Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’

Hombale Films | Salaar Movie Release Date: ‘ಸಲಾರ್​’ ಸಿನಿಮಾದಿಂದ ಪ್ರಭಾಸ್​ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗಲಿದೆ ಎಂಬ ನಿರೀಕ್ಷೆ ಇದೆ. ಸದ್ಯ ರಿಲೀಸ್​ ಮಾಡಿರುವ ಹೊಸ ಪೋಸ್ಟರ್​ ವೈರಲ್​ ಆಗುತ್ತಿದೆ.

Prabhas: ‘ಸಲಾರ್​’ ನೋಡಲು ಇನ್ನೂ 1 ವರ್ಷ ಕಾಯಬೇಕು; ರಿಲೀಸ್​ ಡೇಟ್​ ತಿಳಿಸಿದ ‘ಹೊಂಬಾಳೆ ಫಿಲ್ಮ್ಸ್​’
‘ಸಲಾರ್’ ಪ್ರಭಾಸ್​
Follow us
TV9 Web
| Updated By: ಮದನ್​ ಕುಮಾರ್​

Updated on:Aug 15, 2022 | 2:16 PM

ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಅನೇಕ ಬಹುನಿರೀಕ್ಷಿತ ಚಿತ್ರಗಳಿಗೆ ಬಂಡವಾಳ ಹೂಡುತ್ತಿದೆ. ಆ ಮೂಲಕ ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಬಿಗ್​ ಬಜೆಟ್​ನಲ್ಲಿ ಅವರು ‘ಸಲಾರ್​’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ದೊಡ್ಡ ಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ. ಅಂಥವರಿಗಾಗಿ ಇಂದು (ಆಗಸ್ಟ್​ 15) ಹೊಸ ಅಪ್​ಡೇಟ್​ ನೀಡಲಾಗಿದೆ. ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಚಿತ್ರತಂಡ ರಿಲೀಸ್​ ಡೇಟ್​ ಘೋಷಿಸಿದೆ. 2023ರ ಸೆಪ್ಟೆಂಬರ್​ 28ಕ್ಕೆ ‘ಸಲಾರ್​’ ಸಿನಿಮಾ (Salaar Movie) ಬಿಡುಗಡೆ ಆಗಲಿದೆ. ಪ್ರಭಾಸ್​ (Prabhas) ಅಭಿಮಾನಿಗಳು ಈ ಸುದ್ದಿ ಕೇಳಿ ಖುಷಿ ಆಗಿದ್ದಾರೆ. ಆದರೆ ಇನ್ನೂ ಒಂದು ವರ್ಷ ಕಾಯಬೇಕಲ್ಲ ಎಂಬ ಬೇಸರವೂ ಇದೆ. ನಿರ್ದೇಶಕ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕಾಗಿ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿದ್ದಾರೆ.

ಆಗಸ್ಟ್​ 15ರಂದು ಮಧ್ಯಾಹ್ನ 12.58ಕ್ಕೆ ದೊಡ್ಡ ಅನೌನ್ಸ್​ಮೆಂಟ್​ ಮಾಡುವುದಾಗಿ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಘೋಷಿಸಿತ್ತು. ಅದರಂತೆಯೇ ಈ ಬ್ರೇಕಿಂಗ್​ ನ್ಯೂಸ್​ ನೀಡಲಾಗಿದೆ. ಹೊಸ ಪೋಸ್ಟರ್​ ಜೊತೆಯಲ್ಲಿ ರಿಲೀಸ್​ ದಿನಾಂಕವನ್ನು ಜಗಜ್ಜಾಹೀರು ಮಾಡಲಾಗಿದೆ. ಪ್ರಭಾಸ್​ ಅವರಿಗೆ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಬಾಹುಬಲಿ’ ಬಳಿಕ ಅವರ ನಟಿಸಿದ ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ಸೋಲುಂಡವು. ಹಾಗಾಗಿ ಅವರು ‘ಸಲಾರ್​’ ಸಿನಿಮಾ ಮೂಲಕ ಒಂದು ಗೆಲುವು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಈ ಚಿತ್ರದ ಮೇಲೆ ಅವರು ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ.

ಇದನ್ನೂ ಓದಿ
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
Prashanth Neel Birthday: ಬೆಂಗಳೂರಿಗೆ ಬಂದು ಪ್ರಶಾಂತ್​ ನೀಲ್​ ಬರ್ತ್​ಡೇ ಪಾರ್ಟಿಯಲ್ಲಿ ಭಾಗಿಯಾದ ಪ್ರಭಾಸ್​
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?
Image
‘ಬಾಹುಬಲಿ’ ಚಿತ್ರದಿಂದ ಪ್ರಭಾಸ್​ಗೆ ಆದ ದೊಡ್ಡ ನಷ್ಟ ಏನು? ಅಂತೂ ಬಾಯ್ಬಿಟ್ಟ ಪ್ಯಾನ್​ ಇಂಡಿಯಾ ಸ್ಟಾರ್​

‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾದ ಗೆಲುವಿನಿಂದ ನಿರ್ದೇಶಕ ಪ್ರಶಾಂತ್​ ನೀಲ್​ ಅವರಿಗೆ ಭರ್ಜರಿ ಡಿಮ್ಯಾಂಡ್​ ಹೆಚ್ಚಿತು. ಅವರ ಮುಂದಿನ ಸಿನಿಮಾವಾಗಿ ‘ಸಲಾರ್​’ ಸೆಟ್ಟೇರಿತು. ಈ ಸಿನಿಮಾದಲ್ಲಿ ಅವರು ಯಾವ ಕಥೆ ಹೇಳಲಿದ್ದಾರೆ ಎಂಬ ಕೌತುಕ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಸಿನಿಮಾವನ್ನು ದೊಡ್ಡದಾಗಿ ಮಾಡುವುದು ಪ್ರಶಾಂತ್​ ನೀಲ್​ ಜಾಯಮಾನ. ಅದಕ್ಕೆ ಸಹಜವಾಗಿಯೇ ಹೆಚ್ಚಿನ ಸಮಯ ಹಿಡಿಯಲಿದೆ. ಪ್ರಸ್ತುತ ‘ಸಲಾರ್​’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ.

ಖ್ಯಾತ ನಟಿ ಶ್ರುತಿ ಹಾಸನ್​ ಅವರು ಪ್ರಭಾಸ್​ಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಕೆಲಸ ಮಾಡಿದ ಅನೇಕ ಪ್ರತಿಭಾವಂತ ತಂತ್ರಜ್ಞರೇ ‘ಸಲಾರ್​’ ಟೀಮ್​ನಲ್ಲೂ ಕೆಲಸ ಮಾಡುತ್ತಿದ್ದಾರೆ ಎಂಬುದು ವಿಶೇಷ. ಪ್ರಭಾಸ್​ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ದೊಡ್ಡ ಮೈಲೇಜ್​ ಸಿಗಲಿದೆ ಎಂಬ ನಿರೀಕ್ಷೆ ಇದೆ. ಸದ್ಯ ರಿಲೀಸ್​ ಆಗಿರುವ ಹೊಸ ಪೋಸ್ಟರ್​ ವೈರಲ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:15 pm, Mon, 15 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ