Sanchari Vijay: ಬದುಕಿನ ಸಂಚಾರ ಮುಗಿಸಿದ ಸಂಚಾರಿ ವಿಜಯ್​ಗೆ ಇಂದು 39 ನೇ ವರ್ಷದ ಹುಟ್ಟು ಹಬ್ಬ; ಸ್ನೇಹಿತನ ನೆನಪಿಗೆ ಕೆಲ ಕಾರ್ಯಕ್ರಮ

Happy Birthday Sanchari Vijay: ಸಿನಿಮಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯ ಕನಸು ಕಂಡಿದ್ದ ಸಂಚಾರಿ, ಜೂನ್ 15 ರಂದು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯ್ ನೆನಪಿಗಾಗಿ ಅವರ ಸ್ನೇಹಿತರು ಇಂದು ಕೆಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Sanchari Vijay: ಬದುಕಿನ ಸಂಚಾರ ಮುಗಿಸಿದ ಸಂಚಾರಿ ವಿಜಯ್​ಗೆ ಇಂದು 39 ನೇ ವರ್ಷದ ಹುಟ್ಟು ಹಬ್ಬ; ಸ್ನೇಹಿತನ ನೆನಪಿಗೆ ಕೆಲ ಕಾರ್ಯಕ್ರಮ
ಸಂಚಾರಿ ವಿಜಯ್​
Follow us
TV9 Web
| Updated By: sandhya thejappa

Updated on:Jul 17, 2021 | 8:49 AM

ಬೆಂಗಳೂರು: ಬೈಕ್ ಅಪಘಾತದಲ್ಲಿ ಮರಣ ಹೊಂದಿದ್ದ ಸಂಚಾರಿ ವಿಜಯ್ಗೆ ಇಂದು (ಜುಲೈ 17) 39 ನೇ ವರ್ಷದ ಹುಟ್ಟು ಹಬ್ಬ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟನಾದ ವಿಜಯ್ ತನ್ನದೇ ಆದ ನಟನೆ ಮೂಲಕ ಜನರ ಮನಸು ಗೆದ್ದಿದ್ದರು. ಸಿನಿಮಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯ ಕನಸು ಕಂಡಿದ್ದ ಸಂಚಾರಿ, ಜೂನ್ 15 ರಂದು ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯ್ ನೆನಪಿಗಾಗಿ ಅವರ ಸ್ನೇಹಿತರು ಇಂದು ಕೆಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಇಂದು ವಿಜಯ್ ನೆನಪಿಗಾಗಿ ಸ್ನೇಹಿತರ ಬಳಗ ಪ್ರಾಣಿ ಪಕ್ಷಿಗಳಿಗೆ ಗೂಡೊಂದನ್ನು ಸಿದ್ಧಮಾಡಿದ್ದು, ಮಧ್ಯಾಹ್ನ ಎಜಿಎಸ್ ಲೇಔಟ್​ನಲ್ಲಿ ಗೂಡು ಉದ್ಘಾಟನೆ ಮಾಡಲಿದೆ. ಅಲ್ಲದೇ ‘ಸಂಚಾರ ಮುಗಿಸಿದ ಪ್ರೀತಿಯ ಕಂದ.. ಚಂದನವನದ ನಟನ ಪ್ರಚಂಡ.. ನಿನ್ನೊಳಗೆ ಉರಿದಿತ್ತು ನೋವಿನ ಕೆಂಡ.. ದೇವರು ನಿನ್ನ ಪಡೆದಿದ್ದು ತಪ್ಪು ತಲೆದಂಡ..’ ಎನ್ನುವ ಸಾಲುಗಳಿಂದ ಸ್ನೇಹಿತರ ಬಳಗ, ಸಂಚಾರಿ ವಿಜಯ್ ನಿಜ ಬದುಕಿನ ಸಾರಾಂಶ ಹೇಳಿ ಅವರಿಗೆ ನಟನೆ ವಿಡಿಯೋ ಅರ್ಪಿಸಿದೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಈ ವರ್ಷ ತಮ್ಮ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವ ಪ್ಲಾನ್ ಮಾಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಜೂನ್ 15 ರಂದು ಸಂಭವಿಸಿದ ಅಪಘಾತದಲ್ಲಿ ಸಂಚಾರಿ ವಿಜಯ್ ಸಾವನ್ನಪ್ಪಿದ್ದಾರೆ. ಇಂದು ಅವರ 39 ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆ ‘ಅನಂತವಾಗಿರು’ ಅನ್ನೋ ಪುಸ್ತಕವೊಂದನ್ನ ಸ್ನೇಹಿತರ ಬಳಗ ಹೊರತಂದಿದೆ.

ಅಭಿಮಾನಿಗಳಿಗೆ ಹೊಸ ಗಿಫ್ಟ್ ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ ‘ಲಂಕೆ’ ಚಿತ್ರದಲ್ಲಿ ಸಂಚಾರಿ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಚಾರಿ ವಿಜಯ್ ಹುಟ್ಟು ಹಬ್ಬದ ನೆನಪಿಗಾಗಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ.

ಇದನ್ನೂ ಓದಿ

ಸಂಚಾರಿ ವಿಜಯ್​ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ

ಸಂಚಾರಿ ವಿಜಯ್ ಜನ್ಮದಿನಕ್ಕೂ ಮೊದಲೇ ಅಭಿಮಾನಿಗಳಿಗೆ ಸಿಕ್ತು ವಿಶೇಷ ಗಿಫ್ಟ್​

(Sanchari Vijay’s 39th birthday today and his friends have hosted programs)

Published On - 8:46 am, Sat, 17 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್