AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaam Soldier: ‘ಜೇಮ್ಸ್​’ ಹೊಸ ಹಾಡು ‘ಸಲಾಂ ಸೋಲ್ಜರ್​’ ರಿಲೀಸ್​; ಸಲಾಂ​ ಪುನೀತ್​ ಎಂದ ಅಪ್ಪು ಫ್ಯಾನ್ಸ್​​

Puneeth Rajkumar: ಪುನೀತ್​ ರಾಜ್​ಕುಮಾರ್​ ನಟನೆಯ ‘ಜೇಮ್ಸ್​’ ಚಿತ್ರದ ಹಾಡುಗಳಿಗೆ ಚರಣ್​ ರಾಜ್​ ಸಂಗೀತ ನೀಡಿದ್ದಾರೆ. ಈಗ ‘ಸಲಾಂ ಸೋಲ್ಜರ್​’ ಹಾಡು ಬಿಡುಗಡೆ ಆಗಿದೆ.

Salaam Soldier: ‘ಜೇಮ್ಸ್​’ ಹೊಸ ಹಾಡು ‘ಸಲಾಂ ಸೋಲ್ಜರ್​’ ರಿಲೀಸ್​; ಸಲಾಂ​ ಪುನೀತ್​ ಎಂದ ಅಪ್ಪು ಫ್ಯಾನ್ಸ್​​
ಪುನೀತ್​ ರಾಜ್​ಕುಮಾರ್
TV9 Web
| Edited By: |

Updated on:Mar 11, 2022 | 11:43 AM

Share

‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿನಯದ ಬಹುನಿರೀಕ್ಷಿತ ‘ಜೇಮ್ಸ್​’ ಸಿನಿಮಾದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈಗಾಗಲೇ ಈ ಚಿತ್ರಕ್ಕೆ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಅಭಿಮಾನಿಗಳೇ ಮುಂದೆ ನಿಂತು ಈ ಸಿನಿಮಾಗೆ ಪ್ರಮೋಷನ್​ ನೀಡುತ್ತಿದ್ದಾರೆ. ಅದರ ಜೊತೆಗೆ ಹಾಡುಗಳ ಮೂಲಕ ಕೂಡ ‘ಜೇಮ್ಸ್​’ ಚಿತ್ರ ಹೈಪ್​ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ‘ಟ್ರೇಡ್​ಮಾರ್ಕ್​..’ ಲಿರಿಕಲ್​ ವಿಡಿಯೋ ಸಖತ್​ ಸೌಂಡು ಮಾಡಿತ್ತು. ಈಗ ‘ಸಲಾಂ ಸೋಲ್ಜರ್​..’ (Salaam Soldier Song) ಹಾಡಿನ ಲಿರಿಕಲ್​ ವಿಡಿಯೋ ರಿಲೀಸ್​ ಆಗಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಬಿಡುಗಡೆ ಆಗಿರುವ ಈ ಹಾಡಿನಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಸೈನಿಕನ ಗೆಟಪ್​ ಧರಿಸಿದ್ದಾರೆ. ಅವರನ್ನು ಕಂಡು ಅಭಿಮಾನಿಗಳು ‘ಸಲಾಂ ಅಪ್ಪು’ ಎಂದು ಜೈ ಜೈಕಾರ ಹಾಕುತ್ತಿದ್ದಾರೆ. ಈ ಚಿತ್ರದ ಹಾಡುಗಳಿಗೆ ಯುವ ಸಂಗೀತ ನಿರ್ದೇಶಕ ಚರಣ್​ ರಾಜ್​ ಸಂಗೀತ ನೀಡಿದ್ದಾರೆ. ಕಿಶೋರ್​ ಪತ್ತಿಕೊಂಡ ಅವರ ನಿರ್ಮಾಣದಲ್ಲಿ ಸಿನಿಮಾ ಮೂಡಿಬಂದಿದ್ದು, ಚೇತನ್​ ಕುಮಾರ್​ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ‘ಜೇಮ್ಸ್​’ ಸಿನಿಮಾ (James Movie) ಬಗ್ಗೆ ಅಭಿಮಾನಿಗಳ ವಲಯದಲ್ಲಿ ಎಲ್ಲಿಲ್ಲದ ನಿರೀಕ್ಷೆ ಸೃಷ್ಟಿ ಆಗಿದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ. ಈಗಾಗಲೇ ಚಿತ್ರಕ್ಕೆ ಟಿಕೆಟ್​ ಬುಕಿಂಗ್​ ಓಪನ್​ ಆಗಿದ್ದು, ಟಿಕೆಟ್​ ಖರೀದಿಸಲು ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್​ ಮುಗಿ ಬಿದ್ದಿದ್ದಾರೆ.

ನಿರ್ದೇಶನದ ಜೊತೆಗೆ ಹಾಡುಗಳಿಗೆ ಸಾಹಿತ್ಯ ಬರೆಯುವ ಮೂಲಕವೂ ಫೇಮಸ್​ ಆದವರು ಚೇತನ್​ ಕುಮಾರ್​. ‘ಸಲಾಂ ಸೋಲ್ಜರ್​..’ ಹಾಡಿಗೆ ಅವರೇ ಸಾಹಿತ್ಯ ಬರೆದಿದ್ದಾರೆ. ಸಂಜಿತ್​ ಹೆಗಡೆ ಮತ್ತು ಚರಣ್​ ರಾಜ್​​​ ಕಂಠದಲ್ಲಿ ಈ ಗೀತೆ ಮೂಡಿಬಂದಿದೆ. ಸಾಂಗ್​​ ನೋಡಿ ಖುಷಿಪಟ್ಟಿರುವ ಅಭಿಮಾನಿಗಳು ಸಿನಿಮಾ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

ಹಲವು ಕಾರಣಗಳಿಂದಾಗಿ ‘ಜೇಮ್ಸ್​’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಪುನೀತ್​ ರಾಜ್​ಕುಮಾರ್​ ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ಇದು. ಅಲ್ಲದೇ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಪಾತ್ರಕ್ಕೆ ಶಿವಣ್ಣ ಧ್ವನಿ ನೀಡಿದ್ದಾರೆ. ‘ರಾಜಕುಮಾರ’ ಬಳಿಕ ನಟಿ ಪ್ರಿಯಾ ಆನಂದ್​ ಅವರು ಈ ಚಿತ್ರದಲ್ಲಿ ಎರಡನೇ ಬಾರಿಗೆ ಪುನೀತ್​ಗೆ ಜೋಡಿ ಆಗಿದ್ದಾರೆ.

ಹಲವು ಚಿತ್ರಮಂದಿರಗಳಲ್ಲಿ ಈಗಾಗಲೇ ಪುನೀತ್​ ಕಟೌಟ್​ ತಲೆ ಎತ್ತಿದೆ. ಬೆಂಗಳೂರು ಸೇರಿದಂತೆ ಹಲವಡೆ ‘ಜೇಮ್ಸ್​’ ಸಿನಿಮಾದ ಮುಂಗಡ ಬುಕಿಂಗ್​ ಓಪನ್​ ಮಾಡಲಾಗಿದೆ. ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ. ವಿಶ್ವಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಬಹುತೇಕ ಟಿಕೆಟ್​ಗಳು ಒಂದು ವಾರಕ್ಕೂ ಮುನ್ನವೇ ಸೋಲ್ಡ್​ ಔಟ್​ ಆಗಿರುವ ಕಾರಣ ಮೊದಲ ದಿನ ಭರ್ಜರಿ ಕಲೆಕ್ಷನ್ ಆಗಲಿದೆ. ‘ಜೇಮ್ಸ್​’ ಚಿತ್ರದಲ್ಲಿ ಚಿಕ್ಕಣ್ಣ, ಗಜಪಡೆ ಹರ್ಷ, ತಿಲಕ್​ ಶೇಖರ್​ ಅವರು ಹೀರೋ ಫ್ರೆಂಡ್ಸ್​ ಪಾತ್ರ ಮಾಡಿದ್ದಾರೆ. ಶ್ರೀಕಾಂತ್​ ಮುಕೇಶ್​ ರಿಷಿ, ಅನು ಪ್ರಭಾಕರ್​, ಆದಿತ್ಯ ಮೆನನ್​, ಸಾಧುಕೋಕಿಲ, ರಂಗಾಯಣ ರಘು ಸೇರಿ ಹಲವಾರು ಕಲಾವಿದರು ನಟಿಸಿದ್ದಾರೆ. ರವಿ ಸಂತೆ ಹಕ್ಲು ಕಲಾ ನಿರ್ದೇಶನ, ದೀಪು ಎಸ್​. ಕುಮಾರ್​ ಸಂಕಲನ, ಸ್ವಾಮಿ ಜೆ. ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ:

ಯೋಗಿ ಕಿವಿಗೆ ಏಟು ಬಿದ್ದಾಗ ಪುನೀತ್​ ಏನು ಮಾಡಿದ್ರು? ‘ಹುಡುಗರು’ ಘಟನೆ ನೆನೆದ ರವಿ ವರ್ಮಾ

ಪುನೀತ್​ ಫ್ಯಾನ್ಸ್​ ಕುತ್ತಿಗೆ ಮೇಲೆ ‘ಜೇಮ್ಸ್​’ ಟ್ಯಾಟೂ; ವೈರಲ್​ ಆಗ್ತಿದೆ ಅಭಿಮಾನದ ಫೋಟೋ

Published On - 11:12 am, Fri, 11 March 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ