Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​

Salaga: ಎಲ್ಲ ಕಡೆಗಳಲ್ಲೂ ‘ಸಲಗ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ದುನಿಯಾ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ.

Duniya Vijay: ತೆಲುಗು ಸ್ಟಾರ್​ ನಟನಿಗೆ ದುನಿಯಾ ವಿಜಯ್​ ವಿಲನ್​? ಟಾಲಿವುಡ್​ ಅಂಗಳದಿಂದ ಕೇಳಿಬಂತು ಬಿಗ್​ ನ್ಯೂಸ್​
ದುನಿಯಾ ವಿಜಯ್​
Follow us
TV9 Web
| Updated By: ಮದನ್​ ಕುಮಾರ್​

Updated on: Nov 07, 2021 | 2:04 PM

ನಟ ದುನಿಯಾ ವಿಜಯ್​ ಅವರು ಆರಂಭದ ದಿನಗಳಲ್ಲಿ ವಿಲನ್​ ಪಾತ್ರ ಮಾಡುವ ಮೂಲಕ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.​ ‘ದುನಿಯಾ’ ಸಿನಿಮಾದಿಂದ ಹೀರೋ ಆದ ಬಳಿಕ ಅವರು ಮತ್ತೆಂದೂ ಹಿಂದಿರುಗಿ ನೋಡಿಲ್ಲ. ಇತ್ತೀಚೆಗೆ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡ ‘ಸಲಗ’ ಸಿನಿಮಾ ಮೂಲಕ ಅವರು ನಿರ್ದೇಶಕನಾಗಿಯೂ ಬಡ್ತಿ ಪಡೆದುಕೊಂಡರು. ಇಷ್ಟೆಲ್ಲ ಆದ ಬಳಿಕ ದುನಿಯಾ ವಿಜಯ್​ ಮತ್ತೆ ವಿಲನ್​ ಆಗುತ್ತಾರೆ ಎಂಬ ಮಾಹಿತಿ ಕೇಳಿಬಂದಿದೆ. ತೆಲುಗಿನ ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ವಿಜಯ್​ ಖಳನಟನ ಪಾತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಮೂಲಗಳ ಪ್ರಕಾರ ದುನಿಯಾ ವಿಜಯ್​ ಅವರಿಗೆ ವಿಲನ್​ ಪಾತ್ರಕ್ಕಾಗಿ ಬುಲಾವ್​ ಬಂದಿದೆ.

ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದುನಿಯಾ ವಿಜಯ್​ ಆಯ್ಕೆ ಆಗಿರುವ ಬಗ್ಗೆ ನಿರ್ಮಾಪಕರೇ ಅಧಿಕೃತವಾಗಿ ಅನೌನ್ಸ್​ ಮಾಡಬೇಕಿದೆ ಎಂದು ತೆಲುಗು ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಸುದ್ದಿ ಕೇಳಿ ದುನಿಯಾ ವಿಜಯ್​ ಫ್ಯಾನ್ಸ್​ ಎಗ್ಸೈಟ್​ ಆಗುವುದು ಗ್ಯಾರಂಟಿ. ಖ್ಯಾತ ಕಲಾವಿದರ ಬೇರೆ ಭಾಷೆಯ ಚಿತ್ರರಂಗದಲ್ಲಿ ವಿಲನ್​ ರೋಲ್​ ಮಾಡುವ ಟ್ರೆಂಡ್​ ಜೋರಾಗಿದೆ. ಡಾಲಿ ಧನಂಜಯ ಅವರು ತೆಲುಗಿನ ‘ಪುಷ್ಪ’ ಚಿತ್ರದಲ್ಲಿ ಖಳನಾಗಿ ಕಾಣಿಸಿಕೊಳ್ಳಲಿರುವುದರಿಂದ ಆ ಸಿನಿಮಾದ ಮೇಲಿನ ಹೈಪ್​ ಹೆಚ್ಚಲು ಕಾರಣ ಆಗಿದೆ.

‘ಸಲಗ’ ಸಿನಿಮಾದಿಂದ ದುನಿಯಾ ವಿಜಯ್​ ಅವರಿಗೆ ಚಿತ್ರರಂಗದಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಆರಂಭ ಆಗಿದೆ ಎಂದರೂ ತಪ್ಪಿಲ್ಲ. ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಅವರು ಭಾರಿ ಜನಮೆಚ್ಚುಗೆ ಪಡೆದುಕೊಂಡಿದ್ದಾರೆ. ಎಲ್ಲ ಕಡೆಗಳಲ್ಲೂ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡು ಧೂಳೆಬ್ಬಿಸಿದೆ. ಈಗ ವಿಜಯ್​ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಹೀರೋ ಆಗಿ ಅವರು ಒಪ್ಪಿಕೊಳ್ಳಲಿರುವ ಹೊಸ ಸಿನಿಮಾ ಯಾವುದು? ನಿರ್ದೇಶಕನಾಗಿ ಅವರ ಮುಂದಿನ ಪ್ರಾಜೆಕ್ಟ್​ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಅದರ ನಡುವೆಯೇ ಅವರು ಬಾಲಕೃಷ್ಣ ನಟನೆಯ ಸಿನಿಮಾದಲ್ಲಿ ವಿಲನ್​ ಆಗುತ್ತಾರೆ ಎಂಬ ಸುದ್ದಿ ಕೇಳಿಬಂದಿದ್ದು, ಅಧಿಕೃತ ಘೋಷಣೆಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

‘ಶಿವಣ್ಣ ಮತ್ತು ಅವರ ಕುಟುಂಬಕ್ಕೆ ನಾನು ಚಿರಋಣಿ’; ಸಲಗ ಗೆಲುವಿನಲ್ಲಿ ದುನಿಯಾ ವಿಜಯ್​ ಧನ್ಯವಾದ

‘ಸಲಗ ಚಿತ್ರವನ್ನು ತುಳಿಯೋಕೆ ಆಗಲ್ಲ, ಸುಮ್ಮನೆ ಸಣ್ಣತನ ತೋರಿಸಬೇಡಿ’: ದುನಿಯಾ ವಿಜಯ್​ ಎಚ್ಚರಿಕೆ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್