Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay Funeral: ಗೆಳೆಯನ ತೋಟದಲ್ಲಿ ಮಣ್ಣಾದ ಸಂಚಾರಿ ವಿಜಯ್

ರಾಜೇಶ್ ದುಗ್ಗುಮನೆ
|

Updated on: Jun 15, 2021 | 4:18 PM

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅಂತ್ಯಸಂಸ್ಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂಡು ತಾಲೂಕಿನ ಪಂಚನಹಳ್ಳಿಯಲ್ಲಿ ಪೂರ್ಣಗೊಂಡಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಅಂತ್ಯಸಂಸ್ಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂಡು ತಾಲೂಕಿನ ಪಂಚನಹಳ್ಳಿಯಲ್ಲಿ ಪೂರ್ಣಗೊಂಡಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು. ಸಚಿವ ಮಾಧುಸ್ವಾಮಿ, ಮಾಜಿ ಶಾಸಕ ವೈಎಸ್​ವಿ ದತ್ತ ಸರ್ಕಾರದ ಪರವಾಗಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಪಾರ್ಥಿವ ಶರೀರವನ್ನು ಸಮಾಧಿಯೊಳಗೆ ಇರಿಸಿ ಸಂಚಾರಿ ವಿಜಯ್ ಅವರ ಸಹೋದರರು ಪೂಜೆ ಸಲ್ಲಿಸಿದರು. ವಿಶೇಷ ಎಂದರೆ, ಅವರ ಗೆಳೆಯನ ತೋಟದಲ್ಲೇ ಸಂಚಾರಿ ವಿಜಯ್​ ಮಣ್ಣಾದರು. ಜೂನ್​ 12ರಂದು ನಡೆದ ಅಪಘಾತದಲ್ಲಿ ವಿಜಯ್​ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.