Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ

ಸಮನ್ವಿ ಅಂತ್ಯಕ್ರಿಯೆ: ಸಮನ್ವಿ ನಿಧನಕ್ಕೆ ಕಿರುತೆರೆ ಲೋಕದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೃಜನ್​ ಲೋಕೇಶ್​ ಅವರು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ.

Samanvi Funeral: ಬೆಂಗಳೂರಿನಲ್ಲಿ ನೆರವೇರಿದ ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ಆಕ್ರಂದನ
ಸಮನ್ವಿ ಅಂತ್ಯಕ್ರಿಯೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 14, 2022 | 5:12 PM

ಜನವರಿ 13ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲನಟಿ, ಅಮೃತಾ ನಾಯ್ಡು ಮಗಳು ಸಮನ್ವಿ ಅಂತ್ಯಕ್ರಿಯೆ ಇಂದು (ಜನವರಿ 14)  ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ರಿಷಿ ಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಕುಟುಂಬದವರು, ಕಿರುತೆರೆ ಸೆಲೆಬ್ರಿಟಿಗಳು ಇದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕುಟುಂಬದವರು ಹಾಗೂ ಸೆಲೆಬ್ರಿಟಿಗಳ ಆಕ್ರಂದನ ಮುಗಿಲುಮುಟ್ಟಿದೆ.

ಸಮನ್ವಿ ನಿಧನಕ್ಕೆ ಕಿರುತೆರೆ ಲೋಕದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೃಜನ್​ ಲೋಕೇಶ್​ ಅವರು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ‘ದೇವರು ನಿಜವಾಗಿಯೂ ದೇವರಾ? ಅಥವಾ ದೇವರು ಇದ್ದಾನಾ? ಇಲ್ಲ, ದೇವರನ್ನ ನಂಬಲೇಬೇಕಾ? ಈ ಪ್ರಶ್ನೆಗಳು ಆಗಾಗ ಮೂಡಿ ಬರುತ್ತಿವೆ. ಇವತ್ತು ಈ ಘಟನೆಯ ನಂತರ ನಿಜವಾಗಲೂ ದೇವರು ಇದ್ದಾನೋ ಇಲ್ಲವೋ ಅನ್ನೋ ಪ್ರಶ್ನೆ ಮನಸ್ಸಿಗೆ ತುಂಬಾ ಗಾಢವಾಗಿ ಕಾಡುತ್ತಿದೆ. ಪುಟ್ಟ ಕಂದ ಸಮನ್ವಿ ಮಿಸ್ ಯೂ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಸೃಜನ್​ ಲೋಕೇಶ್​ ಹೇಳಿದ್ದಾರೆ. ಅವರು ಕೂಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಆರಂಭಗೊಂಡಿದೆ. ಈ ಕಾರ್ಯಕ್ರಮಕ್ಕೆ 6 ವರ್ಷದ ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು. ಆಕೆಗೆ ಅನೇಕ ಮಂದಿ ಅಭಿಮಾನಿಗಳಾಗಿದ್ದರು. ಮನರಂಜನಾ ಲೋಕದಲ್ಲಿ ಎತ್ತರಕ್ಕೆ ಬೆಳೆಯಬೇಕಿದ್ದ ಈ ಪುಟ್ಟ ಬಾಲಕಿ ಈಗ ಸಾವಿನ ಮನೆಯ ಹಾದಿ ಹಿಡಿದಿರುವುದು ತೀವ್ರ ನೋವಿನ ಸಂಗತಿ. ಸಮನ್ವಿ ತಾಯಿ ಅಮೃತಾ ನಾಯ್ಡು ಈಗ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಖುಷಿಯ ದಿನಗಳನ್ನು ಎದುರು ನೋಡಬೇಕಿದ್ದ ಅವರ ಬದುಕಿನಲ್ಲಿ ದುರ್ಘಟನೆ ನಡೆದಿದೆ.

ಅಪಘಾತ ನಡೆದಿದ್ದು ಎಲ್ಲಿ?

ಜ.13ರಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ ನಾಯ್ಡು ತೆರಳುತ್ತಿದ್ದರು. ಈ ವೇಳೆ ಸ್ಕೂಟರ್​ಗೆ ಲಾರಿ ಬಂದು ಹೊಡೆಯಿತು. ಸ್ಥಳದಲ್ಲೇ ಸಮನ್ವಿ ಮೃತಪಟ್ಟಳು. ಅಮೃತಾ ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಸ್. ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸಮನ್ವಿಗೆ ಆ್ಯಕ್ಸಿಡೆಂಟ್​ ಆದ ಸ್ಥಳದಲ್ಲಿ ಏನು ನಡೆಯಿತು? ಪ್ರತ್ಯಕ್ಷದರ್ಶಿಗಳು ತೆರೆದಿಟ್ಟ ಅಸಲಿ ಸತ್ಯ ಇಲ್ಲಿದೆ 

ಸಮನ್ವಿ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ;​ ಯಮಸ್ವರೂಪಿಯಾಗಿ ಬಂತು ಟಿಪ್ಪರ್​ ಲಾರಿ

Published On - 1:47 pm, Fri, 14 January 22

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ