AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್‌ ನಟನೆಯ ಸಲಾರ್‌ ಚಿತ್ರಕ್ಕೆ ಮುಹೂರ್ತ: ಹೈದರಾಬಾದ್​ಗೆ ತೆರಳಿ ಶುಭ ಹಾರೈಸಿದ ಯಶ್​!

ಮಕರ ಸಂಕ್ರಮಣದ ನಂತರ ಕನ್ನಡ ಚಿತ್ರರಂಗಕ್ಕೆ ಮತ್ತು ಭಾರತೀಯ ಚಿತ್ರಪ್ರೇಮಿಗಳಿಗೆ ಭರ್ಜರಿ ಸುದ್ದಿ ನೀಡಿರುವ ʼಸಲಾರ್‌ʼ ಚಿತ್ರತಂಡದ ಸಂಭ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಿದ್ದರು. ಯಶ್​ ಕೂಡ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಪ್ರಭಾಸ್‌ ನಟನೆಯ ಸಲಾರ್‌ ಚಿತ್ರಕ್ಕೆ ಮುಹೂರ್ತ: ಹೈದರಾಬಾದ್​ಗೆ ತೆರಳಿ ಶುಭ ಹಾರೈಸಿದ ಯಶ್​!
ಸಲಾರ್​ ತಂಡ
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 3:47 PM

Share

ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್​ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್‌ ನೀಲ್‌ ಈಗ ಪ್ರಭಾಸ್​ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್​’ ಚಿತ್ರದ ಮುಹೂರ್ತ ಇಂದು ಹೈದರಾಬಾದ್​ನಲ್ಲಿ ನೆರವೇರಿತು.

‘ಕೆಜಿಎಫ್’ ಚಿತ್ರದ ನಿರ್ಮಾಪಕ ಹಾಗೂ ಹೊಂಬಾಳೆ ಫಿಲ್ಮ್ಸ್‌ ಮಾಲೀಕ ವಿಜಯ್‌ ಕಿರಗಂದೂರು ಸಲಾರ್​ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಕೆಜಿಎಫ್’ ಚಿತ್ರವನ್ನು ನಿರ್ದೇಶನ ಮಾಡಿರುವ ಪ್ರಶಾಂತ್‌ ನೀಲ್‌ ‘ಸಲಾರ್’ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಟಾಲಿವುಡ್​ನ ಖ್ಯಾತ ನಟ ಪ್ರಭಾಸ್​ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಇಂದು ಚಾಲನೆ ನೀಡಲಾಯಿತು.

‘ಸಲಾರ್’ ಚಿತ್ರತಂಡದ ಸಂಭ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಿದ್ದರು. ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ಚಿತ್ರದ ಹೀರೋ ಪ್ರಭಾಸ್‌, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು. ‘ಸಲಾರ್’ ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ.

ಶುಭ ಹಾರೈಸಿದ ಡಿಸಿಎಂ: ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ, ಕನ್ನಡದಲ್ಲಿ ಹೊಂಬಾಳೆ ಫಿಲ್ಮ್ಸ್‌ ‘ಕೆಜಿಎಫ್ ಚಾಪ್ಟರ್‌-1’, ‘ಕೆಜಿಎಫ್‌ ಚಾಪ್ಟರ್-‌2’ ಅದಕ್ಕೂ ಹಿಂದೆ ಇನ್ನೂ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದೆ. ಈಗ ಕಿರಗಂದೂರು ‘ಸಲಾರ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕೆಜಿಎಫ್‌ ಚಿತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ ಪ್ರಶಾಂತ್‌ ನೀಲ್‌ ಅವರು ‘ಸಲಾರ್’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇವರ ಚಿತ್ರಕ್ಕಾಗಿ ಪ್ರಭಾಸ್‌ ಕೈ ಜೋಡಿಸಿರುವುದು ಸಂತೋಷ ಉಂಟು ಮಾಡಿದೆ. ಈ ಮೂಲಕ ಭಾಷೆ, ಗಡಿಗಳನ್ನು ಮೀರಿ ಕನ್ನಡ-ತೆಲುಗು ಚಿತ್ರರಂಗಗಳು ಒಂದಾಗಿ ಮುಂದೆ ಹೋಗುತ್ತಿರುವುದು ಖುಷಿ ನೀಡಿದೆ. ಇಡೀ ಚಿತ್ರತಂಡಕ್ಕೆ ಶುಭವಾಗಲಿ. ‘ಬಾಹುಬಲಿ’ ಚಿತ್ರದಿಂದ ಕನ್ನಡದ ಅಭಿಮಾನಿಗಳ ಮನಗೆದ್ದಿರುವ ಪ್ರಭಾಸ್‌ ಅವರು ‘ಸಲಾರ್‌ʼ ಚಿತ್ರದಿಂದ ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ ಎಂದರು.

‘ಪ್ರಭಾಸ್‌ ಜತೆಗಿನ ಚಿತ್ರ ಖುಷಿ ತಂದಿದೆ’: ನಾನು ‘ಬಾಹುಬಲಿʼ ಚಿತ್ರವನ್ನು ನೋಡಿ ಪ್ರಭಾಸ್‌ ಅವರಿಗೆ ಫಿದಾ ಆಗಿದ್ದೆ. ಈಗ ಅವರ ಜತೆಯಲ್ಲೇ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಈ ಮೂಲಕ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ‘ಸಲಾರ್‌ʼ ಚಿತ್ರವನ್ನು ಸಿದ್ಧಪಡಿಸುತ್ತಿದ್ದೇವೆ. ನಮ್ಮ ‘ಕೆಜಿಎಫ್‌ʼ ಚಿತ್ರವನ್ನು ಡೈರೈಕ್ಟ್‌ ಮಾಡಿರುವ ಪ್ರಶಾಂತ್‌ ನೀಲ್‌ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು ನಿರ್ಮಾಪಕ ವಿಜಯ್‌ ಕಿರಗಂದೂರು.

ಮುಹೂರ್ತದಲ್ಲಿ ಯಶ್​ ಭಾಗಿ: ‘ಸಲಾರ್ʼ ಚಿತ್ರಕ್ಕೆ ಪ್ರಭಾಸ್‌ ಅವರ ಹೊರತಾಗಿ ನಾಯಕ ನಟಿ, ಇನ್ನಿತರೆ ತಾರಾಬಳಗ ಆಯ್ಕೆಯಾಗಿಲ್ಲ. ಚಿತ್ರವನ್ನು ಅನೌನ್ಸ್‌ ಮಾಡಿದಾಗ ಹೊರಬಿದ್ದ ಸಲಾರ್‌ ಫಸ್ಟ್‌ಲುಕ್‌ ದೇಶದೆಲ್ಲೆಡೆ ವೈರಲ್‌ ಆಗಿತ್ತು. ಪ್ರಭಾಸ್‌ ಈಗಾಗಲೇ ‘ರಾಧೆ ಶ್ಯಾಂʼ ಚಿತ್ರದಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಕೊನೆ ಹಂತದಲ್ಲಿದೆ. ‘ಆದಿಪುರುಷ್‌’ʼ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಬೇಕಿದೆ. ಇದರ ಜತೆಯಲ್ಲೇ ಈಗ ‘ಸಲಾರ್‌ʼ ಚಿತ್ರವೂ ಟೇಕಾಫ್‌ ಆಗಿದೆ. ಈ ಕಾರ್ಯಕ್ರಮದಲ್ಲಿ ನಟ ಯಶ್, ರವಿ ಬಸ್ರೂರ್​, ಭುವನ್​ ಗೌಡ ಸೇರಿದಂತೆ ಕೆಜಿಎಫ್‌ ಚಿತ್ರತಂಡದ ಅನೇಕರು ಪಾಲ್ಗೊಂಡಿದ್ದರು. ಅದರಲ್ಲೂ ಯಶ್‌ ಪ್ರಮುಖ ಆಕರ್ಷಣೆಯಾಗಿದ್ದರು.

ಬಂದೂಕಿನಿಂದ ಸಿಗರೇಟ್ ಹಚ್ಚಿದಕ್ಕೆ ರಾಕಿಂಗ್ ಸ್ಟಾರ್ ಯಶ್​ಗೆ ನೋಟಿಸ್.. ಸೀನ್ ಕತ್ತರಿಸುವಂತೆ ಸೂಚನೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ