ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ; ಗರಂ ಆದ ನಟಿ

ನಟಿ ರುಕ್ಮಿಣಿ ವಸಂತ್ ಅವರ ವೈರಲ್ ಆಗಿದ್ದ ಬಿಕಿನಿ ಫೋಟೋ, ವಿಡಿಯೋಗಳು ಡೀಪ್‌ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. ಇವು ಕೃತಕ ಬುದ್ಧಿಮತ್ತೆ ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋಗಳಾಗಿವೆ ಎಂದು ತಿಳಿಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಅವರು, ಸಾರ್ವಜನಿಕರು ಇಂತಹ ನಕಲಿ ವಿಡಿಯೋಗಳನ್ನು ನಂಬಬಾರದು ಮತ್ತು ಹಂಚಿಕೊಳ್ಳಬಾರದು ಎಂದು ವಿನಂತಿಸಿದ್ದಾರೆ.

ರುಕ್ಮಿಣಿ ವಸಂತ್ ಬಿಕಿನಿ ವಿಡಿಯೋಗೆ ಸಿಕ್ತು ಸ್ಪಷ್ಟನೆ;  ಗರಂ ಆದ ನಟಿ
ರುಕ್ಮಿಣಿ

Updated on: May 23, 2026 | 12:25 PM

‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಂತಾರ’ ಚಿತ್ರದ ಮೂಲಕ ಕನ್ನಡಿಗರ ಮನೆಮಾತಾಗಿರುವ ನಟಿ ರುಕ್ಮಿಣಿ ವಸಂತ್ (Rukmini Vasanth) ಇತ್ತೀಚೆಗೆ ಸುದ್ದಿ ಆಗಿದ್ದರು. ಅವರ ಬಿಕಿನಿ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿದ್ದವು. ಇದರ ಹಿಂದಿನ ಸತ್ಯಾಂಶ ಕೊನೆಗೂ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ವೈರಲ್ ದೃಶ್ಯಗಳ ಬಗ್ಗೆ ಸ್ವತಃ ನಟಿ ರುಕ್ಮಿಣಿ ವಸಂತ್ ಸ್ಪಷ್ಟನೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ಅವರು, ‘ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳು ಸಂಪೂರ್ಣವಾಗಿ ನಕಲಿ ಮತ್ತು ಸೃಷ್ಟಿಸಲ್ಪಟ್ಟವುಗಳಾಗಿವೆ’ ಎಂದು ಆಕ್ರೋಶ ಹೊರಹಾಕಿದ್ದಾರೆ. ‘ಇದು ಕೃತಕ ಬುದ್ಧಿಮತ್ತೆ ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನನ್ನ ಮುಖವನ್ನು ಬೇರೊಬ್ಬರ ದೇಹಕ್ಕೆ ಜೋಡಿಸಿ ಸೃಷ್ಟಿಸಿರುವ ಪಿತೂರಿಯಾಗಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾನೂನು ಹೋರಾಟದ ಎಚ್ಚರಿಕೆ:

ಇಂತಹ ಕೃತ್ಯಗಳು ಒಬ್ಬ ವ್ಯಕ್ತಿಯ ಘನತೆಗೆ ಧಕ್ಕೆ ತರುತ್ತವೆ ಎಂದು ಬೇಸರ ವ್ಯಕ್ತಪಡಿಸಿರುವ ರುಕ್ಮಿಣಿ, ಸುಳ್ಳು ಫೋಟೋಗಳನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವುದಾಗಿ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಅಲ್ಲದೆ ಅಭಿಮಾನಿಗಳು ಮತ್ತು ಸಾರ್ವಜನಿಕರು ಇಂತಹ ಯಾವುದೇ ನಕಲಿ ವಿಡಿಯೋಗಳನ್ನು ನಂಬಬಾರದು ಮತ್ತು ಅದನ್ನು ಶೇರ್ ಮಾಡಬಾರದು ಎಂದು ವಿನಂತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬಿಕಿನಿಯಲ್ಲಿ ರುಕ್ಮಿಣಿ ವಸಂತ್? ವೈರಲ್ ಫೋಟೋ, ವಿಡಿಯೋದಿಂದ ಫ್ಯಾನ್ಸ್ ಮನದಲ್ಲಿ ನೂರು ಪ್ರಶ್ನೆ

ಆರಂಭದಿಂದಲೂ ಗ್ಲಾಮರ್ ಶೋಗಿಂತ ಅಭಿನಯಕ್ಕೆ ಹೆಚ್ಚು ಆದ್ಯತೆ ನೀಡಿ, ಸಾಂಪ್ರದಾಯಿಕ ಉಡುಗೆ ಮೂಲಕವೇ ಗುರುತಿಸಿಕೊಂಡಿದ್ದ ರುಕ್ಮಿಣಿ ಅವರ ಈ ಬೋಲ್ಡ್ ಅವತಾರ ಕಂಡು ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಅನುಮಾನ ಮೂಡಿತ್ತು. ಈಗ ನಟಿಯ ಅಧಿಕೃತ ಸ್ಪಷ್ಟನೆಯಿಂದಾಗಿ ಇಂಟರ್ನೆಟ್‌ನಲ್ಲಿದ್ದ ಗೊಂದಲಗಳಿಗೆ ತೆರೆ ಬಿದ್ದಂತಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us