‘ಘೋಸ್ಟ್​’ನ ಭೇಟಿ ಮಾಡಿದ ‘ಟೈಗರ್’; ಶಿವಣ್ಣ ಜೊತೆ ಪೋಸ್​ ಕೊಟ್ಟ ಸಲ್ಮಾನ್ ಖಾನ್    

‘ಘೋಸ್ಟ್’ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಸಲ್ಮಾನ್ ಖಾನ್ ಭೇಟಿ ಆಗಿದೆ.

‘ಘೋಸ್ಟ್​’ನ ಭೇಟಿ ಮಾಡಿದ ‘ಟೈಗರ್’; ಶಿವಣ್ಣ ಜೊತೆ ಪೋಸ್​ ಕೊಟ್ಟ ಸಲ್ಮಾನ್ ಖಾನ್     
ಸಲ್ಮಾನ್-ಶಿವಣ್ಣ

Updated on: Oct 14, 2023 | 2:42 PM

ಶಿವರಾಜ್​ಕುಮಾರ್ (Shivarajkumar) ಅವರು ಸದ್ಯ ‘ಘೋಸ್ಟ್’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಶಿವಣ್ಣ ಹಾಗೂ ನಿರ್ದೇಶಕ ಶ್ರೀನಿವಾಸ್ ಅವರು ಮುಂಬೈನಲ್ಲಿದ್ದಾರೆ. ಈ ವೇಳೆ ಅವರು ಹಲವು ಸ್ಟಾರ್ ಹೀರೋಗಳನ್ನು ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗೆ ಕಮಲ್ ಹಾಸನ್ ಜೊತೆ ಶಿವಣ್ಣ ಪೋಸ್ ನೀಡಿದ್ದರು. ಈಗ ಶಿವರಾಜ್​ಕುಮಾರ್ ಅವರು ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಶ್ರೀನಿ ಅವರು ಉತ್ತಮ ಸಿನಿಮಾಗಳನ್ನು ಮಾಡಿ ಮೆಚ್ಚುಗೆ ಪಡೆದಿದ್ದಾರೆ. ಅವರು ಶಿವರಾಜ್​ಕುಮಾರ್ ಜೊತೆ ಕೈ ಜೋಡಿಸಿದಾಗ ಸಾಕಷ್ಟು ಕುತೂಹಲ ಮೂಡಿತ್ತು. ಈಗ ‘ಘೋಸ್ಟ್’ ಸಿನಿಮಾ ಸಿದ್ಧಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ಬಿಡುಗಡೆ ಆಗುತ್ತಿದೆ. ಹೀಗಾಗಿ, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಸಲ್ಮಾನ್ ಖಾನ್ ಭೇಟಿ ಆಗಿದೆ.

‘ಘೋಸ್ಟ್​ನ ಟೈಗರ್ ಭೇಟಿ ಮಾಡಿದಾಗ. ಟೈಗರ್ 3 ಚಿತ್ರಕ್ಕೆ ಆಲ್​ ದಿ ಬೆಸ್ಟ್’ ಎಂದು ಶಿವಣ್ಣ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಅನೇಕರು ಶಿವಣ್ಣನ ಚಿತ್ರಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಇಬ್ಬರೂ ಸೇರಿ ಸಿನಿಮಾ ಮಾಡುವಂತೆ ಅನೇಕರು ಕೋರಿದ್ದಾರೆ.


ಇದನ್ನೂ ಓದಿ: ಸಲ್ಮಾನ್ ಖಾನ್ ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ; ಆತಂಕ ಹೊರಹಾಕಿದ ಅಭಿಮಾನಿಗಳು

‘ಘೋಸ್ಟ್’ ಚಿತ್ರದಲ್ಲಿ ಅನುಪಮ್ ಖೇರ್, ಜಯರಾಮ್, ಅರ್ಚನಾ ಜೋಯಿಸ್, ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ‘ಒಜಿಎಂ..’ ಹಾಡು ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಸಿನಿಮಾದ ಅವಧಿ ಎರಡು ಗಂಟೆ ಏಳು ನಿಮಿಷ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us