Sanchari Vijay: ಸಂಚಾರಿ ವಿಜಯ್​ ಇಲ್ಲದೇ ಕಳೆಯಿತು ಒಂದು ವರ್ಷ; ಕನ್ನಡದ ಹೆಮ್ಮೆಯ ನಟನ ನೆನಪು ಅಮರ

Sanchari Vijay Death Anniversary: ಸಂಚಾರಿ ವಿಜಯ್​ ಅವರ ಮೊದಲ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅಭಿಮಾನಿಗಳು ಮತ್ತು ಆಪ್ತರು ಅವರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ಕನ್ನಡದ ಹೆಮ್ಮೆಯ ನಟನಿಗೆ ನಮನ ಸಲ್ಲಿಸಲಾಗುತ್ತಿದೆ.

Sanchari Vijay: ಸಂಚಾರಿ ವಿಜಯ್​ ಇಲ್ಲದೇ ಕಳೆಯಿತು ಒಂದು ವರ್ಷ; ಕನ್ನಡದ ಹೆಮ್ಮೆಯ ನಟನ ನೆನಪು ಅಮರ
ಸಂಚಾರಿ ವಿಜಯ್
Follow us
TV9 Web
| Updated By: Digi Tech Desk

Updated on:Jun 15, 2022 | 11:14 AM

Sanchari Vijay Death Anniversary:  ಕೇವಲ 37ನೇ ವಯಸ್ಸಿಗೆ ನಟ ಸಂಚಾರಿ ವಿಜಯ್​ ಅವರು (Sanchari Vijay) ನಮ್ಮನ್ನೆಲ್ಲ ಬಿಟ್ಟು ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ವಿಧಿಯ ಆಟಕ್ಕೆ ಅವರು ಬಲಿಯಾಗಬೇಕಾಯಿತು. 2021ರ ಜೂನ್​ 15ರಂದು ಕೇಳಿಬಂದ ಆ ಶಾಕಿಂಗ್ ಸುದ್ದಿಯನ್ನು ಅರಗಿಸಿಕೊಳ್ಳಲು ಅವರ ಅಭಿಮಾನಿಗಳಿಗೆ ಸಾಧ್ಯವಾಗಲೇ ಇಲ್ಲ. ಸಂಚಾರಿ ವಿಜಯ್​ ಇನ್ನಿಲ್ಲ ಎಂದು ತಿಳಿದಾಗ ಕುಟುಂಬದವರಿಗೆ ಮತ್ತು ಆಪ್ತರಿಗೆ ಆದ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರು ನಿಧನರಾಗಿ ಇಂದಿಗೆ (ಜೂನ್​ 15) ಒಂದು ವರ್ಷ ಕಳೆದಿದೆ. ಓರ್ವ ಪ್ರತಿಭಾನ್ವಿತ ನಟನನ್ನು ಕಳೆದುಕೊಂಡು ಕನ್ನಡ ಚಿತ್ರರಂಗ (Sandalwood) ಬಡವಾಗಿದೆ. ಸಂಚಾರಿ ವಿಜಯ್​ ಅವರ ಸ್ಥಾನವನ್ನು ತುಂಬಬಲ್ಲ ಮತ್ತೊರ್ವ ನಟನನ್ನು ಕಾಣಲು ಸಾಧ್ಯವಿಲ್ಲ. ಮೊದಲ ವರ್ಷದ ಪುಣ್ಯ ಸ್ಮರಣೆಯಲ್ಲಿ (Sanchari Vijay Death Anniversary) ಎಲ್ಲರೂ ಅವರ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಮಾಡಿದ ಸಾಧನೆಗಳನ್ನು ಶ್ಲಾಘಿಸುತ್ತಿದ್ದಾರೆ.

2011ರಲ್ಲಿ ಸಂಚಾರಿ ವಿಜಯ್​ ಅವರು ಸಿನಿಮಾರಂಗಕ್ಕೆ ಎಂಟ್ರಿ ನೀಡಿದರು. ಅವರು ನಟಿಸಿದ ಮೊದಲ ಸಿನಿಮಾ ‘ರಂಗಪ್ಪ ಹೋಗ್ಬಿಟ್ನಾ’. ಅವರಿಗೆ ಮೊದಲ ಬಾರಿಗೆ ಖ್ಯಾತಿ ತಂದುಕೊಟ್ಟ ಸಿನಿಮಾ ‘ಹರಿವು’. ಆ ಚಿತ್ರಕ್ಕೆ ಮಂಸೋರೆ ನಿರ್ದೇಶನ ಮಾಡಿದ್ದರು. ಮಗನನ್ನು ಕಳೆದುಕೊಂಡ ಅಸಹಾಯಕ ತಂದೆಯ ಪಾತ್ರದಲ್ಲಿ ಸಂಚಾರಿ ವಿಜಯ್​ ಮನೋಜ್ಞವಾಗಿ ಅಭಿನಯಿಸಿದ್ದರು. ‘ಹರಿವು’ ಸಿನಿಮಾ ರಾಷ್ಟ್ರ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡು ಬೀಗಿತು.

ಇದನ್ನೂ ಓದಿ: ಅಗಲಿದ ಗೆಳೆಯ ಸಂಚಾರಿ ವಿಜಯ್​ಗಾಗಿ ‘ಪುಕ್ಸಟ್ಟೆ ಲೈಫು’ ಚಿತ್ರದ ಟಿಕೆಟ್​ ಖರೀದಿಸಿ, ಪತ್ರ ಬರೆದ ಮಂಸೋರೆ

ಇದನ್ನೂ ಓದಿ
Image
ಸಂಚಾರಿ ವಿಜಯ್​ ಪುಣ್ಯ ಸ್ಮರಣೆ: ಪ್ರತಿಭಾವಂತ ನಟನ ನೆನಪಿಗಾಗಿ ಹುಟ್ಟೂರಿನಲ್ಲಿ ಪ್ರತಿಮೆ ನಿರ್ಮಾಣ
Image
Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ
Image
‘ಪುಕ್ಸಟ್ಟೆ ಲೈಫು’ ವಿಮರ್ಶೆ: ಭರಪೂರ ನಗಿಸಿ ಚೆಂದದ ಸಂದೇಶ ಕೊಟ್ಟುಹೋದ ಸಂಚಾರಿ ವಿಜಯ್​
Image
ಅಗಲಿದ ಗೆಳೆಯ ಸಂಚಾರಿ ವಿಜಯ್​ಗಾಗಿ ‘ಪುಕ್ಸಟ್ಟೆ ಲೈಫು’ ಚಿತ್ರದ ಟಿಕೆಟ್​ ಖರೀದಿಸಿ, ಪತ್ರ ಬರೆದ ಮಂಸೋರೆ

ಇಡೀ ದೇಶಕ್ಕೆ ಸಂಚಾರಿ ವಿಜಯ್​ ಅವರ ಅದ್ಭುತ ಪ್ರತಿಭೆ ಅನಾವರಣ ಆಗಿದ್ದು ‘ನಾನು ಅವನಲ್ಲ ಅವಳು’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ಅವರು ಮಂಗಳಮುಖಿ ಪಾತ್ರ ಮಾಡಿದ್ದರು. ಆ ಪಾತ್ರಕ್ಕಾಗಿ ಅವರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡರು. ಫಿಲ್ಮ್​ ಫೇರ್​ ಮತ್ತು ರಾಜ್ಯ ಪ್ರಶಸ್ತಿಯೂ ಅವರ ಮುಡಿಗೇರಿತು. ಆ ಬಳಿಕ ಸಂಚಾರಿ ವಿಜಯ್​ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡರು.

ಇದನ್ನೂ ಓದಿ: ಸದನದಲ್ಲೂ ಚರ್ಚೆ ಆಯ್ತು ಸಂಚಾರಿ ವಿಜಯ್​ ಸಾಧನೆ; ಹಾಡಿ ಹೊಗಳಿದ ಸಿದ್ದರಾಮಯ್ಯ

ರಾಷ್ಟ್ರ ಪ್ರಶಸ್ತಿ ಸಿಕ್ಕ ನಂತರ ಸಂಚಾರಿ ವಿಜಯ್​ ಹೆಚ್ಚು ಬ್ಯುಸಿ ಆದರು. ಸಾಲು ಸಾಲು ಅವಕಾಶಗಳು ಅವರನ್ನು ಹುಡುಕಿಕೊಂಡ ಬಂದವು. ಹಲವು ಬಗೆಯ ಪಾತ್ರಗಳ ಮೂಲಕ ಜನರನ್ನು ಅವರು ರಂಜಿಸಿದರು. ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗಕ್ಕೆ ಅವರಿಂದ ಸಿಗಬೇಕಾದ ಕೊಡುಗೆ ಇನ್ನೂ ಸಾಕಷ್ಟಿತ್ತು. ಅಷ್ಟರಲ್ಲಾಗಲೇ ಅವರು ಇಹಲೋಕ ತ್ಯಜಿಸಿದ್ದು ತೀರಾ ನೋವಿನ ಸಂಗತಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Wed, 15 June 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ