AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರುಕ್ಮಿಣಿ ವಸಂತ್ ಮಾರ್ಫ್ ವಿಡಿಯೋ ಹಂಚಿಕೊಂಡವರು ಸಿಕ್ಕಿ ಬೀಳೋದು ಬಹುತೇಕ ಖಚಿತ

ಸಾಮಾಜಿಕ ಜಾಲತಾಣಗಳಲ್ಲಿ ನಟಿ ರುಕ್ಮಿಣಿ ವಸಂತ್ ಅವರ ವಿಡಿಯೋಗಳನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಅಶ್ಲೀಲವಾಗಿ ಮಾರ್ಫ್ ಮಾಡಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರು ನೀಡಿದ ಅಧಿಕೃತ ದೂರಿನ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಸಿಬಿ (CCB) ಸೈಬರ್ ಕ್ರೈಂ ಪೊಲೀಸರು, ಆರೋಪಿಗಳ ಪತ್ತೆಗೆ ತೀವ್ರ ಕ್ರಮ ಕೈಗೊಂಡಿದ್ದಾರೆ.

ನಟಿ ರುಕ್ಮಿಣಿ ವಸಂತ್ ಮಾರ್ಫ್ ವಿಡಿಯೋ ಹಂಚಿಕೊಂಡವರು ಸಿಕ್ಕಿ ಬೀಳೋದು ಬಹುತೇಕ ಖಚಿತ
ರುಕ್ಮಿಣಿ ವಸಂತ್ Image Credit source: Rukmini Vasanth
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 10, 2026 | 10:36 AM

Share

ನಟಿ ರುಕ್ಮಿಣಿ ವಸಂತ್ ಅವರಿಗೆ (Rukmini Vasanth) ಇತ್ತೀಚೆಗೆ ಮುಜುಗರ ಆಗುವ ಘಟನೆ ನಡೆದಿತ್ತು.ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ರುಕ್ಮಿಣಿ ವಸಂತ್ ವಿಡಿಯೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಲಾಗಿತ್ತು. ಈ ಬಗ್ಗೆ ನಟಿ ರುಕ್ಮಿಣಿ ವಸಂತ್ ಅವರು ದೂರು ನೀಡಿದ್ದರು. ಈ ಬೆನ್ನಲ್ಲೇ ಸಿಸಿಬಿ ಸೈಬರ್ ಪೊಲೀಸರು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಕಿಡಿಗೇಡಿಗಳು ಸಿಕ್ಕಿ ಬೀಳೋದು ಬಹುತೇಕ ಖಚಿತವಾಗಿದೆ.

ತನಿಖೆಯನ್ನು ಚುರುಕುಗೊಳಿಸಿರುವ ಸೈಬರ್ ಪೊಲೀಸರು, ಅಶ್ಲೀಲ ವಿಡಿಯೋ ಅಪ್‌ಲೋಡ್ ಆಗಿರುವ ಮೆಟಾ (ಫೇಸ್​​ಬುಕ್​, ಇನ್​​ಸ್ಟಾ) ಎಕ್ಸ್ ಮುಂತಾದ ಸಂಸ್ಥೆಗಳಿಗೆ ತುರ್ತು ಪತ್ರ ಬರೆದಿದ್ದಾರೆ. ಹತ್ತಾರು ನಕಲಿ ಹಾಗೂ ಅನಾಮಧೇಯ ಐಡಿಗಳ ಮೂಲಕ ಈ ಕೃತ್ಯ ಎಸಗಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ಆ ಎಲ್ಲಾ ವಿವಾದಿತ ಐಡಿಗಳ ಸಂಪೂರ್ಣ ಮಾಹಿತಿ ಮತ್ತು ಐಪಿ ಅಡ್ರೆಸ್ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಮುಂದಿನ ಕೆಲವೇ ದಿನಗಳಲ್ಲಿ ಈ ಐಡಿಗಳ ಸಂಪೂರ್ಣ ವಿವರ ಸಿಸಿಬಿ ಕೈಸೇರಲಿದ್ದು, ಕಿಡಿಗೇಡಿಗಳ ಹೆಡೆಮುರಿ ಕಟ್ಟುವುದು ನಿಶ್ಚಿತವಾಗಿದೆ.

ಈ ಹಿಂದೆ ಸ್ಯಾಂಡಲ್‌ವುಡ್‌ನ ಹಿರಿಯ ನಟಿಯರಾದ ರಮ್ಯಾ ಹಾಗೂ ವಿಜಯಲಕ್ಷ್ಮಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಅಶ್ಲೀಲವಾಗಿ ಕಾಮೆಂಟ್ ಮಾಡಿದ್ದ ಮತ್ತು ನಿಂದಿಸಿದ್ದ ಕಿಡಿಗೇಡಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿ ಜೈಲಿಗಟ್ಟಿದ್ದರು. ಈಗ ಅದೇ ಮಾದರಿಯಲ್ಲೇ ನಟಿ ರುಕ್ಮಿಣಿ ವಸಂತ್ ಅವರ ಪ್ರಕರಣದಲ್ಲೂ ತನಿಖೆ ತೀವ್ರಗೊಂಡಿದೆ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ನಟಿಯರ ತೇಜೋವಧೆ ಮಾಡುವ ಸೈಬರ್ ವಿಕೃತಕಾಮಿಗಳನ್ನು ಪತ್ತೆಹಚ್ಚಿ ಜೈಲಿಗಟ್ಟಲು ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಹೂಗಳ ಜೊತೆಗೆ ಹೂವಿನಷ್ಟೆ ಸುಂದರಿ ರುಕ್ಮಿಣಿ ವಸಂತ್: ವಿಡಿಯೋ ನೋಡಿ

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಎಐ (AI) ಹಾಗೂ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ ಅಶ್ಲೀಲ ಫೋಟೋ, ವಿಡಿಯೋಗಳನ್ನು ಸೃಷ್ಟಿಸುವ ಜಾಲ ಸಕ್ರಿಯವಾಗುತ್ತಿದೆ. ಇಂತಹ ಕಿಡಿಗೇಡಿತನಕ್ಕೆ ಕಾನೂನಿನಲ್ಲಿ ಕಠಿಣ ಶಿಕ್ಷೆಯಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವುದು ಅಥವಾ ಫಾರ್ವರ್ಡ್ ಮಾಡುವುದು ಕೂಡ ಕಾನೂನುಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸೈಬರ್ ಪೊಲೀಸರು ಎಚ್ಚರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More