Sanchari Vijay Funeral: ‘ದಯವಿಟ್ಟು ಸಂಚಾರಿ ವಿಜಯ್ ಮುಖ ತೋರಿಸಿ’; ಮಧ್ಯೆ ರಸ್ತೆಯಲ್ಲಿ ಅಭಿಮಾನಿಗಳ ಕೂಗು

ಮದನ್​ ಕುಮಾರ್​
|

Updated on: Jun 15, 2021 | 4:06 PM

Sanchari Vijay: ಸಂಚಾರಿ ವಿಜಯ್​ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯುತ್ತಿದ್ದ ವಾಹನ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ತಲುಪುತ್ತಿದ್ದಂತೆಯೇ ಅಲ್ಲಿನ ಜನರು ವಿಜಯ್​ ಅವರ ಅಂತಿಮ ದರ್ಶನ ಪಡೆಯಲು ಮುಗಿಬಿದ್ದರು. ಒಂದೇ ಒಂದು ಬಾರಿಗೆ ನಮಗೆ ಮುಖ ತೋರಿಸಿ ಎಂದು ಮನವಿ ಮಾಡಿಕೊಂಡರು.

ರಸ್ತೆ ಅಪಘಾತದಲ್ಲಿ ನಿಧನರಾದ ಸಂಚಾರಿ ವಿಜಯ್​ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಪಂಚನಹಳ್ಳಿಗೆ ಕರೆದೊಯ್ಯಲಾಯಿತು. ಇಡೀ ಕರ್ನಾಟಕದಲ್ಲಿ ಅವರು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಹಾಗಾಗಿ ಅವರನ್ನು ಅಂತಿಮವಾಗಿ ನೋಡಬೇಕು ಎಂಬ ಉದ್ದೇಶದಿಂದ ಸಾವಿರಾರು ಅಭಿಮಾನಿಗಳು ಕಾದು ಕುಳಿತಿದ್ದರು. ಮೃತದೇಹವನ್ನು ಕೊಂಡೊಯ್ಯುತ್ತಿದ್ದ ವಾಹನ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ತಲುಪುತ್ತಿದ್ದಂತೆಯೇ ಅಲ್ಲಿನ ಜನರು ವಿಜಯ್​ ಅವರ ಅಂತಿಮ ದರ್ಶನ ಪಡೆಯಲು ಮುಗಿಬಿದ್ದರು.

ಒಂದೇ ಒಂದು ಬಾರಿಗೆ ನಮಗೆ ಮುಖ ತೋರಿಸಿ ಎಂದು ಮನವಿ ಮಾಡಿಕೊಂಡರು. ಕಡೆಗೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಹುಳಿಯಾರು ಪೊಲೀಸ್ ಠಾಣೆಯ ಬಳಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಅಭಿಮಾನಿಗಳು ಭಾವುಕರಾಗಿ ಸಂಚಾರಿ ವಿಜಯ್​ಗೆ ವಿದಾಯ ಹೇಳಿದರು. ಮಧ್ಯಾಹ್ನ 3.45ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.

ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರು ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಕಡೆಗೂ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾದರು. ಅವರ ಅಂಗಾಂಗಳನ್ನು ದಾನ ಮಾಡಲಾಯಿತು.

ಇದನ್ನೂ ಓದಿ:

Sanchari Vijay: ಸಂಚಾರಿ ವಿಜಯ್​ಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ‘ನಾನು ಅವನಲ್ಲ ಅವಳು’ ಚಿತ್ರದ ತೆರೆ ಹಿಂದಿನ ಇಂಟರೆಸ್ಟಿಂಗ್​ ಕಥೆ

Sanchari Vijay Death: ಕಣ್ಣೀರು ಹಾಕುತ್ತ ನಟ ಸಂಚಾರಿ ವಿಜಯ್ ಬಗ್ಗೆ ಏನು ಹೇಳುತ್ತಿದೆ ಇಡೀ ಸ್ಯಾಂಡಲ್​ವುಡ್​?