Sanchari Vijay Death: ನಟ ಸಂಚಾರಿ ವಿಜಯ್ ನಿಧನ; ಪ್ರತಿಭಾನ್ವಿತ ಕಲಾವಿದನ ದುರಂತ ಅಂತ್ಯ

Sanchari Vijay Death news: ಶಸ್ತ್ರ ಚಿಕಿತ್ಸೆ ನಡೆದು ಹಲವು ಗಂಟೆಗಳು ಕಳೆದರೂ ಸಂಚಾರಿ ವಿಜಯ್​ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಪರಿಣಾಮವಾಗಿ ಅವರು​ ಮೃತರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ.

Sanchari Vijay Death: ನಟ ಸಂಚಾರಿ ವಿಜಯ್ ನಿಧನ; ಪ್ರತಿಭಾನ್ವಿತ ಕಲಾವಿದನ ದುರಂತ ಅಂತ್ಯ
ಸಂಚಾರಿ ವಿಜಯ್​
Follow us
ಮದನ್​ ಕುಮಾರ್​
|

Updated on: Jun 14, 2021 | 2:11 PM

ರಸ್ತೆ ಅಪಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಇಂದು (ಜೂ.14) ನಿಧನರಾಗಿದ್ದಾರೆ. ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. 48 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಪರಿಣಾಮವಾಗಿ ಸಂಚಾರಿ ವಿಜಯ್​ ಮೃತರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಅವರಿಗೆ ಆಕ್ಸಿಡೆಂಟ್​ ಆಗಿತ್ತು. ಸ್ನೇಹಿತ ನವೀನ್​ ಅವರ ಬೈಕ್​ನಲ್ಲಿ ಹಿಂಬದಿ ಕುಳಿತು ವಿಜಯ್​ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರ ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಮೆದುಳಿನ ಬಲಭಾಗದಲ್ಲಿ ಹೆಚ್ಚು ಹೊಡೆತ ಬಿದ್ದು ತೀವ್ರ ರಕ್ತಸ್ರಾವ ಆಗಿತ್ತು. ಭಾನುವಾರ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಸರ್ಜರಿ ಮಾಡಿದೆವು. ಅದಾಗಿ 36 ಗಂಟೆ ಕಳೆದರೂ ಅವರ ಬ್ರೇನ್​ ಕಡೆಯಿಂದ ಪ್ರತಿಕ್ರಿಯೆ ಇರಲಿಲ್ಲ. ಮೆದುಳಿನ ಕೆಲಸಗಳು ನಿಂತು ಹೋಯಿತು. ಇದನ್ನು ಬ್ರೇನ್​ ಫೇಲ್ಯೂರ್​ ಎನ್ನುತ್ತೇವೆ’ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ವೈದ್ಯರ ಎಲ್ಲ ಪ್ರಯತ್ನಗಳು ವಿಫಲವಾಗಿವೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಕಿಚ್ಚ ಸುದೀಪ್​ ಅವರು ನೆರವಿನ ಹಸ್ತ ಚಾಚಿದ್ದರು. ವಿಜಯ್​ಗೆ ರಾತ್ರೋರಾತ್ರಿ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿತ್ತು. ವಿಜಯ್​ ಬೇಗ ಗುಣಮುಖರಾಗಲಿ ಎಂದು ಇಡೀ ಕನ್ನಡ ಚಿತ್ರರಂಗದ ಅನೇಕರು ಪ್ರಾರ್ಥಿಸುತ್ತಿದ್ದರು. ಆದರೆ ಆ ಯಾವ ಪ್ರಾರ್ಥನೆಗಳೂ ಫಲಿಸಲಿಲ್ಲ. ವೈದ್ಯರು ಪ್ರಯತ್ನಿಸಿದರೂ ಅವರು ಬದುಕಿ ಉಳಿಯಲಿಲ್ಲ.

ಸಂಚಾರಿ ವಿಜಯ್​ ಬ್ರೇನ್​ ಫೇಲ್ಯೂರ್​ ಆದ ಬಳಿಕ ಅವರ ಅಂಗಾಂಗ ದಾನಕ್ಕೆ ಕುಟುಂಬದವರು ಸಮ್ಮತಿ ನೀಡಿದರು. ಇಂದು ಮಧ್ಯಾಹ್ನ 1.15ಕ್ಕೆ ವೈದ್ಯರು ಅಂಗಾಂಗ ದಾನದ ಪ್ರೋಟೋಕಾಲ್​ ಪ್ರಕಾರ ಕಾರ್ಯ ನಿರ್ವಹಿಸುತ್ತಾರೆ ಎಂಬುದು ಹೆಲ್ತ್​ ಬುಲೆಟಿನ್​ ಮೂಲಕ ಗೊತ್ತಾಗಿದೆ. ಹಾಗಾಗಿ, ವಿಜಯ್​ ನಿಧನರಾಗಿರುವುದು ಬಹುತೇಕ ಖಚಿತಗೊಂಡಂತಾಗಿದೆ. ವೈದ್ಯರು ಮತ್ತು ಕುಟುಂಬದವರು ಸಾರ್ವಜನಿಕವಾಗಿ ಮಾಹಿತಿ ನೀಡುವುದು ಬಾಕಿ ಇದೆ.

ಮುಖ್ಯಮಂತ್ರಿ ಯಡಿಯೂರಪ್ಪ, ನಟ ಕಿಚ್ಚ ಸುದೀಪ್ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ:

Sanchari Vijay: ಸಂಚಾರಿ ವಿಜಯ್ ಅಪಘಾತದ ಸುದ್ದಿ ತಿಳಿದ ತಕ್ಷಣ ಸಹಾಯ ಮಾಡಿದ ಸುದೀಪ್; ಕೂಡಲೇ ನಡೆಯಿತು ಸರ್ಜರಿ

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್