Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಕ್ಕೆ ಹೋಯ್ತು ‘ಸಲಾರ್’ ಸಿನಿಮಾ ರಿಲೀಸ್ ದಿನಾಂಕ; ಟ್ವೀಟ್ ಮಾಡಿದ ತರಣ್ ಆದರ್ಶ್

‘ಸಲಾರ್’ ಚಿತ್ರ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಯಿತು. ‘ಕೆಜಿಎಫ್ 2’ ಕೆಲಸದಲ್ಲಿ ಪ್ರಶಾಂತ್ ನೀಲ್ ತೊಡಗಿಕೊಂಡರು. ಜೊತೆಗೆ ಪ್ರಭಾಸ್ ಸೆಟ್​ನಲ್ಲಿ ಗಾಯಕ್ಕೆ ಒಳಗಾಗಿ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಗುತ್ತಲೇ ಇತ್ತು.

ಮುಂದಕ್ಕೆ ಹೋಯ್ತು ‘ಸಲಾರ್’ ಸಿನಿಮಾ ರಿಲೀಸ್ ದಿನಾಂಕ; ಟ್ವೀಟ್ ಮಾಡಿದ ತರಣ್ ಆದರ್ಶ್
ಸಲಾರ್
Follow us
ರಾಜೇಶ್ ದುಗ್ಗುಮನೆ
|

Updated on: Sep 02, 2023 | 12:46 PM

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’ ಸಿನಿಮಾ (Salaar Movie) ಸೆಪ್ಟೆಂಬರ್ 28ರಂದು ರಿಲೀಸ್ ಆಗಬೇಕಿತ್ತು. ಈ ಚಿತ್ರ ರಿಲೀಸ್ ಆಗೋಕೆ ಇನ್ನು ಒಂದು ತಿಂಗಳು ಕೂಡ ಬಾಕಿ ಇಲ್ಲ. ಹೀಗಿರುವಾಗಲೇ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಬಾಲಿವುಡ್ ಬಾಕ್ಸ್ ಆಫೀಸ್ ಟ್ರೇಡ್ ವಿಷ್ಲೇಶಕ ತರಣ್ ಆದರ್ಶ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಒಂದೊಮ್ಮೆ ಈ ವಿಚಾರ ನಿಜವಾದಲ್ಲಿ ಪ್ರಭಾಸ್ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಲಿದೆ.

‘ಸಲಾರ್’ ಚಿತ್ರ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಯಿತು. ‘ಕೆಜಿಎಫ್ 2’ ಕೆಲಸದಲ್ಲಿ ಪ್ರಶಾಂತ್ ನೀಲ್ ತೊಡಗಿಕೊಂಡರು. ಜೊತೆಗೆ ಪ್ರಭಾಸ್ ಸೆಟ್​ನಲ್ಲಿ ಗಾಯಕ್ಕೆ ಒಳಗಾಗಿ ವಿಶ್ರಾಂತಿ ಪಡೆಯಬೇಕಾಯಿತು. ಇನ್ನೂ ಹಲವು ಕಾರಣದಿಂದ ಸಿನಿಮಾ ಕೆಲಸ ವಿಳಂಬ ಆಗುತ್ತಲೇ ಇತ್ತು. ಚಿತ್ರ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿತ್ತು. ಆದರೆ, ಸಿನಿಮಾನ ಅಂದುಕೊಂಡ ದಿನಾಂಕದಂದು ತೆರೆಗೆ ತರೋಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ತರಣ್ ಆದರ್ಶ್ ಅವರು, ‘ಸಲಾರ್ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿರುವುದು ಹೌದು’ ಎಂದಿದ್ದಾರೆ. ಇದಕ್ಕೆ ಕಮೆಂಟ್ ಮಾಡಿರುವ ಪ್ರಭಾಸ್ ಅಭಿಮಾನಿಗಳು ಅಳುತ್ತಿರುವ ಎಮೋಜಿಗಳನ್ನು ಹಾಕಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಸಲಾರ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಗ್ರಾಫಿಕ್ಸ್ ಕೆಲಸಗಳು ಇನ್ನು ಬಾಕಿ ಇವೆ ಎನ್ನಲಾಗಿದೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ಕೂಡ ನೀಡಬೇಕಿದೆ. ಪ್ಯಾನ್ ಇಂಡಿಯಾ ಸಿನಿಮಾ ಆದ್ದರಿಂದ ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಮೋಷನ್ ಮಾಡಬೇಕಿದೆ. ಇದಕ್ಕೆ ಒಂದು ತಿಂಗಳು ಸಮಯ ಸಾಲುವುದಿಲ್ಲ. ಈ ಕಾರಣದಿಂದಲೇ ‘ಸಲಾರ್’ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ಪ್ರಭಾಸ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಶೂಟಿಂಗ್​ನಲ್ಲೂ ಬ್ಯುಸಿ ಇದ್ದಾರೆ. ಈ ಸಿನಿಮಾದ ಶೂಟಿಂಗ್ ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿದೆ. ಭರ್ಜರಿ ಸೆಟ್ ಹಾಕಿ ಚಿತ್ರೀಕರಿಸಲಾಗುತ್ತಿದೆ. ನಾಗ್ ಅಶ್ವಿನ್ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್