ಸಂಚಾರಿ ವಿಜಯ್ ಕೋಮಾದಲ್ಲೇ ಇದ್ದಾರೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ: ವೈದ್ಯರ ಮಾಹಿತಿ
Sanchari Vijay Health Update: ಸದ್ಯ ನಟ ಸಂಚಾರಿ ವಿಜಯ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೈಕ್ ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ವುಡ್ನ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಸಂಚಾರಿ ವಿಜಯ್ಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್ನಲ್ಲಿ ಮಾಹಿತಿ ನೀಡಿದ್ದಾರೆ.
ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ, ಮೆದುಳಿನ ಭಾಗದಲ್ಲಿ ಉಂಟಾದ ರಕ್ತಸ್ರಾವದಿಂದ ಗಂಭೀರವಾಗಿತ್ತು. ಕೂಡಲೇ ಶಸ್ತ್ರಚಿಕಿತ್ಸೆ ಮಾಡಿ ಮೆದುಳಿನಲ್ಲಿನ ರಕ್ತಸ್ರಾವ ತೆಗೆಯಲಾಗಿದೆ. ಸದ್ಯ ನಟ ಸಂಚಾರಿ ವಿಜಯ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಲ್ಲಾ ಜೀವ ರಕ್ಷಕ ವಿಧಾನದ ಮೂಲಕ, ನ್ಯೂರೋ ಐಸಿಯುನಲ್ಲಿ ಇದ್ದಾರೆ. ನಾವು ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆಯಿಂದ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಸ್ಯಾಂಡಲ್ವುಡ್ನಲ್ಲಿ ಭಿನ್ನ ನಟನೆ ಮೂಲಕ ಗುರುತಿಸಿಕೊಂಡ ನಟ ಸಂಚಾರಿ ವಿಜಯ್ ಅವರು ಅಪಘಾತಕ್ಕೆ ತುತ್ತಾಗಿದ್ದರು. ಬೈಕ್ನಲ್ಲಿ ಸಂಚಾರ ಮಾಡುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅವರಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿತ್ತು.
ಶನಿವಾರ (ಜೂನ್ 12) ರಾತ್ರಿ ಬೈಕ್ ಅಪಘಾತ ಸಂಭವಿಸಿತ್ತು. ಅವರನ್ನು ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಮೆದುಳಿನ ಬಲ ಭಾಗದಲ್ಲಿ ರಕ್ತಸ್ರಾವ ಉಂಟಾಗಿದ್ದು, ತೊಡೆಯಲ್ಲಿ ಗಾಯಗಳಾಗಿದೆ ಎಂದು ಮಾಹಿತಿ ಲಭ್ಯವಾಗಿತ್ತು. ನಿನ್ನೆ ರಾತ್ರಿಯೇ ಅವರಿಗೆ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿತ್ತು.
ರಂಗಭೂಮಿ ಹಿನ್ನೆಲೆಯಿಂದ ಬಂದ ಸಂಚಾರಿ ವಿಜಯ್ ಓರ್ವ ಪ್ರತಿಭಾನ್ವಿತ ನಟ. 2014ರಲ್ಲಿ ಅವರ ನಟಿಸಿದ ಹರಿವು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ‘ನಾನು ಅವನಲ್ಲ.. ಅವಳು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಬಳಿಕ ಅವರಿಗೆ ಸ್ಯಾಂಡಲ್ವುಡ್ನಲ್ಲಿ ಅವಕಾಶಗಳು ಹೆಚ್ಚಾಗಿದ್ದವು. ಲಾಕ್ಡೌನ್ ಸಂದರ್ಭದಲ್ಲಿ ಅವರು ಅನೇಕರಿಗೆ ಸಹಾಯ ಮಾಡುತ್ತಿದ್ದರು. ಅಷ್ಟರಲ್ಲೇ ಈ ಅಪಘಾತ ಸಂಭವಿಸಿರುವುದು ನೋವಿನ ಸಂಗತಿ.
ಇದನ್ನೂ ಓದಿ: ಸಂಚಾರಿ ವಿಜಯ್ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು
Published On - 11:02 pm, Sun, 13 June 21