ಎಸ್​. ನಾರಾಯಣ್​ ಪುತ್ರ ಪಂಕಜ್​ ವಿವಾಹ; ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನಡೆಯಿತು ಮದುವೆ

ರಕ್ಷಾ ಜೊತೆ ಪಂಕಜ್​ ನಾರಾಯಣ್​ ಅವರು ಸಪ್ತಪದಿ ತುಳಿದಿದ್ದಾರೆ. ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.

ಎಸ್​. ನಾರಾಯಣ್​ ಪುತ್ರ ಪಂಕಜ್​ ವಿವಾಹ; ಮೈಸೂರಿನಲ್ಲಿ ಆಪ್ತರ ಸಮ್ಮುಖದಲ್ಲಿ ನಡೆಯಿತು ಮದುವೆ
ಪಂಕಜ್ ನಾರಾಯಣ್ - ರಕ್ಷಾ ವಿವಾಹ ಸಮಾರಂಭ
Follow us
TV9 Web
| Updated By: ಮದನ್​ ಕುಮಾರ್​

Updated on:Nov 23, 2021 | 2:09 PM

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ (S Narayan) ಅವರ ಮನೆಯಲ್ಲಿ ಶುಭ ಸಮಾರಂಭ ನೆರವೇರಿದೆ. ಅವರ ಪುತ್ರ ಪಂಕಜ್​ ನಾರಾಯಣ್​ (Pankaj Narayan) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ರಕ್ಷಾ ಜೊತೆ ಪಂಕಜ್​ ಅವರ ನಿಶ್ಚಿತಾರ್ಥ ನೆರವೇರಿತ್ತು. ಈಗ ಮೈಸೂರಿನಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಕೇವಲ ಆಪ್ತರ (S Narayan Family) ಸಮ್ಮುಖದಲ್ಲಿ ಮದುವೆ ನಡೆದಿದ್ದು, ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಪಂಕಜ್​ ಮತ್ತು ರಕ್ಷಾ ಮದುವೆಯ (Pankaj Narayan Marriage) ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಲೆಬ್ರಿಟಿ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆಯಬೇಕಿತ್ತು. ಆದರೆ ಕೊವಿಡ್ ಹರಡುವ ಭಯ, ಪುನೀತ್​ ರಾಜ್​ಕುಮಾರ್ ನಿಧನದ ನೋವು ಸೇರಿದಂತೆ ಹಲವು ಕಾರಣಗಳಿಂದಾಗಿ ಸಿಂಪಲ್​ ಆಗಿ ಮದುವೆ ಮಾಡಲಾಗಿದೆ.

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ಮಾಜಿ ಸಚಿವ ಎನ್​. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು. ಅಭಿಮಾನಿಗಳು ಕೂಡ ಸೋಶಿಯಲ್​ ಮೀಡಿಯಾ ಮೂಲಕ ನವ ದಂಪತಿಗೆ ಶುಭ ಹಾರೈಸುತ್ತಿದ್ದಾರೆ.

ಚಿತ್ರರಂಗದಲ್ಲಿ ಎಸ್​. ನಾರಾಯಣ್​ ಹೊಂದಿರುವ ಅನುಭವ ಅಪಾರ. ನಟನಾಗಿ, ನಿರ್ದೇಶಕನಾಗಿ ಅವರು ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿದ್ದಾರೆ. ಅವರ ಮಕ್ಕಳು ಕೂಡ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಪುತ್ರ ಪವನ್​ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದಾರೆ. ಎರಡನೇ ಪುತ್ರ ಪಂಕಜ್​ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಇದನ್ನೂ ಓದಿ:

ನಿರ್ದೇಶಕ ಎಸ್​. ನಾರಾಯಣ್​ ಹೆಸರಲ್ಲಿ ವಂಚನೆಗೆ ಯತ್ನ; ಹಣ ಕಳೆದುಕೊಳ್ಳಬೇಡಿ ಹುಷಾರ್​

ಮದುವೆಗೂ ಮುನ್ನ ಬುರ್ಕಾ ಧರಿಸುತ್ತಿದ್ದ ದೀಪಿಕಾ; ಯಾರಿಗೂ ತಿಳಿದಿರದ ರಹಸ್ಯ ಈಗ ಬಯಲಾಯ್ತು

Published On - 1:15 pm, Tue, 23 November 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್