ಸಾಯಿ ಕುಮಾರ್ ಮಗನ ಹೊಸ ಚಿತ್ರ ‘ಆದಿ ರುದ್ರ’: 5 ಭಾಷೆಗಳಲ್ಲಿ ಬರಲಿದೆ ಈ ಸಿನಿಮಾ

ದಸರಾ ಹಬ್ಬದ ಸಂದರ್ಭದಲ್ಲಿ ‘ಆದಿ ರುದ್ರ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಆದಿ ಸಾಯಿ ಕುಮಾರ್ ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ. 2027ರ ಜನವರಿಯಲ್ಲಿ ಸಿನಿಮಾದ ಚಿತ್ರೀಕರಣ ಆರಂಭ ಆಗಲಿದೆ. ಈ ಚಿತ್ರದ ಬಗ್ಗೆ ಇಲ್ಲಿದೆ ವಿವರ..

ಸಾಯಿ ಕುಮಾರ್ ಮಗನ ಹೊಸ ಚಿತ್ರ ‘ಆದಿ ರುದ್ರ’: 5 ಭಾಷೆಗಳಲ್ಲಿ ಬರಲಿದೆ ಈ ಸಿನಿಮಾ
Rudrra Title Poster

Updated on: Oct 21, 2026 | 8:44 PM

ಹಿರಿಯ ನಟ ಸಾಯಿ ಕುಮಾರ್ ಅವರ ಪುತ್ರ ಆದಿ ನಟಿಸಲಿರುವ ಹೊಸ ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ. ‘ಆದಿ ರುದ್ರ’ ಶೀರ್ಷಿಕೆಯ ಈ ಸಿನಿಮಾವನ್ನು ‘ತ್ರಿಶೂಲ್ ಎಂಟರ್‌ಟೈನ್‌ಮೆಂಟ್ಸ್’ ಲಾಂಛನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರವು ದೈವಿಕ ನಿಗೂಢತೆ ಹಾಗೂ ರೋಚಕ ಸನ್ನಿವೇಶಗಳನ್ನು ಒಳಗೊಂಡ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಆದಿ ರುದ್ರ’ ಸಿನಿಮಾ ಸಿದ್ಧವಾಗಲಿದೆ.

ಇದು ತ್ರಿಶೂಲ್ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯ ಮೂರನೇ ಸಿನಿಮಾ ಆಗಲಿದೆ. ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ದಂಡುಪಾಳ್ಯ’ ಮತ್ತು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಮೂಲಕ ಯಶಸ್ಸು ಕಂಡ ಪ್ರಶಾಂತ್ ಜಿ. ರುದ್ರಪ್ಪ ಅವರು ಈಗ ‘ಆದಿ ರುದ್ರ’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ನವರಸನ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಈ ಸಿನಿಮಾದಲ್ಲಿ 1960ರಿಂದ 1990ರವರೆಗಿನ ಕಾಲಘಟ್ಟದ ಕಥೆ ಇರಲಿದೆ. ಆ ಕಾಲದ ಜೀವನಶೈಲಿ, ವಾತಾವರಣ, ಪಾತ್ರಗಳು ಮತ್ತು ದೃಶ್ಯ ವೈಭವವನ್ನು ತೋರಿಸಲಾಗುತ್ತದೆ. ದೈವತ್ವ, ನಂಬಿಕೆ, ಆಧ್ಯಾತ್ಮಿಕತೆ ಹಾಗೂ ನಿಗೂಢ ರಹಸ್ಯಗಳ ಸುತ್ತ ಕಥೆ ಸಾಗುತ್ತದೆ ಎಂದು ಚಿತ್ರತಂಡ ಹೇಳಿದೆ. 2027ರ ಜನವರಿಯಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭ ಆಗಲಿದೆ.

ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರಿಗೆ ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಸಖತ್ ಬೇಡಿಕೆ ಇದೆ. ‘ವಿರೂಪಾಕ್ಷ’, ‘ಮಂಗಳವಾರಂ’, ‘ಮಹಾರಾಜ’ ಮುಂತಾದ ಸಿನಿಮಾಗಳ ಮೂಲಕ ಅವರು ಯಶಸ್ಸು ಕಂಡಿದ್ದಾರೆ. ಈಗ ಅವರು ‘ಆದಿ ರುದ್ರ’ ಸಿನಿಮಾಗೆ ಸಂಗೀತ ಸಂಯೋಜಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್: ಸನ್ಮಾನ ಮಾಡಿದ ಶಿವಣ್ಣ

ಈ ಸಿನಿಮಾಗೆ ಎ.ಜೆ. ಶೆಟ್ಟಿ ಅವರು ಛಾಯಾಗ್ರಹಣ ಮಾಡಲಿದ್ದಾರೆ. ಆದಿ ಸಾಯಿಕುಮಾರ್ ಜೊತೆ ಬೇರೆ ಯಾವೆಲ್ಲ ಕಲಾವಿದರು ನಟಿಸಲಿದ್ದಾರೆ ಎಂಬ ವಿವರವನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ನೀಡಲಿದೆ. ಐದು ಭಾಷೆಗಳಲ್ಲಿ ನಿರ್ಮಾಣ ಆಗಲಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಸಿನಿಮಾದ ಟೈಟಲ್ ಪೋಸ್ಟರ್ ಗಮನ ಸೆಳೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us