡು, ಯಾರಿಗೆ ಹೆಚ್ಚು ವೀವ್ಸ್ ಬರುತ್ತದೆಯೋ ಅವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.

ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಇನ್​​ಸ್ಟಾಗ್ರಾಂ ಮತ್ತು ಫೇಸ್​​ಬುಕ್​​ನಲ್ಲಿ ಹಂಚಿಕೊಳ್ಳಬೇಕು. ‘ರುದ್ರಾಭಿಷೇಕಂ’ ಸಿನಿಮಾ ಸೆಪ್ಟೆಂಬರ್ 25ಕ್ಕೆ ರಿಲೀಸ್ ಆಗಲಿದ್ದು, ಸಿನಿಮಾ ರಿಲೀಸ್ ಆಗಿ ಮೂರು ದಿನಗಳ ಬಳಿಕ ಯಾರ ರೀಲ್ಸ್​​ಗೆ ಹೆಚ್ಚು ವೀವ್ಸ್ ಬಂದಿರುವುದೋ ಆ ಸಾಮಾಜಿಕ ಜಾಲತಾಣ ಖಾತೆಯವರಿಗೆ ಬಹುಮಾನ ನೀಡಲಾಗುವುದು. ಮೊದಲ ಬಹುಮಾನ 10 ಸಾವಿರ, ಎರಡನೇ ಬಹುಮಾನ 7500 ರೂಪಾಯಿ, ಮೂರನೇ ಬಹುಮಾನ 5000 ರೂಪಾಯಿ, ಸಮಾಧಾನಕರ ಬಹುಮಾನ 1000 ರೂಪಾಯಿಗಳು. ಸಿನಿಮಾ ಬಿಡುಗಡೆ ಆದ ಬಳಿಕ ರೀಲ್ಸ್ ಜೊತೆಗೆ ವೀವ್ಸ್ ಮಾಹಿತಿಯನ್ನು 8553674555, 9845642338 ಸಂಖ್ಯೆಗಳಿಗೆ ಕಳಿಸಬೇಕಿರುತ್ತದೆ. ಹೆಚ್ಚು ವೀವ್ಸ್ ಪಡೆದವರಿಗೆ ಬಹುಮಾನ ನೀಡುವ ಜೊತೆಗೆ ಅವರಿಗೆ ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ನಿರ್ಮಾಣದ ಮುಂದಿನ ಸಿನಿಮಾನಲ್ಲಿ ನಟಿಸುವ ಅವಕಾಶವೂ ನೀಡಲಾಗುತ್ತದೆಯಂತೆ.

ಇದನ್ನೂ ಓದಿ:‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ವಿಜಯ್ ರಾಘವೇಂದ್ರ ಭಾವುಕ ಮಾತು

‘ರುದ್ರಾಭಿಷೇಕಂ’ ಸಿನಿಮಾನಲ್ಲಿ ವಿಜಯ್ ರಾಘವೇಂದ್ರ ಜೊತೆಗೆ ಪ್ರಿಯಾಂಕಾ ತಿಮ್ಮೇಶ್ ನಾಯಕಿಯಾಗಿ ನಟಿಸಿದ್ದಾರೆ. ಬಾಲ ರಾಜವಾಡಿ, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಇನ್ನಿತರರು ನಟಿಸಿದ್ದಾರೆ. ಸಿನಿಮಾ ಅನ್ನು ವಸಂತ್​ ಕುಮಾರ್ ನಿರ್ದೇಶನ ಮಾಡಿದ್ದು, ಪ್ಯಾನ್ ಇಂಡಿಯಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಲಾಯರ್ ಜಯರಾಂ, ಮಂಜುನಾಥ ಕೆ.ಎನ್, ಕೆ ವೆಂಕಟೇಶ್, ಚಿದಾನಂದ ಮೂರ್ತಿ, ಸುರೇಶ್ ಬಾಬು, ಅಶ್ವಥ್ ನಾರಾಯಣ, ಶಿವಕುಮಾರ್, ರವಿಕುಮಾರ್‌, ಚಂದ್ರಶೇಖರ ಹಡಪದ ಅವರುಗಳು ಒಟ್ಟಿಗೆ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಬಿಜೆ ಕಿಶೋರ್ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಸಿನಿಮಾ ಸೆಪ್ಟೆಂಬರ್ 25ಕ್ಕೆ ರಾಜ್ಯದಾದ್ಯಂತ ರಿಲೀಸ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಬರದಿಂದ ನಲುಗಿದ ರೈತರಿಗೆ ಗುಡ್ ನ್ಯೂಸ್:ಬರ ಪರಿಹಾರ ಘೋಷಿಸಿದ ಸರ್ಕಾರ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಟ್ರಂಪ್ ದಂಪತಿಯಿಂದ ಅದ್ದೂರಿ ಸ್ವಾಗತ
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಟ್ರಂಪ್ ದಂಪತಿಯಿಂದ ಅದ್ದೂರಿ ಸ್ವಾಗತ
ಕಲಬುರ್ಗಿಯಲ್ಲಿ ಕನೇರಿ ಶ್ರೀಗಳ ಸಮಾವೇಶಕ್ಕೆ ತೀವ್ರ ವಿರೋಧ
ಕಲಬುರ್ಗಿಯಲ್ಲಿ ಕನೇರಿ ಶ್ರೀಗಳ ಸಮಾವೇಶಕ್ಕೆ ತೀವ್ರ ವಿರೋಧ
ಮತದಾರರ ಹೆಸರು ಡಿಲೀಟ್: ಬಿಜೆಪಿ ಎಂಎಲ್​​ಎ ವಿರುದ್ಧ ದಾಖಲೆ ಬಿಡುಗಡೆ
ಮತದಾರರ ಹೆಸರು ಡಿಲೀಟ್: ಬಿಜೆಪಿ ಎಂಎಲ್​​ಎ ವಿರುದ್ಧ ದಾಖಲೆ ಬಿಡುಗಡೆ
ಕನ್ನಡ ಸಿನಿಮಾಗಳ ಉಳಿವಿಗಾಗಿ ಪ್ರೇಕ್ಷಕರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಮನವಿ
ಕನ್ನಡ ಸಿನಿಮಾಗಳ ಉಳಿವಿಗಾಗಿ ಪ್ರೇಕ್ಷಕರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಮನವಿ
ಬೆಂಗಳೂರಿನಲ್ಲಿ ಧರ್ಮಸ್ಥಳ ದೇವಸ್ಥಾನದ ಮಾದರಿಯಲ್ಲಿ ಗಣಪನ ಪ್ರತಿಷ್ಠಾಪನೆ
ಬೆಂಗಳೂರಿನಲ್ಲಿ ಧರ್ಮಸ್ಥಳ ದೇವಸ್ಥಾನದ ಮಾದರಿಯಲ್ಲಿ ಗಣಪನ ಪ್ರತಿಷ್ಠಾಪನೆ
ಚೀನಾ ಅಧ್ಯಕ್ಷರಿಗೆ ಸ್ವಾಗತ ಕೋರುವಾಗ ಮುಖ ಸಿಂಡರಿಸಿದ ಡೊನಾಲ್ಡ್ ಟ್ರಂಪ್
ಚೀನಾ ಅಧ್ಯಕ್ಷರಿಗೆ ಸ್ವಾಗತ ಕೋರುವಾಗ ಮುಖ ಸಿಂಡರಿಸಿದ ಡೊನಾಲ್ಡ್ ಟ್ರಂಪ್
3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
ಎಲ್ ನಿನೋ ಕಂಟಕ: ಮುಂದಿನ 6 ತಿಂಗಳಲ್ಲಿ 4.5 ಲಕ್ಷ ಮಂದಿ ಸಾವು ಭೀತಿ
ಎಲ್ ನಿನೋ ಕಂಟಕ: ಮುಂದಿನ 6 ತಿಂಗಳಲ್ಲಿ 4.5 ಲಕ್ಷ ಮಂದಿ ಸಾವು ಭೀತಿ