
ಕಿಚ್ಚ ಸುದೀಪ್ ಹಾಗೂ ಸಲ್ಮಾನ್ ಖಾನ್ ಗೆಳೆತನದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ‘ದಬಾಂಗ್ 3’ ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ಈಗಲೂ ಮುಂದುವರಿದುಕೊಂಡು ಬಂದಿದೆ. ಈಗ ಸುದೀಪ್ ನಟನೆಯ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಸಲ್ಮಾನ್ ಖಾನ್ ಮೆಚ್ಚುಗೆಯ ಮಾತನಾಡಿದ್ದಾರೆ.
ಸೆಪ್ಟೆಂಬರ್ 2 ಕಿಚ್ಚ ಸುದೀಪ್ ಬರ್ತ್ಡೇ. ಈ ವಿಶೇಷ ದಿನದಂದು ‘ವಿಕ್ರಾಂತ್ ರೋಣ’ ಸಿನಿಮಾದ ಫಸ್ಟ್ ಗ್ಲಿಂಪಸ್ ರಿಲೀಸ್ ಆಗಿತ್ತು. ಇದಕ್ಕೆ ‘ಡೆಡ್ ಮ್ಯಾನ್ಸ್ ಆ್ಯಂಥಮ್’ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್ ವೀಕ್ಷಣೆ ಮಾಡಿದ್ದಾರೆ. ಇದನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅವರು ‘ಸುದೀಪ್ ಬೆಸ್ಟ್ ವಿಶಸ್’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಫಸ್ಟ್ ಗ್ಲಿಂಪಸ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಈ ಟ್ವೀಟ್ ಅನ್ನು ಸುದೀಪ್ ರೀಟ್ವೀಟ್ ಮಾಡಿಕೊಂಡು ಧನ್ಯವಾದ ಹೇಳಿದ್ದಾರೆ.
‘ವಿಕ್ರಾಂತ್ ರೋಣ’ ಹಿಂದಿಯಲ್ಲೂ ತೆರೆಗೆ ಬರುತ್ತಿದೆ. ಈಗ ಸಲ್ಮಾನ್ ಖಾನ್ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಸಲ್ಮಾನ್ ಖಾನ್ ನೀಡುತ್ತಿರುವ ಬೆಂಬಲದಿಂದ ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಹಕಾರಿಯಾಗಲಿದೆ.
ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಹಿಂದಿ, ತೆಲುಗು ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿರುವ ಅವರು ಪರಭಾಷೆಯಲ್ಲೂ ಅಭಿಮಾನಿ ಬಳಗ ಹೊಂದಿದ್ದಾರೆ. ಬಾಲಿವುಡ್ನ ಖ್ಯಾತ ನಟ ಸಲ್ಮಾನ್ ಖಾನ್ ಜತೆಗೂ ಸುದೀಪ್ಗೂ ಉತ್ತಮ ಫ್ರೆಂಡ್ಶಿಪ್ ಇದೆ. ‘ದಬಾಂಗ್ 3’ ರಿಲೀಸ್ ಆದ ನಂತರದಲ್ಲಿ ಸುದೀಪ್ಗೆ ಸಲ್ಮಾನ್ ಖಾನ್ ಬಿಎಂಡಬ್ಲ್ಯು ಕಾರ್ಅನ್ನು ಉಡುಗರೆಯಾಗಿ ನೀಡಿದ್ದರು.
ಇದನ್ನೂ ಓದಿ:ಸುದೀಪ್ಗೆ ನೀರಜ್ ಚೋಪ್ರಾ ಕಡೆಯಿಂದ ಹುಟ್ಟುಹಬ್ಬದ ಶುಭಾಶಯ; ‘ವಿಕ್ರಾಂತ್ ರೋಣ’ಗೂ ವಿಶೇಷ ವಿಶ್
ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್ ರೋಣ’ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ
Published On - 10:25 pm, Sat, 4 September 21