‘ಸಲಗ’ ಚಿತ್ರದ ನಿರ್ಮಾಪಕ ಕೆಪಿ ಶ್ರೀಕಾಂತ್ ಅವರು ಈಗಾಗಲೇ ಪುನೀತ್ ರಾಜ್ಕುಮಾರ್ ಅವರನ್ನು ಭೇಟಿಯಾಗಿ, ಚಿತ್ರದ ಪ್ರೀ-ರಿಲೀಸ್ ಇವೆಂಟ್ಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಅದಕ್ಕೆ ಪುನೀತ್ ಕಡೆಯಿಂದ ಒಪ್ಪಿಗೆ ಕೂಡ ಸಿಕ್ಕಿದೆ. ಆ ಖುಷಿಯನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ‘ಮೊದಲ ದಿನದಿಂದಲೂ ನಮ್ಮ ತಂಡಕ್ಕೆ ಬೆಂಬಲ ನೀಡುತ್ತಿರುವ ಪುನೀತ್ ರಾಜ್ಕುಮಾರ್ ಅವರು ಪ್ರೀ-ರಿಲೀಸ್ ಇವೆಂಟ್ಗೆ ಬರಲಿದ್ದಾರೆ’ ಎಂದು ಶ್ರೀಕಾಂತ್ ಹೇಳಿದ್ದಾರೆ.
ಈ ಸಿನಿಮಾದಲ್ಲಿ ದುನಿಯಾ ವಿಜಯ್ಗೆ ಜೋಡಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಡಾಲಿ ಧನಂಜಯ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಸೂಪರ್ ಹಿಟ್ ಆಗಿವೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಈಗ ಪುನೀತ್ ಕೂಡ ಸಾಥ್ ನೀಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.
ಇತ್ತೀಚೆಗಷ್ಟೇ ‘ಸಲಗ’ ಚಿತ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದರು. ‘ಅಕ್ಟೋಬರ್ 14ರಂದು ತೆರೆ ಕಾಣಲಿರುವ ಸಲಗ ಚಿತ್ರದ ತಂಡದವರು ನಾಯಕ ನಟ ದುನಿಯಾ ವಿಜಯ್ ಅವರ ನೇತೃತ್ವದಲ್ಲಿ ಇಂದು ನನ್ನನ್ನು ಭೇಟಿ ಮಾಡಿದರು. ಶಾಸಕರಾದ ಬೈರತಿ ಸುರೇಶ್ ಅವರು ಈ ವೇಳೆ ಹಾಜರಿದ್ದರು. ದುನಿಯಾ ವಿಜಯ್ ಒಬ್ಬ ಪ್ರತಿಭಾನ್ವಿತ ನಟ, ಹೆಚ್ಚಿನ ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.
ಇದನ್ನೂ ಓದಿ:
ಒಂದೇ ದಿನ ‘ಸಲಗ’ ಮತ್ತು ‘ಕೋಟಿಗೊಬ್ಬ 3’; ಖಚಿತಪಡಿಸಿದ ನಿರ್ಮಾಪಕ
ತೆಲುಗಿನ ‘ಭೀಮ್ಲಾ ನಾಯಕ್’ ಸಿನಿಮಾಗೆ ಪುನೀತ್ ರಾಜ್ಕುಮಾರ್ ಬೆಂಬಲ; ಧನ್ಯವಾದ ಹೇಳಿದ ಪವನ್ ಕಲ್ಯಾಣ್ ಫ್ಯಾನ್ಸ್