AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಣ’ ಚಿತ್ರದ ವಿಶೇಷ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಸಂಯುಕ್ತಾ; ಶ್ರೇಯಸ್​ ಜತೆ ‘ಕಿರಿಕ್​ ಪಾರ್ಟಿ’ ಹುಡುಗಿ

‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ್ದ ಸಂಯುಕ್ತಾ ಹೆಗಡೆಗೆ ಸಾಕಷ್ಟು ಆಫರ್​ಗಳು ಬರೋಕೆ ಪ್ರಾರಂಭವಾದವು. ಆ ಸಿನಿಮಾ ಬಳಿಕ ‘ಕಾಲೇಜ್​ ಕುಮಾರ’ ಚಿತ್ರದಲ್ಲಿ ಸಂಯುಕ್ತಾ ನಟಿಸಿದ್ದರು. ಇದಾದ ನಂತರ ಅವರು ತೆಲುಗು ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟರು. ಈಗ ಕೆಲ ಸಿನಿಮಾಗಳ ಶೂಟಿಂಗ್​ನಲ್ಲಿ ಸಂಯುಕ್ತಾ ಬ್ಯುಸಿ ಇದ್ದಾರೆ. ಈಗ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್​ ಅಭಿನಯದ ‘ರಾಣ’ ಚಿತ್ರದಲ್ಲಿ ವಿಶೇಷ ಹಾಡಿಗೆ ಸಂಯುಕ್ತಾ ಹೆಜ್ಜೆ ಹಾಕಲಿದ್ದಾರೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತ ಮಾಡಿದೆ.   ಗುಜ್ಜಲ್ ಪುರುಶೋತ್ತಮ್ […]

‘ರಾಣ’ ಚಿತ್ರದ ವಿಶೇಷ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಸಂಯುಕ್ತಾ; ಶ್ರೇಯಸ್​ ಜತೆ ‘ಕಿರಿಕ್​ ಪಾರ್ಟಿ’ ಹುಡುಗಿ
ಶ್ರೇಯಸ್​-ಸಂಯುಕ್ತಾ
TV9 Web
| Edited By: |

Updated on: Nov 19, 2021 | 7:13 PM

Share

‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ್ದ ಸಂಯುಕ್ತಾ ಹೆಗಡೆಗೆ ಸಾಕಷ್ಟು ಆಫರ್​ಗಳು ಬರೋಕೆ ಪ್ರಾರಂಭವಾದವು. ಆ ಸಿನಿಮಾ ಬಳಿಕ ‘ಕಾಲೇಜ್​ ಕುಮಾರ’ ಚಿತ್ರದಲ್ಲಿ ಸಂಯುಕ್ತಾ ನಟಿಸಿದ್ದರು. ಇದಾದ ನಂತರ ಅವರು ತೆಲುಗು ಹಾಗೂ ತಮಿಳು ಚಿತ್ರರಂಗಕ್ಕೂ ಕಾಲಿಟ್ಟರು. ಈಗ ಕೆಲ ಸಿನಿಮಾಗಳ ಶೂಟಿಂಗ್​ನಲ್ಲಿ ಸಂಯುಕ್ತಾ ಬ್ಯುಸಿ ಇದ್ದಾರೆ. ಈಗ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್​ ಅಭಿನಯದ ‘ರಾಣ’ ಚಿತ್ರದಲ್ಲಿ ವಿಶೇಷ ಹಾಡಿಗೆ ಸಂಯುಕ್ತಾ ಹೆಜ್ಜೆ ಹಾಕಲಿದ್ದಾರೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತ ಮಾಡಿದೆ.  

ಗುಜ್ಜಲ್ ಪುರುಶೋತ್ತಮ್ ನಿರ್ಮಾಣ ಮಾಡುತ್ತಿರುವ ಹಾಗೂ ನಂದ ಕಿಶೋರ್ ನಿರ್ದೇಶನದ ‘ರಾಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಕೆಲ ತಿಂಗಳ ಹಿಂದೆ ಶ್ರೇಯಸ್​ ಅವರು ಶಿವರಾಜ್​ಕುಮಾರ್​ ಅವರಿಂದ ಲಾಂಗ್​ ಹಿಡಿಯುವ ತರಬೇತಿ ಪಡೆದುಕೊಂಡಿದ್ದರು. ಈ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಈಗ ‘ರಾಣ’ ಚಿತ್ರದ ವಿಶೇಷ ಹಾಡೊಂದರಲ್ಲಿ ಸಂಯುಕ್ತಾ ಡಾನ್ಸ್​ ಮಾಡಲಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶಿವು ನಿರ್ಮಿಸಿರುವ ಭವ್ಯವಾದ ಸೆಟ್​​​ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ.  ಶಿವು ಭೇರ್ಗಿ ಈ ಹಾಡನ್ನು ಬರೆದಿದ್ದು, ಚಂದನ್ ಶೆಟ್ಟಿ ಸಂಗೀತ ನೀಡಿದ್ದಾರೆ. ನಂದಕಿಶೋರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಶ್ರೇಯಸ್​​ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ. ಶೇಖರ್ ಚಂದ್ರು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿಶ್ವ, ಶಿವು ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ ‘ರಾಣ’ ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ‌. ಈ ವಿಶೇಷ ಹಾಡು ಹೇಗೆ ಮೂಡಿ ಬರಲಿದೆ ಎನ್ನುವ ಕುತೂಹಲ ಚಿತ್ರತಂಡಕ್ಕೆ ಮೂಡಿದೆ.

ಆಗಸ್ಟ್​ ತಿಂಗಳಲ್ಲಿ ಚಿತ್ರತಂಡ ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಮಾತನಾಡಿದ್ದ ಶಿವಣ್ಣ ‘ಪಾತ್ರ ಎಂದು ಬಂದಾಗ ಎಲ್ಲ ರೀತಿಯ ಕ್ಯಾರೆಕ್ಟರ್​ಗಳನ್ನೂ ಮಾಡಬೇಕು. ನನಗಿಂತ ಉತ್ತಮವಾಗಿ ಮಚ್ಚು ಹಿಡಿಯವವರು ಇದ್ದಾರೆ. ಪ್ರತಿ ಪಾತ್ರಕ್ಕೂ ಒಂದು ಆ್ಯಟಿಟ್ಯೂಡ್​ ಇರುತ್ತದೆ. ಅದು ತುಂಬಾನೇ ಮುಖ್ಯ. ನಾನು ಮಚ್ಚು ಹಿಡಿದೆ, ಅದಕ್ಕೆ ಸಿನಿಮಾ ಹಿಟ್​ ಆಯಿತು ಎಂದು ಹೇಳೋಕಾಗಲ್ಲ. ನಾನು ಸಿನಿಮಾದಲ್ಲಿ ಮಚ್ಚು ಹಿಡಿದು ನಟಿಸ್ತೀನಿ ನಿಜ. ಆದರೆ, ಅದನ್ನು ಹೇಳಿಕೊಡಿ ಎಂದರೆ ಅದು ಸ್ವಲ್ಪ ಕಷ್ಟದ ಕೆಲಸ’ ಎಂದಿದ್ದರು.

ಇದನ್ನೂ ಓದಿ: ಪುನೀತ್ ನಿಧನದ ಬಗ್ಗೆ ರಶ್ಮಿಕಾ ಮಂದಣ್ಣ ಕೊಟ್ಟ ರಿಯಾಕ್ಷನ್​ ಏನು? ಇಲ್ಲಿದೆ ವಿಡಿಯೋ

ಅನುಷ್ಕಾ ಶರ್ಮಾಗೆ ಮೈಸೂರು ಜೋಡಿಯಿಂದ ಕನ್ನಡದಲ್ಲೇ ಮದುವೆ ಕರೆಯೋಲೆ; ಸಂತಸ ಪಟ್ಟ ನಟಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು