AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಸೂರಿಯಣ್ಣ ಈಗ ‘ಮಾರಿಗುಡ್ಡದ ಗಡ್ಡದಾರಿ’; ಹೊಸ ಚಿತ್ರದಲ್ಲಿ ನಟನೆ ಜತೆ ನಿರ್ಮಾಣಕ್ಕೆ ಕೈ ಹಾಕಿದ ದಿನೇಶ್​

‘ಮಾರಿಗುಡ್ಡದ ಗಡ್ಡಧಾರಿಗಳು’ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ‘ಸಲಗ’ ಸೂರಿಯಣ್ಣ ಖ್ಯಾತಿಯ ದಿನೇಶ್​ ಈ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ.

‘ಸಲಗ’ ಸೂರಿಯಣ್ಣ ಈಗ ‘ಮಾರಿಗುಡ್ಡದ ಗಡ್ಡದಾರಿ’; ಹೊಸ ಚಿತ್ರದಲ್ಲಿ ನಟನೆ ಜತೆ ನಿರ್ಮಾಣಕ್ಕೆ ಕೈ ಹಾಕಿದ ದಿನೇಶ್​
‘ಮಾರಿಗುಡ್ಡದ ಗಡ್ಡಧಾರಿಗಳು’ ಚಿತ್ರದ ಮುಹೂರ್ತ ಸಮಾರಂಭ
TV9 Web
| Edited By: |

Updated on: Apr 21, 2022 | 3:44 PM

Share

ದುನಿಯಾ ವಿಜಯ್​ ನಿರ್ದೇಶನ ಮಾಡಿದ್ದ ‘ಸಲಗ’ ಸಿನಿಮಾ ಸೂಪರ್​ ಹಿಟ್​ ಆಗಿದ್ದು ಗೊತ್ತೇ ಇದೆ. ಆ ಚಿತ್ರದಲ್ಲಿ ವಿಜಯ್​ ಮಾತ್ರವಲ್ಲದೇ ಅನೇಕ ನಟರು ಹೈಲೈಟ್​ ಆಗಿದ್ದರು. ಹಲವು ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿತ್ತು. ಆ ಪೈಕಿ ಸೂರಿಯಣ್ಣ ಪಾತ್ರ ಕೂಡ ಪ್ರಮುಖವಾಗಿದೆ. ತೆರೆಮೇಲೆ ಹೆಚ್ಚು ಹೊತ್ತು ಕಾಣಿಸಿಕೊಳ್ಳದೇ ಇದ್ದರೂ ಕೂಡ ಆ ಪಾತ್ರವು ಜನಮನ ಗೆದ್ದಿತ್ತು. ಸೂರಿಯಣ್ಣ ಆಗಿ ಕಾಣಿಸಿಕೊಂಡಿದ್ದು ನಟ ದಿನೇಶ್ (Salaga Actor Dinesh)​. ಆ ಪಾತ್ರಕ್ಕಾಗಿ ಒಂದು ಪ್ರತ್ಯೇಕ ಸಾಂಗ್ (Suri Anna Song)​ ಕೂಡ ಇಡಲಾಗಿತ್ತು. ಆ ಕಾರಣದಿಂದಲೇ ಜನರಿಗೆ ಸೂರಿಯಣ್ಣ ಎಂದ ತಕ್ಷಣ ‘ಸಲಗ’ ಸಿನಿಮಾ ನೆನಪಾಗುತ್ತದೆ. ಆ ಪಾತ್ರದಲ್ಲಿ ನಟಿಸಿದ್ದ ದಿನೇಶ್​ ಅವರು ಈಗ ಹೊಸ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಮಾರಿಗುಡ್ಡದ ಗಡ್ಡಧಾರಿಗಳು’ (Mariguddada Gaddadharigalu) ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾವನ್ನು ದಿನೇಶ್​ ಅವರೇ ನಿರ್ಮಾಣ ಮಾಡುತ್ತಿದ್ದಾರೆ ಎಂಬುದು ವಿಶೇಷ.

‘ಮಾರಿಗುಡ್ಡದ ಗಡ್ಡಧಾರಿಗಳು’ ಸಿನಿಮಾಗೆ ಇತ್ತೀಚೆಗೆ ಮುಹೂರ್ತ ನೆರವೇರಿತು. ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ಅನೇಕ ಗಣ್ಯರು ಆಗಮಿಸಿ ಶುಭ ಕೋರಿದರು. ‘ಟಗರು’ ಮತ್ತು ‘ಸಲಗ’ ಸಿನಿಮಾಗಳ ಮುಹೂರ್ತ ಇದೇ ದೇವಾಲಯದಲ್ಲಿ ನಡೆದಿತ್ತು. ಆ ಎರಡು ಚಿತ್ರಗಳು ಸೂಪರ್​ ಹಿಟ್​ ಆದವು. ಈಗ ‘ಮಾರಿಗುಡ್ಡದ ಗಡ್ಡಧಾರಿಗಳು’ ಕೂಡ ಯಶಸ್ಸು ಕಾಣಲಿ ಎಂದು ಹಾರೈಸಿದ್ದಾರೆ ಖ್ಯಾತ ನಿರ್ಮಾಪಕ ಕೆ.ಪಿ. ಶ್ರೀಕಾಂತ್​.

ಹೀರೋಗಳನ್ನು ತಲೆಯಲ್ಲಿ ಇಟ್ಟುಕೊಂಡು ಕಥೆ ಬರೆಯುವುದು ಸಹಜ. ಆದರೆ ನಿರ್ದೇಶಕ ರಾಜೀವ್​ ಚಂದ್ರಕಾಂತ್​ ಅವರು ವಿಲನ್​ ಪಾತ್ರದ ಮೇಲೆ ಕಥೆ ಬರೆದಿದ್ದಾರೆ. ಅದರಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡಲು ದಿನೇಶ್​ ಒಪ್ಪಿಕೊಂಡಿದ್ದಾರೆ. ಈ ಮೊದಲು ಕೆಲವು ಧಾರಾವಾಹಿಗಳಿಗೆ ನಿರ್ದೇಶನ ಮಾಡಿದ ಅನುಭವ ರಾಜೀವ್​ ಚಂದ್ರಕಾಂತ್​ ಅವರಿಗೆ ಇದೆ. 75ಕ್ಕೂ ಅಧಿಕ ಸಿನಿಮಾಗಳಿಗೆ ಪೋಸ್ಟರ್​ ಡಿಸೈನರ್​ ಆಗಿಯೂ ಅವರು ಕೆಲಸ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಪ್ರವೀಣ್, ನಂಜುಂಡ, ಅವಿನಾಶ್, ರಮೇಶ್‌ ಭಟ್, ಗಣೇಶ್‌ ರಾವ್, ಬೆನಕ ನಂಜಪ್ಪ, ಪ್ರಶಾಂತ್‌ ಸಿದ್ದಿ ಮುಂತಾದವರು ಅಭಿನಯಿಸುತ್ತಿದ್ದಾರೆ. ನಾಯಕಿಯ ಆಯ್ಕೆ ಸದ್ಯದಲ್ಲೇ ಆಗಲಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಕೆ.ಎಂ. ಇಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ವೀರೇಶ್ ಛಾಯಾಗ್ರಹಣ, ಪಳನಿ ಸಾಹಸ, ಮೋಹನ್ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್​ ಆರಂಭ ಆಗಿದ್ದು ಕೋಲಾರ, ಕೆಜಿಎಫ್ ಮುಂತಾದ ಸ್ಥಳಗಳಲ್ಲಿ 35 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲು ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ.

1990ರ ಕಾಲಘಟ್ಟದಲ್ಲಿ ನಡೆಯುವ ಒಂದು ಕಾಲ್ಪನಿಕ ಕಥೆಯನ್ನು ಈ ಸಿನಿಮಾದಲ್ಲಿ ಹೇಳಿದ್ದಾರೆ ನಿರ್ದೇಶಕರು. ಈಗಾಗಲೇ ಪೋಸ್ಟರ್​ ಮೂಲಕ ‘ಮಾರಿಗುಡ್ಡದ ಗಡ್ಡಧಾರಿಗಳು’ ಚಿತ್ರ ಗಮನ ಸೆಳೆಯುತ್ತಿದೆ. ಹುಲಿಯಾ ಎಂಬ ನೆಗೆಟಿವ್​ ಶೇಡ್​ನ ಪಾತ್ರದಲ್ಲಿ ದಿನೇಶ್ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ:

‘ಸಲಗ’ ಯಶಸ್ಸಿನ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿದ ದುನಿಯಾ ವಿಜಯ್

‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ