AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇಲೊಬ್ಬ ಮಾಯಾವಿ’ಗಾಗಿ ಪ್ರಾಣವನ್ನೂ ಲೆಕ್ಕಿಸದೇ ನೀರಿನಲ್ಲಿ ಸಾಹಸ ಮಾಡಿದ್ದ ಸಂಚಾರಿ ವಿಜಯ್​

Melobba Maayavi: ಹರಿಯುವ ನೀರಿನಲ್ಲಿ ‘ಮೇಲೊಬ್ಬ ಮಾಯಾವಿ’ ಶೂಟಿಂಗ್​ ನಡೆಯುತ್ತಿತ್ತು. ಸ್ವಲ್ಪವೇ ಯಾಮಾರಿದ್ರೂ ಕೂಡ ಅಂದೇ ಸಂಚಾರಿ ವಿಜಯ್​ ಅವರ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಆ ದೃಶ್ಯದ ಶೂಟಿಂಗ್​ ವೇಳೆ ಎಲ್ಲರೂ ಬೆಚ್ಚಿ ಬಿದ್ದಿದ್ದರು.

‘ಮೇಲೊಬ್ಬ ಮಾಯಾವಿ’ಗಾಗಿ ಪ್ರಾಣವನ್ನೂ ಲೆಕ್ಕಿಸದೇ ನೀರಿನಲ್ಲಿ ಸಾಹಸ ಮಾಡಿದ್ದ ಸಂಚಾರಿ ವಿಜಯ್​
ಸಂಚಾರಿ ವಿಜಯ್​
TV9 Web
| Updated By: ಮದನ್​ ಕುಮಾರ್​|

Updated on: Jun 24, 2021 | 1:13 PM

Share

ನಟ ಸಂಚಾರಿ ವಿಜಯ್​ ಅವರನ್ನು ಕಳೆದುಕೊಂಡು ಸ್ಯಾಂಡಲ್​ವುಡ್​ ಬಡವಾಗಿದೆ. ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಈ ಅಪ್ಪಟ ಕಲಾವಿದ ರಸ್ತೆ ಅಪಘಾತಕ್ಕೆ ಬಲಿ ಆಗಿದ್ದು ನೋವಿನ ಸಂಗತಿ. ನಿಧನರಾಗುವುದಕ್ಕೂ ಮುನ್ನ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು. ಬೇರೆ ಬೇರೆ ಪಾತ್ರಗಳ ಮೂಲಕ ಜನರನ್ನು ರಂಜಿಸುತ್ತಿದ್ದರು. ಸಿಕ್ಕ ಪಾತ್ರಕ್ಕೆ ನ್ಯಾಯ ಒದಗಿಸಬೇಕು ಎಂಬುದು ಅವರ ಮೊದಲ ಆಶಯ ಆಗಿತ್ತು. ಅದಕ್ಕಾಗಿ ಎಂಥ ರಿಸ್ಕ್​ ಬೇಕಿದ್ದರೂ ತೆಗೆದುಕೊಳ್ಳಲು ಅವರು ತಯಾರಾಗಿದ್ದರು. ಆ ಮಾತಿಗೆ ಉದಾಹರಣೆ ಎಂದರೆ ಮೇಲೊಬ್ಬ ಮಾಯಾವಿ ಸಿನಿಮಾದ ಒಂದು ದೃಶ್ಯ.

ನವೀನ್​ ಕೃಷ್ಣ ನಿರ್ದೇಶನದ ಮೇಲೊಬ್ಬ ಮಾಯಾವಿ ಸಿನಿಮಾದಲ್ಲಿ ಸಂಚಾರಿ ವಿಜಯ್​ ಪ್ರಮುಖ ಪಾತ್ರ ಮಾಡಿದ್ದರು. ಇದೇ ಸಿನಿಮಾದಲ್ಲಿ ಬಿಗ್​ ಬಾಸ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್​ ಕೂಡ ಅಭಿನಯಿಸಿದ್ದಾರೆ. ಆ ಚಿತ್ರ ಇನ್ನೂ ತೆರೆಕಂಡಿಲ್ಲ. ಕೇವಲ ಟ್ರೇಲರ್​ ಮತ್ತು ಹಾಡುಗಳ ಮೂಲಕ ಕುತೂಹಲ ಮೂಡಿಸಿದೆ. ‘ಮೇಲೊಬ್ಬ ಮಾಯಾವಿ’ ಶೂಟಿಂಗ್​ ವೇಳೆ ಸಂಚಾರಿ ವಿಜಯ್​ ಅವರು ಪ್ರಾಣವನ್ನೇ ಪಣಕ್ಕಿಟ್ಟು ಸಾಹಸ ಮಾಡಿದ್ದರು.

ಹರಿಯುವ ನೀರಿನಲ್ಲಿ ಒಂದು ದೃಶ್ಯವನ್ನು ಚಿತ್ರೀಕರಿಸಲಾಗುತ್ತಿತ್ತು. ನದಿ ನೀರಿನ ಸುಳಿಯ ಪಕ್ಕದಲ್ಲೇ ಸಂಚಾರಿ ವಿಜಯ್​ ಅವರು ಶೀರ್ಷಾಸನ ಹಾಕಿದ್ದರು. ಪ್ರಾಣವನ್ನೂ ಲೆಕ್ಕಿಸದೇ ನದಿಯಲ್ಲಿ ಪಲ್ಟಿ ಹೊಡೆದಿದ್ದರು. ಸ್ವಲ್ಪವೇ ಯಾಮಾರಿದ್ರೂ ಕೂಡ ಅಂದೇ ಅವರ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಆ ದೃಶ್ಯದ ಶೂಟಿಂಗ್​ ವೇಳೆ ಎಲ್ಲರೂ ಬೆಚ್ಚಿ ಬಿದ್ದಿದ್ದರು. ಪಾತ್ರಕ್ಕಾಗಿ ಸಂಚಾರಿ ವಿಜಯ್​ ತೋರಿಸುತ್ತಿದ್ದ ಬದ್ಧತೆ ಕಂಡು ಸೆಟ್​ನಲ್ಲಿ ಇದ್ದವರೆಲ್ಲ ಅಚ್ಚರಿಪಟ್ಟಿದ್ದರು.

ಅಂದು ಚಿತ್ರೀಕರಣದ ವೇಳೆ ಏನಾಯ್ತು ಎಂಬುದನ್ನು ವಿವರಿಸುವಂತಹ ಮೇಕಿಂಗ್​ ವಿಡಿಯೋ ಈಗ ಲಭ್ಯವಾಗಿದೆ. ಈ ಸಿನಿಮಾ ಮಾತ್ರವಲ್ಲದೆ, ಅನೇಕ ವಿಶೇಷ ಚಿತ್ರಗಳಲ್ಲಿ ಸಂಚಾರಿ ವಿಜಯ್​ ನಟಿಸುತ್ತಿದ್ದರು. ಲಂಕೆ, ಅವಸ್ಥಾಂತರ, ಪಿರಂಗಿಪುರ, ಪುಕ್ಸಟ್ಟೆ ಲೈಫು, ತಲೆದಂಡ ಮುಂತಾದ ಸಿನಿಮಾಗಳು ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದ್ದು ದುಃಖದ ಸಂಗತಿ.

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು.

ಇದನ್ನೂ ಓದಿ:

ನಟ ಸಂಚಾರಿ ವಿಜಯ್​ಗೆ ಜಾತಿ ಭೇದ ಮಾಡಲಾಗಿತ್ತು ಎಂಬ ಆರೋಪ ಸುಳ್ಳು; ಸಹೋದರ ವಿರೂಪಾಕ್ಷ ಸ್ಪಷ್ಟನೆ

​ಸಂಚಾರಿ ವಿಜಯ್​ ಬಗ್ಗೆ ಸುಳ್ಳುಗಳ ಸರಮಾಲೆ? ತಪ್ಪು ಮಾಹಿತಿ ಹಬ್ಬಿಸುವವರಿಗೆ ಲಿಂಗದೇವರು ಧಿಕ್ಕಾರ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ