AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಜೊತೆ ನಟಿಸಲಿದ್ದಾರೆ ರುಕ್ಮಿಣಿ ವಸಂತ್? ಟಾಲಿವುಡ್ ಅಂಗಳದಲ್ಲಿ ಹೀಗೊಂದು ಸುದ್ದಿ

ಈಗ ‘VD 12’ ನಿರ್ದೇಶಕ ಗೌತಮ್ ತಿಣ್ಣನುರಿ ಅವರು ಹೊಸ ನಟಿಯ ಹುಡುಕಾಟದಲ್ಲಿದ್ದಾರೆ. ‘ಅನಿಮಲ್’ ಸಿನಿಮಾ ನಟಿ ತೃಪ್ತಿ ದಿಮ್ರಿ ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ’ (ತೆಲುಗು ವರ್ಷನ್) ಮೂಲಕ ಟಾಲಿವುಡ್​ನಲ್ಲಿ ಖ್ಯಾತಿ ಪಡೆದ ರುಕ್ಮಿಣಿ ಅವರನ್ನು ಗೌತಮ್ ಸಂಪರ್ಕಿಸಿದ್ದಾರೆ ಎನ್ನಲಾಗುತ್ತಿದೆ.

ವಿಜಯ್ ದೇವರಕೊಂಡ ಜೊತೆ ನಟಿಸಲಿದ್ದಾರೆ ರುಕ್ಮಿಣಿ ವಸಂತ್? ಟಾಲಿವುಡ್ ಅಂಗಳದಲ್ಲಿ ಹೀಗೊಂದು ಸುದ್ದಿ
ರುಕ್ಮಿಣಿ-ವಿಜಯ್
ರಾಜೇಶ್ ದುಗ್ಗುಮನೆ
|

Updated on:Jan 20, 2024 | 2:29 PM

Share

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರಿಗೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ದೊಡ್ಡ ಜನಪ್ರಿಯತೆ ಸಿಕ್ಕಿತು. ಇದಾದ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಗಣೇಶ್ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ಶಿವರಾಜ್​ಕುಮಾರ್ ನಟನೆಯ ‘ಬೈರತಿ ರಣಗಲ್’ ಚಿತ್ರಕ್ಕೂ ರುಕ್ಮಿಣಿ ನಾಯಕಿ. ಈಗ ಅವರಿಗೆ ಟಾಲಿವುಡ್​ನಿಂದ ಆಫರ್ ಬಂದಿದೆ ಎನ್ನುತ್ತಿವೆ ಅಲ್ಲಿನ ಮಾಧ್ಯಮಗಳು. ಇದರಲ್ಲಿ ನಿಜ ಎಷ್ಟು ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ವಿಜಯ್ ದೇವರಕೊಂಡ ಅವರು ಸದ್ಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಗೀತ ಗೋವಿಂದಂ’ ಖ್ಯಾತಿಯ ಪರಶುರಾಮ್ ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರು ‘VD 12’ ಸಿನಿಮಾ ಶೂಟ್ ಆರಂಭಿಸಿದ್ದರು. ಇದಕ್ಕೆ ಶ್ರೀಲೀಲಾ ನಾಯಕಿ ಆಗಿ ಫೈನಲ್ ಆಗಿದ್ದರು. ಆದರೆ, ವಿಜಯ್ ದೇವರಕೊಂಡ ಅವರು ‘ಫ್ಯಾಮಿಲಿ ಸ್ಟಾರ್’ ಕೆಲಸ ಪೂರ್ಣಗೊಂಡ ಬಳಿಕವೇ ‘VD 12’ ಸಿನಿಮಾ ಶೂಟ್ ಆರಂಭಿಸಲು ನಿರ್ಧರಿಸಿದ್ದಾರೆ. ಶ್ರೀಲೀಲಾಗೆ ಡೇಟ್ ಹೊಂದಿಸಲಾಗದ ಕಾರಣ ಅವರು ಸಿನಿಮಾದಿಂದ ಹೊರ ನಡೆದಿದ್ದಾರೆ ಎಂದು ವರದಿ ಆಗಿದೆ.

ಈಗ ‘VD 12’ ನಿರ್ದೇಶಕ ಗೌತಮ್ ತಿಣ್ಣನುರಿ ಅವರು ಹೊಸ ನಟಿಯ ಹುಡುಕಾಟದಲ್ಲಿದ್ದಾರೆ. ‘ಅನಿಮಲ್’ ಸಿನಿಮಾ ನಟಿ ತೃಪ್ತಿ ದಿಮ್ರಿ ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ’ (ತೆಲುಗು ವರ್ಷನ್) ಮೂಲಕ ಟಾಲಿವುಡ್​ನಲ್ಲಿ ಖ್ಯಾತಿ ಪಡೆದ ರುಕ್ಮಿಣಿ ಅವರನ್ನು ಗೌತಮ್ ಸಂಪರ್ಕಿಸಿದ್ದಾರೆ. ಯಾರನ್ನು ಅವರು ಫೈನಲ್ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಸಪ್ತ ಸಾಗರದಾಚೆ ಎಲ್ಲೋ’ ಎರಡು ಭಾಗಗಳಲ್ಲಿ ಮಾಡಿದ್ದೇಕೆ: ರಕ್ಷಿತ್ ಶೆಟ್ಟಿ ಕೊಟ್ಟರು ಉತ್ತರ

ರಕ್ಷಿತ್ ಶೆಟ್ಟಿ ಜೊತೆ ನಟಿಸಿದ್ದ ರಶ್ಮಿಕಾ ಅವರು ತೆಲುಗಿನಲ್ಲಿ ಹೆಚ್ಚು ಜನಪ್ರಿಯತೆ ಪಡೆದಿದ್ದು ವಿಜಯ್ ದೇವರಕೊಂಡ ನಟನೆಯ ‘ಗೀತ ಗೋವಿಂದಂ’ ಮೂಲಕ. ಈ ಚಿತ್ರದಿಂದ ಅವರಿಗೆ ಟಾಲಿವುಡ್​ನಲ್ಲಿ ಭದ್ರ ಬುನಾದಿ ಸಿಕ್ಕಿತು. ಈಗ ರಕ್ಷಿತ್ ಸಿನಿಮಾದಲ್ಲಿ ನಟಿಸಿ ಫೇಮಸ್ ಆದ ರುಕ್ಮಿಣಿ ಅವರು ವಿಜಯ್ ದೇವರಕೊಂಡ ಜೊತೆ ತೆರೆ ಹಂಚಿಕೊಳ್ಳಲು ರೆಡಿ ಆಗಿದ್ದಾರೆ. ರಶ್ಮಿಕಾ ರೀತಿಯೇ ರುಕ್ಮಿಣಿ ಖ್ಯಾತಿಯೂ ಹೆಚ್ಚಲಿದೆಯೇ ಎನ್ನುವ ಕುತೂಹಲ ಅನೇಕರದ್ದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:30 pm, Sat, 20 January 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್