‘ಸಂಭವಾಮಿ ಯುಗೇಯುಗೇ’ ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ

ಅಧರ್ಮ ಹೆಚ್ಚಾದಾಗೆಲ್ಲ ತಾನು ಮತ್ತೆ ಮತ್ತೆ ಹುಟ್ಟಿ ಬರುತ್ತೇನೆ ಎಂಬುವ ಶ್ರೀಕೃಷ್ಣನ ಮಾತನ್ನೇ ಆದರ್ಶವಾಗಿಟ್ಟುಕೊಂಡು ಕತೆ ಬರೆದು ಮಾಡಲಾಗಿರವ ಸಿನಿಮಾಕ್ಕೆ ಅದನ್ನೇ ಹೆಸರನ್ನಾಗಿ ಇಡಲಾಗಿದೆ.

'ಸಂಭವಾಮಿ ಯುಗೇಯುಗೇ' ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ
Follow us
ಮಂಜುನಾಥ ಸಿ.
|

Updated on: May 19, 2024 | 10:36 PM

ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತನ್ನೇ ಸಿನಿಮಾದ ಹೆಸರನ್ನಾಗಿಸಿಕೊಂಡ ಸಿನಿಮಾ ಒಂದು ಬಿಡುಗಡೆ ಆಗಲಿದೆ. ಸಿನಿಮಾದ ಹೆಸರು “ಸಂಭವಾಮಿ ಯುಗೇಯುಗೇ” . ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಪ್ರತಿಭಾ ನಿರ್ಮಾಣ ಮಾಡಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನ ಮಾಡಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಸಿನಿಮಾದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

“ಸಂಭವಾಮಿ ಯುಗೇಯುಗೇ” ಎಂಬ ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಹೆಣೆದಿದ್ದಾರೆ. ಸಿನಿಮಾದ ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದ್ದೆ. ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

ಇದನ್ನೂ ಓದಿ:ಜಪಾನ್​ಗೆ ಹೊರಟ ‘777 ಚಾರ್ಲಿ’; ಕನ್ನಡ ಸಿನಿಮಾಗೆ ಮತ್ತೊಂದು ಗರಿ

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. “ಸಂಭಾವಮಿ ಯುಗೇಯಗೇ” ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊಸಬರು, ಅನುಭವಿಗಳು ಮಿಶ್ರಣದಂತಿರುವ ಈ ಸಿನಿಮಾ ಆದಷ್ಟು ಬೇಗ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ