ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಸಾವಿಗೆ ಕಾರಣವಾಯ್ತು

Sanchari Vijay: ಬೈಕ್ ಸ್ಕಿಡ್​ ಆಗಿ ಬಿದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ನವೀನ್​ ಎಂಬುವವರು ಬೈಕ್​ ಓಡಿಸುತ್ತಿದ್ದರು. ವಿಜಯ್​ ಹಿಂದೆ ಕೂತಿದ್ದರು. ಆಗ ಅಪಘಾತ ಸಂಭವಿಸಿದೆ.

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಸಾವಿಗೆ ಕಾರಣವಾಯ್ತು
ಸಂಚಾರಿ ವಿಜಯ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Aug 10, 2021 | 11:20 AM

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಜನಸಾಮಾನ್ಯರಿಗೆ ಸಹಾಯ ಮಾಡಿದ್ದಾರೆ. ಅದೇ ರೀತಿ ನಟ ಸಂಚಾರಿ ವಿಜಯ್​ ಕೂಡ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದರು. ಅವರು, ಅಪಘಾತಕ್ಕೆ ಒಳಗಾಗುವುದಕ್ಕೂ ಮೊದಲು ಫುಡ್​ ಕಿಟ್​ ನೀಡುವುದಕ್ಕೆ ತೆರಳಿದ್ದರಂತೆ. ಅಲ್ಲಿಂದ ಬರುವಾಗಲೇ ಈ ಅಪಘಾತ ಸಂಭವಿಸಿದೆ ಅನ್ನೋದು ಬೇಸರದ ಸಂಗತಿ.

ಈ ಬಗ್ಗೆ ಮಾತನಾಡಿರುವ ವಿಜಯ್ ಸಹೋದರ ಸಿದ್ಧೇಶ್ ಕುಮಾರ್, ವಿಜಯ್​ ನಮ್ಮ ಕುಟುಂಬದ ಆಧಾರಸ್ತಂಭ. ಆತ ಸುಮ್ಮನೆ ಕೂರುವ ವ್ಯಕ್ತಿ ಅಲ್ಲವೇ ಅಲ್ಲ. ಲಾಕ್ ಡೌನ್ ಸಮಯದಲ್ಲಿ ಸಾಕಷ್ಟು ಸಮಾಜಮುಖಿ ಕೆಲಸ ಮಾಡುತ್ತಿದ್ದ. ಶನಿವಾರವೂ (ಜೂನ್​ 12) ಅಂತಹುದೇ ಕೆಲಸ ಮುಗಿಸಿ ಬರುವಾಗ ಅವಘಡವಾಗಿದೆ. ವೈದ್ಯರು 48 ಗಂಟೆ ಅಬ್ಸರ್ವರ್ವೇಷನ್​​​ಲಿ ಇರಿಸಿದ್ದಾರೆ. ನಾಳೆಗೆ 48 ಗಂಟೆ ಕಂಪ್ಲೀಟ್ ಆಗಲಿದೆ. ದಯವಿಟ್ಟು ನನ್ನ ಸಹೋದರನಿಗಾಗಿ ಪ್ರಾರ್ಥಿಸಿ’ ಎಂದು ಕೋರಿದ್ದಾರೆ.

ಇನ್ನು, ಬೈಕ್ ಸ್ಕಿಡ್​ ಆಗಿ ಬಿದ್ದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ನವೀನ್​ ಎಂಬುವವರು ಬೈಕ್​ ಓಡಿಸುತ್ತಿದ್ದರು. ವಿಜಯ್​ ಹಿಂದೆ ಕೂತಿದ್ದರು. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ಸ್ಕಿಡ್ ಆದ ಪರಿಣಾಮ ಬೈಕ್ ರಸ್ತೆಯ ಎಡಬದಿಯಲ್ಲಿದ್ದ ಪೋಲ್​ಗೆ ಡಿಕ್ಕಿಯಾಗಿದೆ. ಈ ವೇಳೆ ವಿಜಯ್ ಬೈಕ್ ನಿಂದ ಹಾರಿ ಬಿದ್ದಿದ್ದಾರೆ. ಸ್ಥಳೀಯರ ಸಹಾಯದಿಂದ ಸಮೀಪದಲ್ಲಿದ್ದ ಅಪಾರ್ಟ್ಮೆಂಟ್​​ನಲ್ಲಿ ಬೈಕ್ ಇರಿಸಿ, ಇಬ್ಬರೂ ಗಾಯಾಳುಗಳನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ​ ಅವರು ಹೆಲ್ಮೆಟ್​ ಧರಿಸಿದ್ದರೆ ಅವರ ತಲೆಗೆ ಇಷ್ಟೊಂದು ಪೆಟ್ಟು ಬೀಳುತ್ತಿರಲಿಲ್ಲ ಎನ್ನುವ ಮಾತು ಕೇಳಿ ಬಂದಿದೆ.

2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ನಾ’ ಸಿನಿಮಾ ಮೂಲಕ ಸಂಚಾರಿ ವಿಜಯ್ ಚಿತ್ರರಂಗಕ್ಕೆ ಕಾಲಿಟ್ಟರು. 2015ರಲ್ಲಿ ತೆರೆಗೆ ಬಂದ ‘ನಾನು ಅವನಲ್ಲ.. ಅವಳು’ ಸಿನಿಮಾ ಅವರ ಖ್ಯಾತಿಯನ್ನು ದುಪ್ಪಟ್ಟು ಮಾಡಿತ್ತು. ಈ ಸಿನಿಮಾದಲ್ಲಿ ಅವರ ನಟನೆಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳು ಸಿಕ್ಕಿವೆ. ಇದಾದ ನಂತರದಲ್ಲಿ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರು. ಸದ್ಯ, ಎರಡು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಸಂಚಾರಿ ವಿಜಯ್ ಅಪಘಾತಗೊಂಡಿರುವ ವಿಚಾರ ಕೇಳಿ ಅಭಿಮಾನಿಗಳು ಹಾಗೂ ಸ್ಯಾಂಡಲ್ವುಡ್ ಮಂದಿಯಲ್ಲಿ ಆತಂಕ ಮನೆ ಮಾಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Sanchari Vijay: ನಟ ಸಂಚಾರಿ ವಿಜಯ್​​ಗೆ ಬೈಕ್ ಅಪಘಾತ; ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಯಾಂಡಲ್​ವುಡ್​ ಹೀರೋ

Published On - 6:31 pm, Sun, 13 June 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ