ಟ್ರೈಲರ್ ಮೂಲಕ ಗಮನ ಸೆಳೆಯುತ್ತಿದೆ ಭಿನ್ನ ಕತೆಯ ‘ಕ್ರೀಂ’

Kreem Trailer: ಭಿನ್ನ ರೀತಿಯ ಕತೆಯುಳ್ಳ ಸಿನಿಮಾ ‘ಕ್ರೀಂ’ ವಿಷ್ಯುಯಲ್ ಟ್ರೈಲರ್ ಬಿಡುಗಡೆ ಆಗಿದೆ. ಅರುಣ್ ಸಾಗರ್, ಸಂಯುಕ್ತಾ ಹೆಗಡೆ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಟ್ರೈಲರ್ ಮೂಲಕ ಗಮನ ಸೆಳೆಯುತ್ತಿದೆ ಭಿನ್ನ ಕತೆಯ ‘ಕ್ರೀಂ’
Follow us
ಮಂಜುನಾಥ ಸಿ.
|

Updated on: Jan 31, 2024 | 10:19 PM

‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಎಲ್ಲರ ಮನ ಗೆದ್ದ ನಟಿ ಸಂಯುಕ್ತ ಹೆಗಡೆ (Samyukta Hegde) ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕ್ರೀಂ’ ಸಿನಿಮಾದ ವಿಷುಯಲ್ ಟ್ರೇಲರ್ ಇತ್ತೀಚೆಗೆ ಎ2 ಮ್ಯೂಸಿಕ್ ಮೂಲಕ ಬಿಡುಗಡೆಯಾಯ್ತು. ಕುತೂಹಲಕಾರಿ ಕತೆ ಹೊಂದಿರುವ ಈ ಸಿನಿಮಾ, ಸಾಮಾನ್ಯ ಸಿನಿಮಾಗಳಂತಲ್ಲ ಎಂಬುದನ್ನು ಟ್ರೈಲರ್ ಸಾರಿ ಹೇಳುತ್ತಿದೆ. ಲೇಖಕ ಅಗ್ನಿ ಶ್ರೀಧರ್ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದರು. ಡಿ.ಕೆ.ದೇವೇಂದ್ರ, ನಿರ್ಮಿಸಿರುವ ಈ ಸಿನಿಮಾವನ್ನು ಅಭಿಷೇಕ್ ಬಸಂತ್ ನಿರ್ದೇಶನ ಮಾಡಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ.

‘ಎಲ್ಲ ಊರುಗಳಲ್ಲಿ, ಎಲ್ಲಾ ರಾಜ್ಯಗಳಲ್ಲಿ, ಎಲ್ಲಾ ಭಾಷೆಗಳಲ್ಲಿ ಕಾಣದ ಗರ್ಭ ಅಂತ ಇರುತ್ತದೆ. ಅಲ್ಲಿ ಏನೆಲ್ಲಾ ನಡೆಯುತ್ತದೆ. ಬೆಂಗಳೂರಿನಲ್ಲೇ ನನಗೆ ಗೊತ್ತಿರುವ ಸಂಗತಿಯಿಟ್ಟುಕೊಂಡು ಹತ್ತಾರು ವರ್ಷಗಳಿಂದ ಯೋಚನೆ ಮಾಡುತ್ತಿದೆ. ಸಿನಿಮಾ ಮಾಡಲು ಆಗಿರಲಿಲ್ಲ. ನಿರ್ಮಾಪಕ ದೇವೇಂದ್ರ ಅವರು ಸಿನಿಮಾ ಮಾಡಲೇಬೇಕು ಎಂದು ನನ್ನ ಒತ್ತಾಯಿಸಿದಾಗ ಈ ಚಿತ್ರದ ಕಥೆ ಹೇಳಿದೆ. ಈ ಚಿತ್ರ ಮಾಡುವುದಕ್ಕೆ ನಿಜವಾಗಿಯೂ ತುಂಬಾ ಧೈರ್ಯ ಬೇಕು.‌ ಆ ಧೈರ್ಯವನ್ನು ದೇವೇಂದ್ರ ಮಾಡಿದ್ದಾರೆ. ಭಾರತದಲ್ಲಿ ಪ್ರತಿವರ್ಷ ಎರಡೂವರೆ ಸಾವಿರ ಮಹಿಳೆಯರು ಒಂದಲ್ಲಾ ಒಂದು ಕಾರಣದಿಂದ ಬಲಿಯಾಗುತ್ತಿದ್ದಾರೆ? ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸುವ ಕಥೆ ಕೂಡ ಈ ಚಿತ್ರದಲ್ಲಿದೆ. ಇನ್ನೂ ಸಂಯುಕ್ತ ಹೆಗಡೆ ಈ ಚಿತ್ರಕ್ಕಾಗಿ ತನ್ನ ಜೀವವನ್ನೇ ಕೊಟ್ಟು ಬಿಟ್ಟಿದ್ದಾರೆ. ಈ ಚಿತ್ರಕ್ಕಾಗಿ ಬಹಳ ಶ್ರಮ ಪಟ್ಟಿದ್ದಾರೆ. ಈ ಚಿತ್ರದ ಮೂಲಕ ಅವರು ಇನ್ನೂ ಎತ್ತರಕ್ಕೆ ಹೋಗುತ್ತಾರೆ. ನಿರ್ದೇಶಕ ಅಭಿಷೇಕ್ ಬಸಂತ್ ನನ್ನ ತಮ್ಮನ ಮಗ.‌ ಆತ ಬಹಳ ಬುದ್ದಿವಂತ. ತುಂಬಾ ಚೆನ್ನಾಗಿ ಚಿತ್ರ ಮಾಡಿದ್ದಾನೆ. ಶಿವು ಅವರ ಕಲಾ ನಿರ್ದೇಶನ ತುಂಬಾ ಚೆನ್ನಾಗಿದೆ ಎಂದರು ಅಗ್ನಿ ಶ್ರೀಧರ್.

ಇದನ್ನೂ ಓದಿ:ಬೆಂಗಳೂರಿನ ಕೃಷಿ ಮೇಳದಲ್ಲಿ ಜನರ ಬಾಯಲ್ಲಿ ನೀರೂರಿಸಿದ ಸಿರಿಧಾನ್ಯ ಐಸ್‌ಕ್ರೀಂ

ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಐದು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಸಿನಿಮಾ ಇದು. ಈ ಚಿತ್ರದಲ್ಲಿ ಆಕ್ಷನ್ ಕೂಡ ಮಾಡಿದ್ದೇನೆ. ಕಾಲು ಕೂಡ ಮುರಿದಿತ್ತು. ಒಟ್ಟಿನಲ್ಲಿ ಎಲ್ಲರ ಶ್ರಮದಿಂದ “ಕ್ರೀಂ” ಚಿತ್ರ ಚೆನ್ನಾಗಿ ಬಂದಿದೆ. ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ಅವರ ಛಾಯಾಗ್ರಹಣ ಸುಂದರವಾಗಿದೆ. ಸಹಕಾರ ನೀಡಿದ ನಿರ್ದೇಶಕ, ನಿರ್ಮಾಪಕರಿಗೆ ಹಾಗೂ ವಿಶೇಷವಾಗಿ ಅಗ್ನಿ ಶ್ರೀಧರ್ ಅವರಿಗೆ ಧನ್ಯವಾದ ಎಂದರು ನಾಯಕಿ ಸಂಯುಕ್ತ ಹೆಗಡೆ.

ನಿರ್ದೇಶಕ ಅಭಿಷೇಕ್ ಬಸಂತ್ ಮಾತನಾಡಿ, ‘ಚಿತ್ರತಂಡದ ಸಹಕಾರದಿಂದ ಇಪ್ಪತ್ತೆಂಟು ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ.‌ ಇಂದು ವಿಷುಯಲ್ ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ನಿಮ್ಮ ಮುಂದೆ ಚಿತ್ರ ಬರಲಿದೆ‌’ ಎಂದರು. ನಿರ್ಮಾಪಕ ಡಿಕೆ ದೇವೇಂದ್ರ ಮಾತನಾಡಿ, ‘ಉತ್ತಮ ಕಥೆ ನೀಡಿರುವ ಅಗ್ನಿ ಶ್ರೀಧರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಇನ್ನು ಇಡೀ ತಂಡದ ಚಿತ್ರ ಚೆನ್ನಾಗಿ ಮೂಡಿಬರಲು ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ಹೇಳಿದರು.

ಸಂಗೀತ ನಿರ್ದೇಶಕ ರೋಹಿತ್, ಕಲಾ ನಿರ್ದೇಶಕ ಶಿವಕುಮಾರ್ ಹಾಗೂ ಚಿತ್ರದಲ್ಲಿ ನಟಿಸಿರುವ ರೋಷನ್‌ ಅಗ್ನಿ ಶ್ರೀಧರ್ ಬಚ್ಚನ್, ಇಫ್ರಾನ್ ಮುಂತಾದವರು “ಕ್ರೀಂ” ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕರಾದ ಕೆ.ಮಂಜು, ಸಂಜಯ್ ಗೌಡ, ನವರಸನ್, ಶ್ರೇಯಸ್ ಮೀಡಿಯಾ ಶ್ರೀನಿವಾಸ್ ಹಾಗೂ ನಿರ್ದೇಶಕ ಜಡೇಶ್ ಕೆ ಹಂಪಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ