AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​ಫೇರ್: ಲಂಕೇಶ್, ಇಂದ್ರಜಿತ್ ಬಳಿಕ ಸಮರ್ಜಿತ್​ಗೂ ಒಲಿದ ಪ್ರತಿಷ್ಠಿತ ಪ್ರಶಸ್ತಿ

‘ಗೌರಿ’ ಚಿತ್ರಕ್ಕಾಗಿ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಫಿಲ್ಮ್​ಫೇರ್ ಪ್ರಶಸ್ತಿ ಪಡೆದಿದ್ದಾರೆ. ಇದು ಲಂಕೇಶ್ ಕುಟುಂಬಕ್ಕೆ ಮೂರನೇ ಬಾರಿ ಸಿಗುತ್ತಿರುವ ಫಿಲ್ಮ್​ಫೇರ್ ಪ್ರಶಸ್ತಿ ಎಂಬುದು ವಿಶೇಷ. ಈ ಮೊದಲು ಲಂಕೇಶ್ ಮತ್ತು ಇಂದ್ರಜಿತ್ ಅವರಿಗೆ ಈ ಪ್ರಶಸ್ತಿ ಸಿಕ್ಕಿತ್ತು. ಆ ಬಗ್ಗೆ ಇಲ್ಲಿದೆ ಮಾಹಿತಿ..

ಫಿಲ್ಮ್​ಫೇರ್: ಲಂಕೇಶ್, ಇಂದ್ರಜಿತ್ ಬಳಿಕ ಸಮರ್ಜಿತ್​ಗೂ ಒಲಿದ ಪ್ರತಿಷ್ಠಿತ ಪ್ರಶಸ್ತಿ
Samarjit Lankesh
ಮದನ್​ ಕುಮಾರ್​
|

Updated on: Feb 25, 2026 | 4:23 PM

Share

ಇತ್ತೀಚೆಗೆ ಕೇರಳದ ಕೊಚ್ಚಿಯಲ್ಲಿ 70ನೇ ಫಿಲ್ಮ್‌ಫೇರ್ ಪ್ರಶಸ್ತಿ (Filmfare awards) ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಯಿತು. ‘ಗೌರಿ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಸಮರ್ಜಿತ್‍ ಲಂಕೇಶ್‍ (Samarjit Lankesh) ಅವರು ‘ಅತ್ಯುತ್ತಮ ನವನಟ’ ಪ್ರಶಸ್ತಿ ಪಡೆದುಕೊಂಡರು. ವಿಶೇಷ ಏನೆಂದರೆ, ಲಂಕೇಶ್‍ ಕುಟುಂಬಕ್ಕೆ ಸಿಗುತ್ತಿರುವ ಮೂರನೆಯ ಫಿಲ್ಮ್​ಫೇರ್ ಪ್ರಶಸ್ತಿ ಇದು. ಈ ಮೊದಲು ಲಂಕೇಶ್ ಮತ್ತು ಇಂದ್ರಜಿತ್ ಲಂಕೇಶ್ ಅವರು ಕೂಡ ಫಿಲ್ಮ್​ಫೇರ್ ಪ್ರಶಸ್ತಿ ಪಡೆದಿದ್ದರು.

ಕನ್ನಡದ ಜನಪ್ರಿಯ ಸಾಹಿತಿ ಹಾಗೂ ‘ಲಂಕೇಶ್ ‍ಪತ್ರಿಕೆ’ ಸಂಪಾದಕರಾಗಿದ್ದ ಪಿ. ಲಂಕೇಶ್‍ ಅವರು 1980ರಲ್ಲಿ ‘ಎಲ್ಲಿಂದಲೋ ಬಂದವರು’ ಸಿನಿಮಾದ ನಿರ್ದೇಶನಕ್ಕಾಗಿ ಫಿಲ್ಮ್‌ಫೇರ್ (ದಕ್ಷಿಣ) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಖ್ಯಾತರಾಗಿದ್ದ ಲಂಕೇಶ್‍ ಅವರು ಚಿತ್ರರಂಗದಲ್ಲೂ ನಿರ್ದೇಶಕರಾಗಿ ಹೆಸರು ಮಾಡಿದ್ದರು. ‘ಪಲ್ಲವಿ’, ‘ಅನುರೂಪ’, ‘ಖಂಡವಿದೆಕೋ ಮಾಂಸವಿದೆಕೋ’, ‘ಎಲ್ಲಿಂದಲೋ ಬಂದವರು’ ಸಿನಿಮಾಗಳನ್ನು ನಿರ್ದೇಶಿಸಿದ್ದರು.

ಲಂಕೇಶ್‍ ಪುತ್ರ ಇಂದ್ರಜಿತ್‍ ಲಂಕೇಶ್‍ ಅವರು ‘ತುಂಟಾಟ’ ಸಿನಿಮಾ ಮೂಲಕ ನಿರ್ದೇಶಕರಾದರು. ನಂತರ ‘ಮೋನಾಲಿಸಾ’, ‘ಐಶ್ವರ್ಯ’, ‘ಹುಡುಗ ಹುಡುಗಿ’, ‘ಲವ್‍ ಯೂ ಆಲಿಯಾ’, ‘ಶಕೀಲಾ’, ‘ಗೌರಿ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದರು. ಉಪೇಂದ್ರ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಐಶ್ವರ್ಯ’ ಚಿತ್ರದ ನಿರ್ದೇಶನಕ್ಕಾಗಿ ಅವರು ‘ಅತ್ಯುತ್ತಮ ನಿರ್ದೇಶನ’ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದಿದ್ದರು.

ಈಗ ಲಂಕೇಶ್‍ ಕುಟುಂಬದ 3ನೇ ತಲೆಮಾರಿನ ಸಮರ್ಜಿತ್‍ ಅವರು ಚೊಚ್ಚಲ ಅಭಿನಯದ ಸಿನಿಮಾಗೆ ಪ್ರಶಸ್ತಿ ಪಡೆದಿದ್ದಾರೆ. ‘ಗೌರಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ ಸಮರ್ಜಿತ್‍ ಅವರು ಮೊದಲ ಚಿತ್ರದಲ್ಲೇ ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: 70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ..

‘ಗೌರಿ’ ಸಿನಿಮಾ ಬಳಿಕ ಕಳೆದ ವರ್ಷ ಬಿಡುಗಡೆಯಾಗಿದ್ದ ‘ವೃಷಭ’ ಪ್ಯಾನ್‍ ಇಂಡಿಯಾ ಸಿನಿಮಾದಲ್ಲೂ ಸಮರ್ಜಿತ್‍ ನಟಿಸಿದರು. ಈ ಸಿನಿಮಾದಲ್ಲಿ ಮೋಹನ್​​ಲಾಲ್ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿತು. ಈಗ ಹಲವು ಅವಕಾಶಗಳು ಅವರಿಗೆ ಸಿಗುತ್ತಿವೆ. ಒಂದು ಕನ್ನಡ ಮತ್ತು ಒಂದು ಹಿಂದಿ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದು ಶೀಘ್ರದಲ್ಲೇ ಆ ಬಗ್ಗೆ ಮಾಹಿತಿ ಹೊರಬೀಳಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ