AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​​ಗೆ ಇಷ್ಟ ಆಯ್ತು ಸಾನ್ವಿ ಸುದೀಪ್ ಕಂಠ; ಮೆಚ್ಚುಗೆ ಸೂಚಿಸಿದ ನಟ

ಕಳೆದ ವರ್ಷ ರಿಲೀಸ್ ಆದ 'ಮಾರ್ಕ್' ಸಿನಿಮಾ ಜನ ಮೆಚ್ಚುಗೆ ಗಳಿಸಿದೆ. ಅದರಲ್ಲಿ ಸಾನ್ವಿ ಸುದೀಪ್ ಹಾಡಿದ 'ಮಸ್ತ್ ಮಲೈಕಾ' ಹಾಡು 3.3 ಕೋಟಿ ವೀಕ್ಷಣೆ ದಾಟಿ ಇತಿಹಾಸ ಸೃಷ್ಟಿಸಿದೆ. ಈ ಹಾಡನ್ನು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮೆಚ್ಚಿಕೊಂಡಿದ್ದು, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಸಲ್ಮಾನ್ ಅವರ ಈ ಪ್ರಶಂಸೆಗೆ ಸಾನ್ವಿ ಸುದೀಪ್ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.

ಸಲ್ಮಾನ್ ಖಾನ್​​ಗೆ ಇಷ್ಟ ಆಯ್ತು ಸಾನ್ವಿ ಸುದೀಪ್ ಕಂಠ; ಮೆಚ್ಚುಗೆ ಸೂಚಿಸಿದ ನಟ
ಸಲ್ಮಾನ್-ಸಾನ್ವಿ
ರಾಜೇಶ್ ದುಗ್ಗುಮನೆ
|

Updated on: Feb 17, 2026 | 7:04 AM

Share

ಕನ್ನಡದಲ್ಲಿ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆದ ‘ಮಾರ್ಕ್’ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆಯಿತು. ಈ ಚಿತ್ರವವನ್ನು ಜನರು ಸಾಕಷ್ಟು ಕೊಂಡಾಡಿದರು. ಈ ಚಿತ್ರದ ‘ಮಸ್ತ್ ಮಲೈಕಾ’ (Mast Malaika) ಹಾಡನ್ನು ಅನೇಕರು ಬಹುವಾಗಿ ಇಷ್ಟಪಟ್ಟಿದ್ದಾರೆ. ಈ ಹಾಡಿನ ವಿಡಿಯೋ ಸಾಂಗ್ ಈವರೆಗೆ 33 ಮಿಲಿಯನ್ ಅಂದರೆ 3.3 ಕೋಟಿ ವೀಕ್ಷಣೆ ಕಂಡಿದೆ. ಸಾನ್ವಿ ಸುದೀಪ್ ಕಂಠದಲ್ಲಿ ಮೂಡಿಬಂದ ಈ ಹಾಡು ಬಾಲಿವುಡ್ ನಟ ಸಲ್ಮಾನ್ ಖಾನ್​​ಗೂ ಸಾಕಷ್ಟು ಇಷ್ಟ ಆಗಿದೆ. ಈ ಹಾಡಿನ ಬಗ್ಗೆ ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಸಲ್ಮಾನ್ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಾಲಿವುಡ್ ಜೊತೆ ದಕ್ಷಿಣದ ಸಿನಿಮಾಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಇಲ್ಲಿನ ಆಗು ಹೋಗುಗಳನ್ನು ಅವರು ಗಮನಿಸುತ್ತಾ ಇರುತ್ತಾರೆ. ಸಲ್ಮಾನ್ ಖಾನ್ ಅವರಿಗೆ ಸುದೀಪ್ ಮೇಲೆ ವಿಶೇಷ ಪ್ರೀತಿ ಕೂಡ ಇದೆ. ‘ದಬಾಂಗ್ 3’ ಚಿತ್ರದಲ್ಲಿ ಇವರು ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಸುದೀಪ್ ಹಾಡನ್ನು ಸಲ್ಲು ಬಹುವಾಗಿ ಇಷ್ಟಪಟ್ಟಿದ್ದಾರೆ.

‘ಮಸ್ತ್ ಮಲೈಕಾ’ ಹಾಡಿನ ಲಿಂಕ್​ ಅನ್ನು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ ಸಲ್ಮಾನ್ ಖಾನ್. ‘ಸುಂದರವಾದ ಹಾಡು, ಒಳ್ಳೆಯದಾಗಲಿ’ ಎಂದು ಸಲ್ಮಾನ್ ಖಾನ್ ಅವರು ಬರೆದುಕೊಂಡಿದ್ದಾರೆ. ಈ ಸ್ಟೋರಿಯಲ್ಲಿ ಕಿಚ್ಚ ಸುದೀಪ್ ಹಾಗೂ ಸಾನ್ವಿಯನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಮಸ್ತ್ ಮಲೈಕಾ ಹಾಡಿಗೆ ಮೈಚಳಿ ಬಿಟ್ಟು ಡ್ಯಾನ್ಸ್ ಮಾಡಿದ ಜಾನ್ವಿ

‘ಮಸ್ತ್ ಮಲೈಕಾ’ ಹಾಡನ್ನು ಹಾಡಿದ್ದು ಸುದೀಪ್ ಮಗಳು ಸಾನ್ವಿ. ಸಲ್ಮಾನ್ ಖಾನ್ ಕೊಟ್ಟ ಈ ಮೆಚ್ಚುಗೆಗೆ ಸಾನ್ವಿ ಫುಲ್ ಖುಷ್ ಆಗಿದ್ದಾರೆ. ‘ಎಂತಹ ಅದ್ಭುತ ಗೌರವ. ಧನ್ಯವಾದಗಳು ಸಲ್ಮಾನ್ ಸರ್’ ಎಂದು ಸಾನ್ವಿ ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಸಲ್ಮಾನ್ ಖಾನ್ ಅವರು ಸದ್ಯ ‘ಗಾಲ್ವಾನ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ