ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

Upendra: ಚಿತ್ರರಂಗದಲ್ಲಿ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡಲು ಉಪೇಂದ್ರ ಮುಂದಾಗಿದ್ದು, ಅವರಿಗೆ ಅನೇಕ ಸೆಲೆಬ್ರಿಟಿಗಳು ಸಾಥ್​ ನೀಡುತ್ತಿದ್ದಾರೆ. ಸಾಧುಕೋಕಿಲ, ಬಿ. ಸರೋಜಾದೇವಿ, ಪವನ್​ ಒಡೆಯರ್​, ಶೋಭರಾಜ್​ ಮುಂತಾದವರು ದೇಣಿಗೆ ನೀಡಿದ್ದಾರೆ.

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು
ಸರೋಜಾದೇವಿ - ಉಪೇಂದ್ರ -ಸಾಧುಕೋಕಿಲ
Follow us
ಮದನ್​ ಕುಮಾರ್​
|

Updated on: May 11, 2021 | 2:53 PM

ಕೊರೊನಾ ವೈರಸ್​ ವೇಗವಾಗಿ ಹಬ್ಬುತ್ತಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಲಾಕ್​ಡೌನ್​ ಜಾರಿ ಆಗಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ ನಿಂತಿದೆ. ಆದ್ದರಿಂದ ಬಣ್ಣದ ಲೋಕದಲ್ಲಿ ಕೆಲಸ ಮಾಡುವ ಬಹುತೇಕ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ದಿನದ ಖರ್ಚುಗಳನ್ನು ನಿಭಾಯಿಸುವುದು ಕೂಡ ಕಷ್ಟ ಆಗಿದೆ. ಅಂಥವರಿಗೆ ಸಹಾಯ ಮಾಡಲು ಉಪೇಂದ್ರ ಮಂದೆ ಬಂದಿದ್ದಾರೆ. ಅವರ ಜೊತೆಗೆ ಕನ್ನಡ ಚಿತ್ರರಂಗದ ಅನೇಕರು ಕೈ ಜೋಡಿಸಿದ್ದಾರೆ.

‘ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೊವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ. ನಿಮ್ಮ ಉಪ್ಪಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ತಿಳಿಸುವ ಮೂಲಕ ಉಪೇಂದ್ರ ಈ ಕೆಲಸವನ್ನು ಸೋಮವಾರ (ಮೇ10) ಆರಂಭಿಸಿದರು.

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಅನೇಕರು ಕೈ ಜೋಡಿಸಿದ್ದಾರೆ. ತಮ್ಮ ಕೈಲಾದಷ್ಟು ದೇಣಿಗೆ ನೀಡುವ ಮೂಲಕ ಅಗತ್ಯ ಇರುವವರಿಗೆ ನೆರವು ತಲುಪುವಂತೆ ಮಾಡುತ್ತಿದ್ದಾರೆ. ಈ ಬಗ್ಗೆ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ ‘ಬಿ. ಸರೋಜಮ್ಮ ಅವರು ನಾಲ್ಕು ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದಾರೆ. ಸಹಕಲಾವಿದರಿಗೆ ಕಿಟ್ ಕೊಡುವ ಜವಾಬ್ದಾರಿ ನಾನು ತೆಗೆದುಕೊಂಡಿರುವುದರಿಂದ ಅಮ್ಮ ಕೊಡುತ್ತಿರುವ ಹಣವನ್ನು ಸಾಧುಕೋಕಿಲರವರ ನೇತೃತ್ವದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವವರಿಗೆ ನೀಡಲು ತಿಳಿಸಿದ್ದಾರೆ’ ಎಂದು ಉಪೇಂದ್ರ ಹೇಳಿದ್ದಾರೆ.

‘ನಟ ಸಾಧುಕೋಕಿಲ ಅವರು ಎರಡೂವರೆ ಲಕ್ಷ ರೂಪಾಯಿ ಮೊತ್ತದಲ್ಲಿ ದಿನಸಿ ಕಿಟ್​ಗಳನ್ನು ಆರ್ಕೆಸ್ಟ್ರಾ ಕಲಾವಿದರಿಗೆ ಹಂಚಲು ಮುಂದೆ ಬಂದಿದ್ದಾರೆ. ವಿತರಣೆಯ ವಿವರಗಳನ್ನು ಸದ್ಯದಲ್ಲೇ ತಿಳಿಸುತ್ತಾರೆ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ದೇಶಕ ಪವನ್​ ಒಡೆಯರ್​ 20 ಸಾವಿರ ರೂಪಾಯಿ ನೀಡಿದ್ದಾರೆ. ನಟ ಶೋಭ್​ರಾಜ್​ ಅವರು 10 ಸಾವಿರ ರೂ. ಕೊಟ್ಟಿದ್ದಾರೆ. ಹೀಗೆ ಅನೇಕರು ತಮ್ಮ ತಮ್ಮ ಅಳಿಲು ಸೇವೆ ಮೂಲಕ ಚಿತ್ರರಂಗದಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವಾಗುತ್ತಿದ್ದಾರೆ.

ಇದನ್ನೂ ಓದಿ: 

Sri Murali: ಕೊವಿಡ್​ ಸಂಕಷ್ಟದಲ್ಲಿ 5 ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಊಟ ನೀಡುತ್ತಿರುವ ನಟ ಶ್ರೀಮುರಳಿ

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ