AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

‘ಸಲಾರ್’ ಸಿನಿಮಾ ವಿಚಾರದಲ್ಲಿ ಒಂದೇ ದಿನ ಎರಡು ಸಿಹಿ ಸುದ್ದಿ ನೀಡಿದ ಹೊಂಬಾಳೆ ಫಿಲ್ಮ್ಸ್​
ಸಲಾರ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 1:06 PM

Share

ಪ್ರಭಾಸ್ (Prabhas) ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ದೊಡ್ಡ ಮಟ್ಟದ ಪ್ರಚಾರ ನೀಡಲು ‘ಹೊಂಬಾಳೆ ಫಿಲ್ಮ್ಸ್​’ ರೆಡಿ ಆಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ನೀಡಲಾಗುತ್ತಿದೆ. ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಎರಡು ಸೂಪರ್ ಸುದ್ದಿ ಸಿಕ್ಕಿದೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಅನೇಕರು ‘ಸಲಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಆಗುತ್ತಿದೆ. ಸಿನಿಮಾನ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

ಟ್ರೇಲರ್ ರಿಲೀಸ್

ಡಿಸೆಂಬರ್ 1ರಂದು ‘ಸಲಾರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ಇತ್ತೀಚೆಗೆ ಸುದ್ದಿ ಆಗಿತ್ತು. ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ಇಂದು ಅಧಿಕೃತ ಮಾಡಿದೆ. ‘ಸಲಾರ್ ಸೀಸ್​ಫೈರ್ ಟ್ರೇಲರ್ ಡಿಸೆಂಬರ್ 1ರ ಸಂಜೆ 7:19ಕ್ಕೆ ರಿಲೀಸ್ ಆಗಲಿದೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಹಂಚಿಕೆ ವಿಚಾರ

‘ಸಲಾರ್’ ಸಿನಿಮಾದ ಕಾರ್ನಾಟಕದ ಹಂಚಿಕೆಯನ್ನು ತಾವೇ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿದೆ. ‘ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭವ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಬರುತ್ತಿದೆ ಸಲಾರ್‌’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.

ಐದು ಭಾಷೆ

‘ಸಲಾರ್’ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಒಟ್ಟಿಗೆ ರಿಲೀಸ್ ಆಗುತ್ತಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುವ ಸಾಧ್ಯತೆ ಇದೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು