AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth: ‘ಟಾಕ್ಸಿಕ್’ ಚಿತ್ರಕ್ಕಾಗಿ ರುಕ್ಮಿಣಿ ಪಡೆದ ಸಂಭಾವೆ ವಿಷಯ ರಿವೀಲ್

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಮೂಲಕ ನಟಿ ರುಕ್ಮಿಣಿ ವಸಂತ್ ಭಾರಿ ಸದ್ದು ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಅವರು ಸುಮಾರು 3 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದು, ಇದರ ಬೆನ್ನಲ್ಲೇ ಅವರಿಗೆ ದಕ್ಷಿಣ ಭಾರತದಾದ್ಯಂತ ಸಾಲು ಸಾಲು ಹೊಸ ಆಫರ್‌ಗಳು ಅರಸಿ ಬರುತ್ತಿವೆ.

Rukmini Vasanth: ‘ಟಾಕ್ಸಿಕ್’ ಚಿತ್ರಕ್ಕಾಗಿ ರುಕ್ಮಿಣಿ ಪಡೆದ ಸಂಭಾವೆ ವಿಷಯ ರಿವೀಲ್
ರುಕ್ಮಿಣಿ
ರಾಜೇಶ್ ದುಗ್ಗುಮನೆ
|

Updated on:Aug 10, 2026 | 9:02 AM

Share

ಮುಖ್ಯಾಂಶಗಳು

  • ಟಾಕ್ಸಿಕ್‌ನಲ್ಲಿ ಮಿಂಚಿದ ರುಕ್ಮಿಣಿ ವಸಂತ್
  • ಕೋಟಿಗಳಲ್ಲಿ ಏರಿಕೆಯಾದ ನಟಿಯ ಸಂಭಾವನೆ
  • ರುಕ್ಮಿಣಿ ಹುಡುಕಿಕೊಂಡು ಬಂದ ಸಾಲು ಸಾಲು ಆಫರ್

ಕನ್ನಡ ಚಿತ್ರರಂಗದ ಖ್ಯಾತ ನಟಿಯರಲ್ಲಿ ರುಕ್ಮಿಣಿ ವಸಂತ್ ಒಬ್ಬರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದಲ್ಲಿ  (Toxic Movie) ಮೆಲಿಸ್ಸಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಗ್ಲಿಂಪ್ಸ್‌ನಲ್ಲಿ ರುಕ್ಮಿಣಿ ಲುಕ್ ಅಪಾರ ಗಮನ ಸೆಳೆದಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರದಲ್ಲಿ ಅವರ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾದಲ್ಲಿ ಅವರನ್ನು ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರಕ್ಕಾಗಿ ರುಕ್ಮಿಣಿ ಸುಮಾರು 3 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರ ಮಾರುಕಟ್ಟೆ ಮೌಲ್ಯ ಹೆಚ್ಚಾದಂತೆ ದಕ್ಷಿಣ ಭಾರತದ ವಿವಿಧ ಭಾಷೆಗಳಿಂದ ಸಾಲು ಸಾಲು ಆಫರ್‌ಗಳು ಹುಡುಕಿಕೊಂಡು ಬರುತ್ತಿವೆ. ಈ ಯಶಸ್ಸಿನ ಬೆನ್ನಲ್ಲೇ ರುಕ್ಮಿಣಿ ಅವರ ಸಂಭಾವನೆ ಕೂಡ ಗಣನೀಯವಾಗಿ ಏರಿಕೆಯಾಗಿದೆ.

ಖ್ಯಾತ ನಿರ್ಮಾಪಕರು ತಮ್ಮ ಸಿನಿಮಾಗಳಿಗೆ ರುಕ್ಮಿಣಿ ಅವರನ್ನು ಆಯ್ಕೆ ಮಾಡಲು ಆಸಕ್ತಿ ತೋರುತ್ತಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ ಅವರಂತಹ ಬಹುಭಾಷಾ ತಾರೆಯರ ಜೊತೆ ರುಕ್ಮಿಣಿ ಕೂಡ ಪ್ರಮುಖ ಆಕರ್ಷಣೆಯಾಗಿದ್ದಾರೆ. ಸಾಲು ಸಾಲು ಹಿಟ್ ಚಿತ್ರಗಳ ನಂತರ ಅವರ ವೃತ್ತಿಜೀವನ ಹೊಸ ಎತ್ತರಕ್ಕೆ ಸಾಗಿದೆ.

ಆಗಸ್ಟ್ 26ರಂದು ‘ಟಾಕ್ಸಿಕ್’ ಸಿನಿಮಾ ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಟ್ರೇಲರ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಅಭಿಮಾನಿಗಳು ಹಾಗೂ ಚಿತ್ರರಂಗದ ಕಣ್ಣು ಈಗ ರುಕ್ಮಿಣಿ ಅವರ ನಟನೆಯ ಮೇಲಿದೆ. ಮುಂದಿನ ದಿನಗಳಲ್ಲಿ ಅವರ ಡಿಮ್ಯಾಂಡ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಟಾಕ್ಸಿಕ್ ಟ್ರೇಲರ್ ಲಾಂಚ್​​​ಗೆ ರುಕ್ಮಿಣಿ ವಸಂತ್ ಬೆಂಗಳೂರಿಗೆ ಎಂಟ್ರಿ

ರುಕ್ಮಿಣಿ ವಸಂತ್ ಅವರಿಗೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ದೊಡ್ಡ ಯಶಸ್ಸು ತಂದುಕೊಟ್ಟಿತು. ಆ ಬಳಿಕ ಬಂದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅವರ ಯಶಸ್ಸನ್ನು ಮತ್ತಷ್ಟು ಹೆಚ್ಚಿಸಿತು. ಈಗ ಅವರು ಜೂನಿಯರ್ ಎನ್​​ಟಿಆರ್ ‘ಡ್ರ್ಯಾಗನ್’ ಸಿನಿಮಾಗೆ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Mon, 10 August 26

Follow Us
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ?
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ