Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ

Sai Pallavi | Ramya Divya Spandana: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ನಟಿ ಸಾಯಿ ಪಲ್ಲವಿ ಹೇಳಿದ ಮಾತಿಗೆ ಪರ-ವಿರೋಧ ವ್ಯಕ್ತವಾಗುತ್ತಿದೆ. ರಮ್ಯಾ ಅವರು ಸಾಯಿ ಪಲ್ಲವಿಯ ಪರವಾಗಿ ನಿಂತಿದ್ದಾರೆ.

Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
ಸಾಯಿ ಪಲ್ಲವಿ, ರಮ್ಯಾ ದಿವ್ಯಾ ಸ್ಪಂದನಾ
TV9kannada Web Team

| Edited By: Madan Kumar

Jun 16, 2022 | 1:03 PM

ನಟಿ ರಮ್ಯಾ (Ramya Divya Spandana) ಅವರು ಸಮಾಜದ ಅನೇಕ ಆಗುಹೋಗುಗಳ ಬಗ್ಗೆ ಪ್ರತಿಕ್ರಿಯಿಸುತ್ತಾ ಇರುತ್ತಾರೆ. ಈಗ ಅವರು ಸಾಯಿ ಪಲ್ಲವಿ ಪರವಾಗಿ ಬ್ಯಾಟ್​ ಬೀಸಿದ್ದಾರೆ. ‘ವಿರಾಟ ಪರ್ವಂ’ ಸಿನಿಮಾದ ಪ್ರಚಾರದ ವೇಳೆ ಸಾಯಿ ಪಲ್ಲವಿ (Sai Pallavi) ನೀಡಿದ ಒಂದು ಹೇಳಿಕೆ ವಿವಾದಕ್ಕೆ ಕಾರಣ ಆಗಿದೆ. ಧರ್ಮ ಮತ್ತು ದೇವರ ಹೆಸರಿನಲ್ಲಿ ಜನರ ಮೇಲೆ ಹಲ್ಲೆ ಮಾಡುವುದು ತಪ್ಪು ಎಂದು ಹೇಳಿರುವ ಸಾಯಿ ಪಲ್ಲವಿ ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮತ್ತು ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ಅವರಿಗೆ ‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ ಬೆಂಬಲ ನೀಡಿದ್ದಾರೆ. ಈ ಕುರಿತು ರಮ್ಯಾ (Ramya) ಟ್ವೀಟ್​ ಮಾಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ವಿಷಯ ಚರ್ಚೆ ಆಗುತ್ತಿದೆ. ಇದು ಹಲವು ಸ್ವರೂಪಗಳನ್ನು ಪಡೆದುಕೊಳ್ಳುತ್ತಿದೆ.

ರಾಣಾ ದಗ್ಗುಬಾಟಿ ಜೊತೆ ‘ವಿರಾಟ ಪರ್ವಂ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅಭಿನಯಸಿದ್ದಾರೆ. ಈ ಚಿತ್ರದ ಪ್ರಚಾರದ ಸಲುವಾಗಿ ಅವರು ಇತ್ತೀಚೆಗೆ ನೀಡಿದ ಒಂದು ಸಂದರ್ಶನದಿಂದ ವಿವಾದ ಸೃಷ್ಟಿ ಆಗಿದೆ. ‘ಆ ಕಾಲದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಹತ್ಯೆ ಮಾಡಲಾಯಿತು ಎಂದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ತೋರಿಸಲಾಗಿದೆ. ಅದನ್ನು ನೀವು ಒಂದು ಧಾರ್ಮಿಕ ಸಂಘರ್ಷ ಎಂದು ನೋಡುವುದಾದರೆ, ಇತ್ತೀಚೆಗೆ ಗೋವು ಸಾಗಿಸುತ್ತಿದ್ದ ಒಬ್ಬ ಮುಸ್ಲಿಂ ಡ್ರೈವರ್​ ಮೇಲೆ ಹಲ್ಲೆ ಮಾಡಲಾಯಿತು ಹಾಗೂ ಜೈ ಶ್ರೀರಾಮ್​ ಎಂದು ಹೇಳುವಂತೆ ಬಲವಂತ ಮಾಡಲಾಯಿತು. ಈ ಎರಡು ಘಟನೆಗಳ ನಡುವೆ ವ್ಯತ್ಯಾಸ ಎಲ್ಲಿದೆ? ನಾವು ಒಳ್ಳೆಯ ಮನುಷ್ಯರಾಗಿರಬೇಕು’ ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

ಈ ಕುರಿತು ಪ್ರಕಟ ಆಗಿರುವ ಒಂದು ವರದಿಯನ್ನು ರಮ್ಯಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಶೋಷಣೆಗೆ ಒಳಗಾದವರನ್ನು ರಕ್ಷಿಸಬೇಕು’ ಎಂದು ಸಾಯಿ ಪಲ್ಲವಿ ಹೇಳಿರುವ ಮಾತನ್ನು ರಮ್ಯಾ ಪುನಃ ಬರೆದುಕೊಂಡಿದ್ದಾರೆ. ಸತ್ಯ ನುಡಿಯುವ ಧೈರ್ಯ ತೋರಿದ್ದಕ್ಕೆ ತಮ್ಮ ಪ್ರಶಂಸೆ ಇದೆ ಎಂಬರ್ಥದಲ್ಲಿ ಅವರು ಟ್ವೀಟ್​ ಮಾಡಿದ್ದಾರೆ.

ಸಾಯಿ ಪಲ್ಲವಿ ನೀಡಿದ ಹೇಳಿಕೆ ಅನೇಕರ ಗಮನ ಸೆಳೆಯುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವು ನೆಟ್ಟಿಗರು ಸಾಯಿ ಪಲ್ಲವಿ ಅವರನ್ನು ಟ್ರೋಲ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada