Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ

ಸಲ್ಲು ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’​ ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನ್​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ಅವರು ಮುಂಬೈನಲ್ಲಿ ಸುತ್ತಾಡುತ್ತಿದ್ದಾರೆ.

Salman Khan: ಸೆಲ್ಫಿ ಗೆದುಕೊಳ್ಳಲು ಬಂದ ಅಭಿಮಾನಿ ಬಗ್ಗೆ ಸಿಟ್ಟಾದ ಸಲ್ಮಾನ್​ ಖಾನ್ ಮಾಡಿದ್ದೇನು ನೋಡಿ
ಸಲ್ಮಾನ್​ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 08, 2021 | 2:49 PM

ಸೆಲೆಬ್ರಿಟಿಗಳು ಅಭಿಮಾನಿಗಳ ಜತೆ ತುಂಬಾನೇ ನಾಜೂಕಾಗಿ ನಡೆದುಕೊಳ್ಳುತ್ತಾರೆ. ಎಲ್ಲೇ ಅವರು ಎದುರಾದರೂ ಪ್ರೀತಿಯಿಂದ ಮಾತನಾಡಿಸುತ್ತಾರೆ. ಆದರೆ, ಸೆಲೆಬ್ರಿಟಿಗಳ ಮೂಡ್​ ಎಲ್ಲಾ ಸಮಯದಲ್ಲೂ ಒಂದೇ ರೀತಿ ಇರುವುದಿಲ್ಲ. ಅದರಲ್ಲೂ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಅಭಿಮಾನಿಗಳ ಬಗ್ಗೆ ಸಿಟ್ಟಾದ ಸಾಕಷ್ಟು ಉದಾಹರಣೆ ಇದೆ. ಅಭಿಮಾನಿಗಳು ಸೆಲ್ಫಿಗೆ ಮುಗಿಬೀಳೋದು ಎಂದರೆ ಅವರಿಗೆ ಇಷ್ಟವಾಗುವುದಿಲ್ಲ. ಸಲ್ಲು ಅಭಿಮಾನಿಯ ಮೊಬೈಲ್​ ಕಸಿದುಕೊಂಡು ಹೋದ ಉದಾಹರಣೆಯೂ ಇದೆ. ಇದೇ ರೀತಿಯ ಘಟನೆ ಈಗ ಮತ್ತೆ ಪುನರಾವರ್ತನೆ ಆಗಿದೆ. ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಗೆ ಅವರು ಬೈದಿದ್ದಾರೆ.

ಸಲ್ಲು ನಟನೆಯ ‘ಅಂತಿಮ್​-ದಿ ಫೈನಲ್​ ಟ್ರುತ್​’​ ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನ್​ನಲ್ಲಿ ಅವರು ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ಅವರು ಮುಂಬೈನಲ್ಲಿ ಸುತ್ತಾಡುತ್ತಿದ್ದಾರೆ. ಭಾನುವಾರ (ನವೆಂಬರ್​ 8) ಸಲ್ಲು ಒಂದು ಕಡೆಗೆ ತೆರಳಿದ್ದರು. ಈ ವೇಳೆ ಫ್ಯಾನ್ಸ್​ ಸೆಲ್ಫಿ ತೆಗೆದುಕೊಳ್ಳೋಕೆ ಮುಗಿಬಿದ್ದಿದ್ದಾರೆ. ಇದು ಸಲ್ಲುಗೆ ಇಷ್ಟವಾಗಿಲ್ಲ.

‘ಪಾಪರಾಜಿಗಳು ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ದಯವಿಟ್ಟು ಸರಿದುಕೊಳ್ಳಿ’ ಎಂದು ಸಲ್ಲು ಮೊದಲು ಮನವಿ ರೂಪದಲ್ಲೇ ಅಭಿಮಾನಿಗೆ ಹೇಳಿದ್ದಾರೆ. ಆದರೆ, ಆ ಫ್ಯಾನ್​ ಈ ಮನವಿಯನ್ನು ಪುರಸ್ಕರಿಸಿಲ್ಲ. ಮತ್ತೆ ಸೆಲ್ಫಿ ತೆಗೆದುಕೊಳ್ಳುವುದಲ್ಲಿ ಅಭಿಮಾನಿ  ಬ್ಯುಸಿಯಾಗಿದ್ದ. ಇದರಿಂದ ಸಿಟ್ಟಾದ ಅವರು, ‘ನೃತ್ಯ ಮಾಡುವುದನ್ನು ನಿಲ್ಲಿಸಿ’ ಎಂದು ಸಿಟ್ಟಲ್ಲೇ ಹೇಳಿದ್ದಾರೆ.  ನಂತರದಲ್ಲಿ ಅಭಿಮಾನಿ ಅಲ್ಲಿಂದ ತೆರಳಿದ್ದಾರೆ.

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ಎಂದರೆ ಅಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರುತ್ತವೆ. ಇದು ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾದಲ್ಲೂ ಮುಂದುವರಿದಿದೆ ಎಂಬುದಕ್ಕೆ ಇತ್ತೀಚೆಗೆ ಬಿಡುಗಡೆಯಾಗಿದ್ದ ಟ್ರೇಲರ್​ ಸಾಕ್ಷ್ಯ ನೀಡಿತ್ತು. ನವೆಂಬರ್​ 26ರಂದು ಸಿನಿಮಾ ತೆರೆಗೆ ಬರುತ್ತಿದೆ. ಆಯುಶ್​ ಶರ್ಮಾ ಗ್ಯಾಂಗ್​ಸ್ಟರ್​ ಆಗಿ ಕಾಣಿಸಿಕೊಂಡರೆ, ಸಲ್ಲು ಸಿಖ್​ ಪೊಲೀಸ್​ ಆಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರು ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜಾನ್​ ಅಬ್ರಾಹಂ ನಟನೆಯ ‘ಸತ್ಯಮೇವ ಜಯತೆ’ ಸಿನಿಮಾ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಸತ್ಯಮೇವ ಜಯತೆ 2’ ತೆರೆಗೆ ಬರುತ್ತಿದೆ. ಈ ಚಿತ್ರವೂ ನವೆಂಬರ್​ 26ರಂದು ರಿಲೀಸ್​ ಆಗುತ್ತಿದೆ. ಈಗ ಅದೇ ದಿನ ಸಲ್ಲು ಸಿನಿಮಾ ಕೂಡ ರಿಲೀಸ್​ ಆಗುತ್ತಿದೆ. ಹೀಗಾಗಿ, ಬಾಕ್ಸ್​ ಆಫೀಸ್​ನಲ್ಲಿ ಎರಡು ದೊಡ್ಡ ಬಜೆಟ್​ ಸಿನಿಮಾಗಳು ಮುಖಾಮುಖಿ ಆಗುತ್ತಿವೆ. ‘ಅಂತಿಮ್​-ದಿ ಫೈನಲ್​ ಟ್ರುತ್​’ ಸಿನಿಮಾ ದೀಪಾವಳಿಗೆ ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾದ ಕೆಲ ದೃಶ್ಯಗಳನ್ನು ರೀಶೂಟ್​ ಮಾಡಲಾಗಿದೆ. ಇದರ ಎಡಿಟಿಂಗ್​ಗೆ ಹೆಚ್ಚು ಸಮಯ ಹಿಡಿದಿದೆ. ಹೀಗಾಗಿ, ನವೆಂಬರ್ 26ಕ್ಕೆ ಸಿನಿಮಾ ರಿಲೀಸ್​ ಆಗುತ್ತಿದೆ.

ಇದನ್ನೂ ಓದಿ: Antim Movie Trailer: ‘ಅಂತಿಮ್’​ ಟ್ರೇಲರ್​ನಲ್ಲಿ ಪೊಲೀಸ್​ ಆಗಿ ಮಿಂಚಿದ ಸಲ್ಮಾನ್​ ಖಾನ್​; ಸಲ್ಲು ಲುಕ್​ಗೆ ಫ್ಯಾನ್ಸ್​ ಫಿದಾ

Kiran Gosavi: ಆರ್ಯನ್​ ಸಿಕ್ಕಿಬಿದ್ದಾಗ ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟಿದ್ದ ಕಿರಣ್​ ಗೋಸಾವಿ ಅರೆಸ್ಟ್​;​ ಈ ವ್ಯಕ್ತಿ ಮೇಲಿನ ಆರೋಪ ಒಂದೆರಡಲ್ಲ

Published On - 2:46 pm, Mon, 8 November 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ