ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್

ನಟಿ ರುಕ್ಮಿಣಿ ವಸಂತ್ ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳ ವೈರಲ್ ಸಂಬಂಧ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸರು 29 ಸಾಮಾಜಿಕ ಖಾತೆಗಳ ವಿರುದ್ಧ FIR ದಾಖಲಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಿದ್ದ ಕಿಡಿಗೇಡಿಗಳ ವಿರುದ್ಧ ಐಟಿ ಆ್ಯಕ್ಟ್ ಅಡಿಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಶುರುಮಾಡಲಾಗಿದೆ. ತಂತ್ರಜ್ಞಾನದ ದುರ್ಬಳಕೆ ತಡೆಯಲು ಇದು ಮಹತ್ವದ ಹೆಜ್ಜೆಯಾಗಿದೆ.

ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್
ರುಕ್ಮಿಣಿ

Updated on: Jun 02, 2026 | 10:07 AM

ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ ರುಕ್ಮಿಣಿ ವಸಂತ್ ಅವರ (Rukmini Vasanth) ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳಿಗೆ ನಡುಕು ಶುರುವಾಗಿದೆ. ಈ ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿ, ಬೇರೆಯೊಬ್ಬರ ದೇಹಕ್ಕೆ ತಮ್ಮ ಮುಖವನ್ನು ಜೋಡಿಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂದು ನಟಿ ದೂರು ನೀಡಿದ್ದರು. ಈ ಕೃತ್ಯದಿಂದ ತಮಗೆ ತೀವ್ರ ಮುಜುಗರವಾಗಿದ್ದು, ತಮ್ಮ ಚಾರಿತ್ರ್ಯ ಹರಣ ಮಾಡಲು ಯತ್ನಿಸಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ದೂರು ಆಧರಿಸಿ ಎಫ್​​ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

ರುಕ್ಮಿಣಿ ವಸಂತ್ ನೀಡಿದ ದೂರಿನನ್ವಯ ಪೊಲೀಸರು ಒಟ್ಟು 29 ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದರಲ್ಲಿ 9 ಇನ್‌ಸ್ಟಾಗ್ರಾಮ್ ಅಕೌಂಟ್‌ಗಳು, 14 ಟ್ವಿಟರ್ ಅಕೌಂಟ್‌ಗಳು ಹಾಗೂ 6 ಫೇಸ್‌ಬುಕ್ ಪೇಜ್‌ಗಳು ಸೇರಿವೆ. ಸೈಬರ್ ಪೊಲೀಸರು ಐಟಿ ಆ್ಯಕ್ಟ್ 66C, 66D ಹಾಗೂ ಬಿಎನ್‌ಎಸ್ (BNS) ಸೆಕ್ಷನ್ 75(3), 79, 336, 356, 351, 352 ಮತ್ತು 294ರ ಅಡಿಯಲ್ಲಿ ಮೊಕದ್ದಮೆ ಹೂಡಿ ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ದುರ್ಬಳಕೆ ತೀವ್ರವಾಗುತ್ತಿದ್ದು, ಸೆಲೆಬ್ರಿಟಿಗಳ ನಕಲಿ ಚಿತ್ರಗಳನ್ನು ಸೃಷ್ಟಿಸುವ ‘ಡೀಪ್‌ಫೇಕ್’ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಈ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರು ಇದೇ ರೀತಿಯ ಸಮಸ್ಯೆ ಎದುರಿಸಿದ್ದರು. ಆ ಸಂದರ್ಭದಲ್ಲೂ ಬಂಧನಗಳು ನಡೆದಿದ್ದವು.

ಇದನ್ನೂ ಓದಿ: ‘ಇದು ರುಕ್ಮಿಣಿ ವಸಂತ್ ಸಮಸ್ಯೆ ಮಾತ್ರವಲ್ಲ’; ಎಐ ಅಪಾಯದ ಬಗ್ಗೆ ನಿರ್ಮಾಪಕಿ ಎಚ್ಚರಿಕೆ

ಇನ್ನು, ಸ್ಯಾಂಡಲ್‌ವುಡ್ ಹಿರಿಯ ನಟಿ ರಮ್ಯಾ ಹಾಗೂ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್​​​ಗಳು ಬಂದಿದ್ದವು. ಇದರ ವಿರುದ್ಧ ದೂರು ದಾಖಲು ಮಾಡಲಾಗಿತ್ತು. ಆಗ ಅನೇಕರ ಬಂಧನ ಆಗಿತ್ತು. ಈಗ ನಟಿ ರುಕ್ಮಿಣಿ ವಸಂತ್ ಪ್ರಕಿರಣದಲ್ಲೂ ಹಲವರನ್ನು ಅರೆಸ್ಟ್ ಮಾಡುವ ಸಾಧ್ಯತೆ ಇದೆ. ತಂತ್ರಜ್ಞಾನದ ಇಂತಹ ದುರ್ಬಳಕೆ ಚಿತ್ರರಂಗದ ತಾರೆಯರಲ್ಲಿ ಆತಂಕ ಮೂಡಿಸಿದೆ.

(ವರದಿ: ವಿಕಾಸ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us