AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ಕೆಜಿ ತೂಕದ ಡಂಬಲ್​ ಎತ್ತಿದ ಸಮಂತಾ; ವಿಡಿಯೋ ವೈರಲ್

ಸೆಲೆಬ್ರಿಟಿಗಳು ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಜಿಮ್​ನಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಸಮಯವನ್ನು ನೀಡುತ್ತಾರೆ. ಸಮಂತಾ ಕೂಡ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ.

30 ಕೆಜಿ ತೂಕದ ಡಂಬಲ್​ ಎತ್ತಿದ ಸಮಂತಾ; ವಿಡಿಯೋ ವೈರಲ್
ಸಮಂತಾ ಅಕ್ಕಿನೇನಿ
TV9 Web
| Edited By: |

Updated on: Oct 18, 2021 | 2:45 PM

Share

ವಿಚ್ಛೇದನದ ನಂತರ ಸಮಂತಾ ಅವರ ದಿನಚರಿಯಲ್ಲಿ ಬದಲಾಗಿದೆ. ದಿನಚರಿಯ ಬಗ್ಗೆ ಅವರು ಅಭಿಮಾನಿಗಳಿಗೆ ಮಾಹಿತಿ ನೀಡುತ್ತಿದ್ದಾರೆ. ವಿಚ್ಛೇದನದ ನಂತರ ಮೂರು ನಾಯಿಗಳನ್ನು ಸಾಕಿದ್ದಾರೆ. ಅದರ ಆರೈಕೆಯಲ್ಲಿ ಸಮಂತಾ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ಜಿಮ್​ಗೂ ಕಮ್​ಬ್ಯಾಕ್​ ಮಾಡಿದ್ದಾರೆ. ಈ ವೇಳೆ ಸಮಂತಾ 30 ಕೆ.ಜಿ ಡಂಬಲ್​ ಎತ್ತಿದ್ದಾರೆ.

ಸೆಲೆಬ್ರಿಟಿಗಳು ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಜಿಮ್​ನಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಸಮಯವನ್ನು ನೀಡುತ್ತಾರೆ. ಸಮಂತಾ ಕೂಡ ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ವಿಚ್ಛೇದನದ ನಂತರ ಮತ್ತೆ ಸಿನಿಮಾ ಕೆಲಸಗಳಿಗೆ ಕಂಬ್ಯಾಕ್​ ಮಾಡಿದ್ದಾರೆ. ಫಿಟ್​ ಆಗೋಕೆ ಜಿಮ್​ನಲ್ಲಿ ಸಮಯ ಕೊಡುತ್ತಿದ್ದಾರೆ.

ಜಿಮ್​ನಲ್ಲಿ ಸಮಂತಾ ಬೆವರು ಹರಿಸುತ್ತಿದ್ದಾರೆ. ಈ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು 30 ಕೆ.ಜಿ. ಡಂಬಲ್​ ಎತ್ತುತ್ತಿದ್ದಾರೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶ್ರೀರೆಡ್ಡಿ ಶಾಕಿಂಗ್​ ಹೇಳಿಕೆ..

ಸ್ಟೈಲಿಸ್ಟ್​​ ಪ್ರೀತಮ್​ ಜೊತೆ ಸಮಂತಾ ಹೆಚ್ಚು ಕ್ಲೋಸ್​ ಆಗಿದ್ದಾರೆ. ಅದಕ್ಕೆ ಅನೇಕ ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಪ್ರೀತಮ್​ ಜೊತೆಗಿನ ಆಪ್ತತೆಯ ಕಾರಣದಿಂದಲೇ ನಾಗ ಚೈತನ್ಯ ಜೊತೆ ಸಮಂತಾ ಕಿರಿಕ್​ ಮಾಡಿಕೊಂಡರು ಎಂಬುದು ಕೆಲವರ ವಾದ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಪ್ರೀತಮ್​ ಅವರು ಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ಆದರೆ ಅವರ ಬಗ್ಗೆ ಶ್ರೀರೆಡ್ಡಿ ಬೇರೆ ವಾದವನ್ನೇ ಮುಂದಿಟ್ಟಿದ್ದಾರೆ.

‘ಪ್ರೀತಮ್​ ಓರ್ವ ಸಲಿಂಗಕಾಮಿ. ಆತನ ಜೊತೆ ಸಮಂತಾ ಸಂಬಂಧ ಬೆಳೆಸಲು ಸಾಧ್ಯವಿಲ್ಲ. ಹಾಗಾಗಿ ಅವರು ಈ ಡಿವೋರ್ಸ್​ಗೆ ಕಾರಣ ಅಲ್ಲ’ ಎಂದು ಶ್ರೀರೆಡ್ಡಿ ಹೇಳಿದ್ದಾರೆ ಎಂದು ಅನೇಕ ಕಡೆಗಳಲ್ಲಿ ವರದಿ ಆಗಿದೆ. ಈ ಮಾತಿಗೆ ಪ್ರೀತಮ್​ ಮತ್ತು ಸಮಂತಾ ಯಾವ ರೀತಿ ಪ್ರತಿಕ್ರಿಯಿಸುತ್ತಾರೋ ಗೊತ್ತಿಲ್ಲ. ಈ ವಿಚ್ಛೇದನಕ್ಕೆ ತಾವೇ ಕಾರಣ ಎಂಬ ಗಾಸಿಪ್​ ಹಬ್ಬಿದಾಗ ಪ್ರೀತಮ್ ಅವರು ಚಿಂತೆಗೆ ಒಳಗಾಗಿದ್ದರು. ‘ನಾಗ ಚೈನತ್ಯ ಅವರು ಈ ಬಗ್ಗೆ ಸ್ಪಷ್ಟನೆ ನೀಡಬಹುದಿತ್ತು. ನನ್ನ ಪಾಲಿಗೆ ಸಮಂತಾ ಸಹೋದರಿ ಇದ್ದಂತೆ’ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು.

‘ನೀವಿಬ್ಬರೂ ಒಂದಾಗಿ ಇರಬೇಕು ಅಂತ ನಾವೆಲ್ಲರೂ ಬಯಸುತ್ತೇವೆ. ನೀವು ಎಲ್ಲರಿಗೂ ಸ್ಫೂರ್ತಿ ತುಂಬುವಂತಹ ಜೋಡಿ ಆಗಿರಬೇಕು. ನಿಮ್ಮನ್ನು ನೋಡಿದರೆ ಅನೇಕರಿಗೆ ಸ್ಫೂರ್ತಿ ಬರುತ್ತದೆ. ನಿಮ್ಮಿಬ್ಬರ ನಡುವೆ ಏನೇ ಆಗಿರಬಹುದು. ಆದರೆ ನೀವೀಗ ಜೊತೆಯಾಗಿರಬೇಕು. ಅದೇ ನನ್ನ ಕೋರಿಕೆ’ ಎಂದು ಶ್ರೀರೆಡ್ಡಿ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದರು. ಆದರೆ ಅವರ ಆಸೆ ಈಡೇರಲಿಲ್ಲ.

ಇದನ್ನೂ ಓದಿ: ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್