‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ

777 Charlie Trailer: ದಿನದಿಂದ ದಿನಕ್ಕೆ ಸಾಯಿ ಪಲ್ಲವಿ ಅವರು ಕನ್ನಡಿಗರಿಗೆ ಹೆಚ್ಚು ಇಷ್ಟ ಆಗುತ್ತಿದ್ದಾರೆ. ಈಗ ಅವರು ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾಗೆ ಸಾಥ್​ ನೀಡುತ್ತಿರುವುದು ವಿಶೇಷ.

‘777 ಚಾರ್ಲಿ’ ಟ್ರೇಲರ್​ಗಾಗಿ ರಕ್ಷಿತ್ ಶೆಟ್ಟಿಗೆ ಸಾಯಿ ಪಲ್ಲವಿ ಸಾಥ್​; ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾದ ‘ಪ್ರೇಮಂ’ ಬ್ಯೂಟಿ
ಸಾಯಿ ಪಲ್ಲವಿ, ರಕ್ಷಿತ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: May 16, 2022 | 7:36 AM

ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಇಷ್ಟಪಡುತ್ತಾರೆ. ದೇಶಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ಈವರೆಗೂ ಅವರು ಒಂದೇ ಒಂದು ಕನ್ನಡ ಸಿನಿಮಾ ಮಾಡಿಲ್ಲವಾದರೂ ಕನ್ನಡಿಗರು ಕೂಡ ಸಾಯಿ ಪಲ್ಲವಿಯ ಕೆಲಸಗಳಿಗೆ ಮೆಚ್ಚುಗೆ ಸೂಚಿಸುತ್ತ ಬಂದಿದ್ದಾರೆ. ‘ಪ್ರೇಮಂ’ ಬೆಡಗಿಯ ಸಿಂಪಲ್​ ನಡೆ-ನುಡಿ ಬಗ್ಗೆ ಕರುನಾಡಿನ ಮಂದಿಗೆ ತುಂಬ ಗೌರವ ಇದೆ. ಆ ಗೌರವವನ್ನು ಇನ್ನಷ್ಟು ಹೆಚ್ಚಿಸುವಂತಹ ಕಾರ್ಯಗಳನ್ನು ಸಾಯಿ ಪಲ್ಲವಿ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ‘ಗಾರ್ಗಿ’ ಅನೌನ್ಸ್​ ಆಯಿತು. ಕನ್ನಡದಲ್ಲೂ ಮೂಡಿಬರಲಿರುವ ಆ ಚಿತ್ರಕ್ಕೆ ಸ್ವತಃ ಸಾಯಿ ಪಲ್ಲವಿ ಡಬ್​ ಮಾಡಲಿದ್ದಾರೆ. ಅವರು ಕನ್ನಡದಲ್ಲಿ ಡೈಲಾಗ್​ ಹೇಳುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್​ ಆಗಿತ್ತು ಹಾಗೂ ಕನ್ನಡಿಗರ ಮನ ಗೆದ್ದಿತ್ತು. ಈಗ ಸಾಯಿ ಪಲ್ಲವಿ ಅವರು ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಮತ್ತಷ್ಟು ಹತ್ತಿರ ಆಗುತ್ತಿದ್ದಾರೆ. ಹೌದು, ರಕ್ಷಿತ್​ ಶೆಟ್ಟಿ  (Rakshit Shetty) ನಟನೆಯ ‘777 ಚಾರ್ಲಿ’ (777 Charlie) ಸಿನಿಮಾದ ಟ್ರೇಲರ್​ ಅನ್ನು ಅವರು ರಿಲೀಸ್​ ಮಾಡಲಿದ್ದಾರೆ. ಪರಭಾಷೆಯ ಅನೇಕ ಸ್ಟಾರ್​ ಕಲಾವಿದರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಲಿದ್ದು, ಆ ಪೈಕಿ ಸಾಯಿ ಪಲ್ಲವಿ ಅವರು ವಿಶೇಷವಾಗಿ ಗಮನ ಸೆಳೆಯುತ್ತಿದ್ದಾರೆ.

ಕಿರಣ್​ ರಾಜ್​ ನಿರ್ದೇಶನ ಮಾಡಿರುವ ‘777 ಚಾರ್ಲಿ’ ಸಿನಿಮಾ ಜೂ.10ರಂದು ಬಿಡುಗಡೆ ಆಗಲಿದೆ. ಈಗಾಗಲೇ ರಿಲೀಸ್​ ಆಗಿರುವ ಟೀಸರ್​, ಹಾಡು ಮತ್ತು ಪೋಸ್ಟರ್​ ಗಮನ ಸೆಳೆದಿದೆ. ಈಗ ಟ್ರೇಲರ್​ ಮೂಲಕ ನಿರೀಕ್ಷೆ ಹೆಚ್ಚಿಸುವ ಕೆಲಸ ಆಗುತ್ತಿದೆ. ಇಂದು (ಮೇ 16) ಮಧ್ಯಾಹ್ನ 12.12 ಗಂಟೆಗೆ ‘777 ಚಾರ್ಲಿ’ ಟ್ರೇಲರ್​ ರಿಲೀಸ್​ ಆಗಲಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಎಲ್ಲ ಭಾಷೆಯ ಟ್ರೇಲರ್​ ಅನ್ನು ಆಯಾ ಭಾಷೆಯ ಸ್ಟಾರ್​ ಕಲಾವಿದರು ಅವರವರ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಬಿಡುಗಡೆ ಮಾಡಲಿದ್ದಾರೆ. ರಕ್ಷಿತ್​ ಶೆಟ್ಟಿ ಮತ್ತು ಇಡೀ ತಂಡಕ್ಕೆ ಶುಭ ಕೋರಲಿದ್ದಾರೆ.

ಇದನ್ನೂ ಓದಿ
Image
Sai Pallavi Birthday: ಕನ್ನಡದಲ್ಲಿ ಸಾಯಿ ಪಲ್ಲವಿ ಡೈಲಾಗ್; ಬರ್ತಡೇ ಪ್ರಯುಕ್ತ ಹೊಸ ಚಿತ್ರ ‘ಗಾರ್ಗಿ’ ಮೇಕಿಂಗ್​ ವಿಡಿಯೋ ಬಹಿರಂಗ
Image
Sai Pallavi: ಮದುವೆ ಬಗ್ಗೆ ಗಾಸಿಪ್​ ಹಬ್ಬಿಸಿದವರಿಗೆ ಕಾಲು ತೋರಿಸಿ ಖಡಕ್​ ಉತ್ತರ ನೀಡಿದ ಸಾಯಿ ಪಲ್ಲವಿ
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ
Image
ಚಿತ್ರರಂಗಕ್ಕೆ ಕಾಲಿಟ್ಟ ಸಾಯಿ ಪಲ್ಲವಿ ತಂಗಿ ಪೂಜಾ; ಅಕ್ಕನಂತೆ ಮಿಂಚಲು ಸಾಧ್ಯವೇ?

ತೆಲುಗು ಟ್ರೇಲರ್​ ರಿಲೀಸ್​ ಮಾಡುತ್ತಿರುವ ಸಾಯಿ ಪಲ್ಲವಿ ಅವರಿಗೆ ದಗ್ಗುಬಾಟಿ ವೆಂಕಟೇಶ್​, ಲಕ್ಷ್ಮಿ ಮಂಚು ಕೂಡ ಸಾಥ್​ ನೀಡಲಿದ್ದಾರೆ. ಮಲಯಾಳಂನಲ್ಲಿ ನಿವಿನ್​ ಪೌಲಿ, ಟೊವಿನೋ ಥಾಮಸ್​ ಮುಂತಾದವರು ಬಿಡುಗಡೆ ಮಾಡಲಿದ್ದಾರೆ. ತಮಿಳಿನಲ್ಲಿ ಸ್ಟಾರ್​ ನಟ ಧನುಶ್​ ಅವರು ಟ್ರೇಲರ್​ ಬಿಡುಗಡೆ ಮಾಡಲಿರುವುದು ವಿಶೇಷ.

ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆಯನ್ನು ಒಳಗೊಂಡಿರುವ ‘777 ಚಾರ್ಲಿ’ ಸಿನಿಮಾಗೆ ನೊಬಿನ್​ ಪೌಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ಷಿತ್‌ ಶೆಟ್ಟಿ ಅವರು ತಮ್ಮ ಹೋಮ್‌ ಬ್ಯಾನರ್‌ ‘ಪರಂವಾಃ ಸ್ಟುಡಿಯೋಸ್’ ಅಡಿಯಲ್ಲಿ ಸಿನಿಮಾವನ್ನು ನಿರ್ಮಿಸಿದ್ದಾರೆ.

‘777 ಚಾರ್ಲಿ’ಗೆ ರಾಣಾ ದಗ್ಗುಬಾಟಿ ಮೆಚ್ಚುಗೆ:

ಈಗಾಗಲೇ ‘777 ಚಾರ್ಲಿ’ ಸಿನಿಮಾ ನೋಡಿರುವ ರಾಣಾ ದಗ್ಗುಬಾಟಿ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರಿಗೆ ಈ ಚಿತ್ರ ಸಖತ್​ ಇಷ್ಟ ಆಗಿದೆ. ಹಾಗಾಗಿ ವಿತರಣೆ ಮಾಡಲು ಮುಂದೆ ಬಂದಿದ್ದಾರೆ. ಈ ವಿಷಯವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವುದರ ಜೊತೆಗೆ ಸಿನಿಮಾ ಹೇಗಿದೆ ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘777 ಚಾರ್ಲಿ ಚಿತ್ರವನ್ನು ನೋಡುವ ಅವಕಾಶ ಸಿಕ್ಕಿತು. ಎಂಥ ಅದ್ಭುತ ಟ್ರೀಟ್​ ಇದು. ಒಟ್ಟಾರೆ ಹೊಸತನದಿಂದ ಕೂಡಿದೆ. ಈ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದೇನೆ’ ಎಂದು ರಾಣಾ ದಗ್ಗುಬಾಟಿ ಟ್ವೀಟ್​ ಮಾಡಿದ್ದಾರೆ.

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ