AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ರುಕ್ಮಿಣಿ ವಸಂತ್​ಗೆ ಯಾರ್ಯಾರು ಫೋನ್ ಮಾಡಿದ್ದರು?

Rukmini Vasanth: 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಅವರ ಅದ್ಭುತ ನಟನೆಗೆ ಹಲವರು ಫಿದಾ ಆಗಿದ್ದಾರೆ. ಚಿತ್ರರಂಗದ ಹಲವು ಗಣ್ಯರು ರುಕ್ಮಿಣಿ ಅವರಿಗೆ ಕರೆ ಮಾಡಿ ಅಭನಂದನೆ ತಿಳಿಸಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ನೋಡಿ ರುಕ್ಮಿಣಿ ವಸಂತ್​ಗೆ ಯಾರ್ಯಾರು ಫೋನ್ ಮಾಡಿದ್ದರು?
ರುಕ್ಮಿಣಿ ವಸಂತ್
ಮಂಜುನಾಥ ಸಿ.
|

Updated on: Sep 27, 2023 | 9:17 PM

Share

ರಕ್ಷಿತ್ ಶೆಟ್ಟಿ (Rakshit Shetty) ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ‘ (Sapta Sagaradache Ello) ಸಿನಿಮಾ ಹಿಟ್ ಎನಿಸಿಕೊಂಡಿದೆ. ಸಿನಿಮಾಕ್ಕೆ ಭರಪೂರ ಧನಾತ್ಮಕ ವಿಮರ್ಶೆ ವ್ಯಕ್ತವಾಗಿದೆ. ಕತೆಯ ನಿಧಾನಗತಿಯನ್ನು ಕೆಲವರು ಟೀಕಿಸಿದ್ದಾರಾದರೂ ಸಿನಿಮಾ ಹಿಟ್ ಆಗಿದೆ. ಅದರಲ್ಲಿಯೂ ಸಿನಿಮಾದ ನಾಯಕಿ ರುಕ್ಮಿಣಿ ವಸಂತ್​ರ ನಟನೆಯ ಬಗ್ಗೆ ದೊಡ್ಡ ಪ್ರಶಂಸೆಯೇ ವ್ಯಕ್ತವಾಗಿದೆ.

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ನಟಿಸಿರುವ ರುಕ್ಮಿಣಿ ವಸಂತ್​ ನಟನೆ ನೋಡಿ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದವರು ಮಾತ್ರವೇ ಅಲ್ಲದೆ ನೆರೆ-ಹೊರೆಯ ಚಿತ್ರರಂಗದವರೂ ಸಹ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳಲ್ಲಿ ಬಿಡುಗಡೆ ಆಗುತ್ತಿರುವ ‘ಬಾನ ದಾರಿಯಲ್ಲಿ’ ಸಿನಿಮಾದಲ್ಲಿಯೂ ನಟಿಸಿರುವ ರುಕ್ಮಿಣಿ, ಆ ಸಿನಿಮಾದ ಪ್ರಚಾರದಲ್ಲಿ ನಿರತರಾಗಿದ್ದು, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ತಮ್ಮ ನಟನೆಯನ್ನು ಮೆಚ್ಚಿ ಯಾರ್ಯಾರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಹೇಳಿಕೊಂಡಿದ್ದಾರೆ.

”ನಮ್ಮ ಚಿತ್ರರಂಗದ ಹಲವಾರು ಮಂದಿ ಕರೆ ಮಾಡಿದ್ದರು, ಸಂದೇಶಗಳನ್ನು ಕಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಯುವ ರಾಜ್​ಕುಮಾರ್ ಅವರು ಕರೆ ಮಾಡಿ ಅಭಿನಂದನೆ ತಿಳಿಸಿದರು. ಅವರು ತಮ್ಮ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದರೂ ಸಹ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ‘ಬಾನ ದಾರಿಯಲ್ಲಿ’ ಸಿನಿಮಾದ ನಿರ್ದೇಶಕ ಪ್ರೀತಂ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನನ್ನ ಇತರೆ ಸಿನಿಮಾಗಳ ತಂಡದವರು ಸಹ ಮೆಚ್ಚುಗೆ ವ್ಯಕ್ತಪಡಿಸಿದರು” ಎಂದಿದ್ದಾರೆ.

ಇದನ್ನೂ ಓದಿ:ರುಕ್ಮಿಣಿ ವಸಂತ್​ಗೆ ಬಾಯ್​ಫ್ರೆಂಡ್ ಇದ್ದಾನಾ? ಅವರೇ ಹೇಳಿದ್ದಾರೆ

”ನಟಿ ಸಮಂತಾ ಮೆಚ್ಚುಗೆ ವ್ಯಕ್ತಪಡಿಸಿದ್ದು ಬಹಳ ಖುಷಿಯಾಯಿತು. ಅವರು ನನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಅವಶ್ಯಕತೆ ಇರಲಿಲ್ಲ. ಆದರೂ ಅವರು ಪೋಸ್ಟ್ ಹಂಚಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಒಬ್ಬ ಕಲಾವಿದೆ, ಮತ್ತೊಬ್ಬ ಕಲಾವಿದೆಗೆ ಸ್ಪೂರ್ತಿ ತುಂಬಬೇಕು ಎಂಬುದನ್ನು ಅವರು ತೋರಿಸಿದರು” ಎಂದರು ರುಕ್ಮಿಣಿ ವಸಂತ್.

ರುಕ್ಮಿಣಿ ವಸಂತ್ ಪ್ರಸ್ತುತ ‘ಬಾನ ದಾರಿಯಲ್ಲಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾವನ್ನು ಪ್ರೀತಂ ಗುಬ್ಬಿ ನಿರ್ದೇಶನ ಮಾಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಟನಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ರಂಗಾಯಣ ರಘು ಇನ್ನೂ ಕೆಲವು ಪ್ರಮುಖ ನಟರಿದ್ದಾರೆ. ಸಿನಿಮಾವನ್ನು ಗೋವಾ, ಕೀನ್ಯಾ ಇನ್ನೂ ಹಲವು ಪ್ರವಾಸಿ ತಾಣಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ‘ಬಾನ ದಾರಿಯಲ್ಲಿ’ ಸಿನಿಮಾ ಸೆಪ್ಟೆಂಬರ್ 28ಕ್ಕೆ ರಾಜ್ಯದಾದ್ಯಂತ ಬಿಡುಗಡೆ ಆಗುತ್ತಿದೆ.

‘ಬಾನ ದಾರಿಯಲ್ಲಿ’ ಸಿನಿಮಾದ ಜೊತೆಗೆ ‘ಬಘೀರ’, ‘ಭೈರತಿ ರಣಗಲ್’ ಸಿನಿಮಾಗಳಲ್ಲಿಯೂ ರುಕ್ಮಿಣಿ ವಸಂತ್ ನಟಿಸಿದ್ದು, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಬಳಿಕ ಹಲವು ಸಿನಿಮಾ ಅವಕಾಶಗಳು ಅವರನ್ನು ಅರಸಿ ಬರುತ್ತಿವೆ. ಹೊರ ರಾಜ್ಯಗಳಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ